Homeಕರ್ನಾಟಕಯತ್ನಾಳ್‌ಗೆ ನೋಟಿಸ್: 15 ದಿನದಲ್ಲಿ ಉತ್ತರಿಸುವಂತೆ ಬಿಜೆಪಿ ಹೈಕಮಾಂಡ್ ಆದೇಶ

ಯತ್ನಾಳ್‌ಗೆ ನೋಟಿಸ್: 15 ದಿನದಲ್ಲಿ ಉತ್ತರಿಸುವಂತೆ ಬಿಜೆಪಿ ಹೈಕಮಾಂಡ್ ಆದೇಶ

ಈ ಹಿಂದೆ ಬಿಜೆಪಿ ಮುಖಂಡರೊಬ್ಬರು, "ಬಿಜೆಪಿಯೊಳಗೆ ಉನ್ನತ ನಾಯಕರ ಬೆಂಬಲವಿಲ್ಲದೇ ಒಬ್ಬ ಶಾಸಕರು ಹೀಗೆಲ್ಲಾ ಹೇಳಿಕೆ ನೀಡಲು ಸಾಧ್ಯವಿಲ್ಲ" ಎಂದು ಹೇಳಿದ್ದರು

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದ ವಿಜಯಪುರದ ಬಿಜೆಪಿ ಶಾಸಕ ಮತ್ತು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದ್ದು, 15 ದಿನಗಳ ಒಳಗೆ ಉತ್ತರಿಸುವಂತೆ ಆದೇಶಿಸಿದೆ.

ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದ ಕಾರಣ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಎಂದು  ಬಸನಗೌಡ ಯತ್ನಾಳ್ ಯಡಿಯೂರಪ್ಪನವರ ವಿರುದ್ಧ ತೀಕ್ಷ್ಣವಾದ ಹೇಳಿಕೆಗಳನ್ನು ನೀಡುತ್ತಿದ್ದರು. ಜೊತೆಗೆ, ರಾಜ್ಯದಲ್ಲಿ ಮುಖ್ಯಮಂತ್ರಿಯವರನ್ನು ಬದಲಾವಣೆ ಮಾಡಲಾಗುತ್ತದೆ, ಉತ್ತರ ಕರ್ನಾಟಕ ಭಾಗದವರು ಮುಂದಿನ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದರು. ಇದರಿಂದ ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ಆಗಿತ್ತು.

ಇದನ್ನೂ ಓದಿ: ಸಿಎಂ ವಿರುದ್ಧ ಟೀಕೆ: ಯತ್ನಾಳ್‌ಗೆ ನೀಡಿದ್ದ ವೈಯಕ್ತಿಕ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ!

ಸಂಪುಟ ವಿಸ್ತರಣೆಯ ವೇಳೆ ಅಸಮಾಧಾನಗೊಂಡಿದ್ದ ಬಸನಗೌಡ ಯತ್ನಾಳ್ “ಸಿ.ಡಿ” ಬಾಂಬ್ ಸಿಡಿಸಿದ್ದರು. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೂ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಶಿಸ್ತು ಸಮಿತಿಗೆ ಪತ್ರ ಬರೆದಿದ್ದರು. ಹಾಗಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆದರೆ ಹೈಕಮಾಂಡ್‌ನ ಈ ಕ್ರಮವು ಕೇವಲ ತೋರಿಕೆಗೆ ಮಾತ್ರ ಎನಿಸುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ ಎಂಬುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ಹಿಂದೆ ಬಿಜೆಪಿ ಮುಖಂಡರೊಬ್ಬರು, “ಬಿಜೆಪಿಯೊಳಗೆ ಉನ್ನತ ನಾಯಕರ ಬೆಂಬಲವಿಲ್ಲದೆ ಒಬ್ಬ ಶಾಸಕರು ಹೀಗೆಲ್ಲಾ ಹೇಳಿಕೆ ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದರು. ಹಾಗಾಗಿ ಬಿಜೆಪಿ ಹೈಕಮಾಂಡ್‌ನ ಈ ಕ್ರಮವು ಕಣ್ಣೊರೆಸುವ ತಂತ್ರ ಎಂದು ಹಲವರು ಬಣ್ಣಿಸಿದ್ದಾರೆ.


ಇದನ್ನೂ ಓದಿ: ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...