Homeಮುಖಪುಟನಂದಿಗ್ರಾಮ ಚುನಾವಣೆಯ ಇವಿಎಂ ಸಂರಕ್ಷಿಸಿ ಎಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

ನಂದಿಗ್ರಾಮ ಚುನಾವಣೆಯ ಇವಿಎಂ ಸಂರಕ್ಷಿಸಿ ಎಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಘಟನೆಗಳಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ವಿಚಾರಣೆ ನಡೆಯುತ್ತಿರುವ ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರು  ಚುನಾವಣಾ ಆಯೋಗಕ್ಕೆ ನೋಟಿಸ್ ಕಳುಹಿಸಲಿದ್ದಾರೆ.

ಈ ಪ್ರಕರಣವನ್ನು ಆನ್‌ಲೈನ್‌ನಲ್ಲಿ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಶಂಪಾ ಸರ್ಕಾರ್ ಅವರು ಆಯೋಗಕ್ಕೆ ಮತ್ತು ಚುನಾವಣಾ ರಿಟರ್ನಿಂಗ್ ಅಧಿಕಾರಿಗೆ ನೋಟಿಸ್ ನೀಡಬೇಕು ಎಂದು ಹೇಳಿದ್ದಾರೆ. ಜೊತೆಗೆ  ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು (EVMs) ಸಂರಕ್ಷಿಸಬೇಕು ಎಂದು ಆದೇಶಿಸಿದ್ದಾರೆ.

ಇತ್ತಿಚೆಗೆ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಆದರೆ ಅವರ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಬೇರೆಡೆ ದೊಡ್ಡ ಜಯ ಸಾಧಿಸಿದೆ. ಅನೇಕ ತಿರುವುಗಳನ್ನು ಕಂಡು, ನಿಧಾನಗತಿಯ ಮತಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 2,000 ಕ್ಕಿಂತ ಕಡಿಮೆ ಮತಗಳಿಂದ ಸೋತಿದ್ದಾರೆ ಎಂದು ಘೋಷಿಸಲಾಗಿತ್ತು.

ಇದನ್ನೂ ಓದಿ: ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

ಈ ತೀರ್ಪಿನ ವಿರುದ್ಧ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಮತಗಳ ಮರು ಎಣಿಕೆಗೆ ಮನವಿ ಮಾಡಿದ್ದರು. ಆದರೆ, ಚುನಾವಣಾ ಆಯೋಗ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಮಮತಾ, ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬುಧವಾರ ಆನ್‌ಲೈನ್ ವಿಚಾರಣೆಗೆ ಹಾಜರಾಗಿದ್ದ ಮಮತಾ ಬ್ಯಾನರ್ಜಿ, ಸುವೇಂದು ಅಧಿಕಾರಿ ವಿರುದ್ಧ ಲಂಚ, ದ್ವೇಷ ಮತ್ತು ದ್ವೇಷದ ಪ್ರಚಾರ, ಬೂತ್ ಆಕ್ರಮಣ ಮತ್ತು ಧರ್ಮದ ಆಧಾರದ ಮೇಲೆ ಮತಗಳನ್ನು ಬೇಡುವುದು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 12 ರಂದು ನಡೆಯಲಿದೆ.

ಇನ್ನು ಈ ಮೊದಲು ನಂದಿಗ್ರಾಮ ಚುನಾವಣೆಯ ವಿಚಾರಣೆ ನಡೆಸುತ್ತಿದ್ದ ಕೊಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಕೌಶಿಕ್ ಚಂದಾ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಇದು ಪಕ್ಷಪಾತಕ್ಕೆ ಕಾರಣವಾಗಬಹುದು ಎಂದು ಉಲ್ಲೇಖಿಸಿ ಬದಲಾಯಿಸುವಂತೆ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದರು.

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ, ಪ್ರಕರಣದಿಂದ ಹೊರ ಬಂದಿದ್ದ ನ್ಯಾಯಮೂರ್ತಿ ಕೌಶಿಕ್ ಚಂದಾ,  ಇದು ಮಮತಾ ಬ್ಯಾನರ್ಜಿ ಅವರ ನ್ಯಾಯಾಧೀಶರನ್ನು ಕೆಣಕುವ ಪೂರ್ವಯೋಜಿತ ಕ್ರಮ ಮತ್ತು ಅವರ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿ, ನಂದಿಗ್ರಾಮ ಪ್ರಕರಣದಿಂದ ಹಿಂದೆ ಸರಿದ ಜಸ್ಟಿಸ್ ಕೌಶಿಕ್ ಚಂದಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...