Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

- Advertisement -
- Advertisement -

ಕಳೆದ ವಾರ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು, ಪ್ರಧಾನಿಗೆ-ಅದಾನಿಗೆ ಏನು ಸಂಬಂಧ ಎಂದು ಪ್ರಶ್ನಿಸಿ ಮೋದಿಯವರ ಬಗ್ಗೆ ಹೇಳಿಕೆ ನೀಡಿದ್ದರು. ಇದೀಗ ಲೋಕಸಭೆ ಸೆಕ್ರೆಟರಿಯೇಟ್, ವಿಶೇಷ ಹಕ್ಕು ಉಲ್ಲಂಘನೆಯ ನೋಟಿಸ್‌ಗೆ ಉತ್ತರ ನೀಡುವಂತೆ  ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಕೇಳಿದೆ ಎಂದು ಎನ್‌ಡಿಟಿವಿ ಭಾನುವಾರ ವರದಿ ಮಾಡಿದೆ.

ಬಿಜೆಪಿ ನಾಯಕರಾದ ಪ್ರಲ್ಹಾದ್ ಜೋಶಿ ಮತ್ತು ನಿಶಿಕಾಂತ್ ದುಬೆಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಬುಧವಾರದೊಳಗೆ ಉತ್ತರ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್‌ಗೆ ಇದೀಗ ಸೂಚಿಸಲಾಗಿದೆ.

ಫೆಬ್ರವರಿ 7ರಂದು ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ, ”ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಗ್ರೂಪ್ ಪರವಾಗಿದ್ದಾರೆ” ಎಂದು ಆರೋಪಿಸಿದರು. ಅವರು, ಸೆಪ್ಟೆಂಬರ್‌ನಿಂದ ಜನವರಿವರೆಗೆ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವಾಗ ಸಾರ್ವಜನಿಕರು ಅದಾನಿ ಅವರ ಯಶಸ್ಸಿನ ಬಗ್ಗೆ ಮತ್ತು ಹಲವಾರು ಕ್ಷೇತ್ರಗಳಲ್ಲಿ ಅವರು ವ್ಯವಹಾರವನ್ನು ಹೇಗೆ ವಿಸ್ತರಿಸಲು ಸಾಧ್ಯವಾಯಿತು? ಎಂದು ಕೇಳಿದರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಅದಾನಿಯವರ ವ್ಯವಹಾರವು ಈಗ ಎಂಟರಿಂದ ಹತ್ತು ವಲಯಗಳಲ್ಲಿದೆ ಮತ್ತು ಅವರ ನಿವ್ವಳ ಮೌಲ್ಯವು 2014 ಮತ್ತು 2022 ರ ನಡುವೆ 8 ಶತಕೋಟಿಯಿಂದ 140 ಶತಕೋಟಿಗೆ ಹೇಗೆ ತಲುಪಿದೆ. ಭಾರತದ ಪ್ರಧಾನ ಮಂತ್ರಿಯೊಂದಿಗೆ ಅವರ [ಅದಾನಿ] ಸಂಬಂಧ ಏನು ಎಂದು ಯುವಕರು ನಮ್ಮನ್ನು ಕೇಳಿದರು” ಎಂದು ಗಾಂಧಿ ಹೇಳಿದರು.

ಇದನ್ನೂ ಓದಿ: ಅದಾನಿಗೂ ಪ್ರಧಾನಿ ಮೋದಿಗೂ ಇರುವ ಸಂಬಂಧವೇನು? ಸಂಸತ್ತಿನಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ಈ ವೇಳೆ ರಾಹುಲ್ ಗಾಂಧಿ ಅವರು ಒಂದು ಚಿತ್ರವನ್ನು ಹೊರತಗೆದರು. ಅದು, ಖಾಸಗಿ ಜೆಟ್‌ನಲ್ಲಿ ಉದ್ಯಮಿ ಅದಾನಿ ಮತ್ತು ಪ್ರಧಾನ ಮಂತ್ರಿ ಕುಳಿತಿರುವ ಚಿತ್ರವಾಗಿತ್ತು. “ಹಾಗಾದರೆ ಈ ಸಂಬಂಧ ಏನು?” ಎಂದು ರಾಹುಲ್ ಕೇಳಿದರು.

ಮರುದಿನ ಸದನದ ಕಲಾಪ ಆರಂಭವಾಗುತ್ತಿದ್ದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸ್ಪೀಕರ್‌ಗೆ ನಿಯಮಗಳ ಪ್ರಕಾರ ಯಾವುದೇ ಸಂಸದರು ಇನ್ನೊಬ್ಬರ ವಿರುದ್ಧ ಆರೋಪ ಮಾಡಲು ಬಯಸಿದರೆ ಮುಂಚಿತವಾಗಿ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದರು. ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಯಾವುದೇ ದಾಖಲೆ ಪುರಾವೆಗಳಿಲ್ಲದೆ ಮೋದಿಯವರ ಮೇಲೆ ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸುವ ಮೂಲಕ ಸದನವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದಲ್ಲಿ ಹದಿನೆಂಟು ಟೀಕೆಗಳನ್ನು ಮಾಡಿದ್ದರು ಅವೆಲ್ಲವೂ ಅದಾನಿಗೆ ಸಂಬಂಧಿಸಿವೆ.

ಸಂಸತ್ತಿನ ಬಜೆಟ್ ಅಧಿವೇಶನವು ಪದೇ ಪದೇ ಗದ್ದಲ ಗಲಾಟೆಗಳಿಂದಾಗಿ ಮುಂದೂಡಲಾಗುತ್ತಿದೆ. ಅದಾನಿ ಗ್ರೂಪ್‌ ಹಗರಣದ ಆರೋಪದ ಕುರಿತು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ ಆದರೆ ಸರ್ಕಾರ ಮಾತ್ರ ತನಿಖೆ ಬಗ್ಗೆಒಂದು ಪದವನ್ನು ಮಾತನಾಡುತ್ತಿಲ್ಲ.

ಜನವರಿ 24 ರಂದು ಅಮೇರಿಕನ್ ಕಿರು-ಮಾರಾಟಗಾರ ಹಿಂಡೆನ್‌ಬರ್ಗ್ ರಿಸರ್ಚ್‌ ವರದಿಯು, ಭಾರತದ ಎರಡನೇ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ನೇತೃತ್ವದ ಸಂಘಟಿತ ಸಂಸ್ಥೆಯು ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ವಂಚನೆ ಮಾಡಿದೆ ಎಂದು ಆರೋಪಿಸಿದೆ. ಈ ವರದಿ ಹೊರಬಂದ ಬಳಿಕ ಅದಾನಿ ಗ್ರೂಪ್ ಕಂಪನಿಗಳು ಸ್ಟಾಕ್ ಮಾರುಕಟ್ಟೆಗಳಲ್ಲಿ 100 ಶತಕೋಟಿಗಿಂತ ಹೆಚ್ಚಿನ ನಷ್ಟವನ್ನು ಅನುಭವಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...