Homeಮುಖಪುಟಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

ಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

- Advertisement -
- Advertisement -

ಟಿಕ್ರಿ ಗಡಿಯಲ್ಲಿ ದೆಹಲಿ ಪೊಲೀಸರು ಹಾಕಿರುವ ಫಲಕಗಳು ಪ್ರತಿಭಟನಾಕಾರರು ಮತ್ತು ಕೃಷಿ ಮುಖಂಡರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ‘ಶಾಸನಬದ್ಧ ಎಚ್ಚರಿಕೆ’ ಎಂಬ ಶೀರ್ಷಿಕೆಯಲ್ಲಿ, ಇವುಗಳಲ್ಲಿ ಹಿಂದಿ ಮತ್ತು ಪಂಜಾಬಿ ಭಾಷೆಗಳಲ್ಲಿ ಪಠ್ಯವಿದೆ: “ನಿಮ್ಮ ಸಭೆ ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ. ನೀವು ಇಲ್ಲಿಂದ ಚದುರಬೇಕೆಂದು ನಿಮಗೆ ಎಚ್ಚರಿಕೆ ನೀಡಲಾಗುತ್ತಿದೆ, ಇಲ್ಲದಿದ್ದರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.”
ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅವರ ಸಂಕಲ್ಪವನ್ನು ಇನ್ನಷ್ಟು ದೃಢಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಈಗ ಏಕಾಏಕಿ ಈ ಫಲಕಗಳನ್ನು ಹಾಕಿಲ್ಲ, ಜನವರಿ 26 ರ ಹಿಂಸಾಚಾರದ ನಂತರ ಈ ಫಲಕಗಳನ್ನು ಇರಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಹೊರ) ಸುಧಾನ್ಶು ಧಮಾ ಸ್ಪಷ್ಟೀಕರಣ ನೀಡಿದ್ದಾರೆ.

“ನಾವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಗಡಿಯ ಸಮೀಪ ಹಿಂಸಾಚಾರದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಂಕ್ಷನ್‌ಗಳಲ್ಲಿ ಬೋರ್ಡ್‌ಗಳನ್ನು ಹಾಕಿದ್ದೇವೆ. ಒಂದು ವೇಳೆ ರೈತರು ಮತ್ತೆ ಕಾನೂನನ್ನು ಉಲ್ಲಂಘಿಸಿದರೆ, ಅದು ಕಾನೂನುಬಾಹಿರ ಎಂದು ಅವರು ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತೀಯ ಕಿಸಾನ್ ಯುನಿಯನ್-ಬಿಕೆಯು ಉಗ್ರಾಹಣ್ ವಲಯದ ಹಿರಿಯ ಉಪಾಧ್ಯಕ್ಷ ಶಿಂಗರಾ ಸಿಂಗ್ ಮಾನ್ ಮಾತನಾಡಿ “ನಾನು ಈ ಸೂಚನೆಯನ್ನು ಸೊಮವಾರ ಸಂಜೆ 5 ಗಂಟೆ ಸುಮಾರಿಗೆ ಟಿಕ್ರಿ ಗಡಿಯ ಬಳಿ, ದೆಹಲಿ ಪೊಲೀಸರ ನಾಕಾದ ಸ್ಥಳದಲ್ಲಿ ನೋಡಿದೆ. ಇದು ರಾಷ್ಟ್ರೀಯ ಹೆದ್ದಾರಿಯ ಕಂಬದಲ್ಲಿದೆ; ಅದು ಇತರ ಸ್ಥಳಗಳಲ್ಲಿಯೂ ಇರಬಹುದು. ಆದಾಗ್ಯೂ, ನಮಗೆ ತೊಂದರೆಯಾಗಿಲ್ಲ; ರೈತರು ದೃಢವಾಗಿದ್ದಾರೆ ಮತ್ತು ನಾವು ಇದರ ಬಗ್ಗೆ ವಿವಾದ ಮಾಡುವುದಿಲ್ಲ. ಕಾನೂನುಗಳನ್ನು ರದ್ದುಗೊಳಿಸುವವರೆಗೂ ನಮ್ಮ ಧರಣಿಗಳು ನಡೆಯುತ್ತವೆ” ಎಂದಿದ್ದಾರೆ.

ಕೃಷಿ ಸಚಿವ ನರೇಂದ್ರ ತೋಮರ್, ಅತಿ ಹೆಚ್ಚು ಜನ ಪ್ರತಿಭಟಿಸಿದ ಕಾರಣಕ್ಕೆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ ನಂತರ ಈ ಸೂಚನೆ ಬಂದಿದೆ. “ಅವರು ಈ ಜನಸಮೂಹದೊಂದಿಗೆ 11 ಸಭೆಗಳನ್ನು ನಡೆಸಿದ್ದು ನಿಜಕ್ಕೂ ಆಶ್ಚರ್ಯಕರವಾಗಿದೆ ಮತ್ತು ಶಾಂತಿಯನ್ನು ಕಾಪಾಡಿಕೊಂಡಿದ್ದಕ್ಕಾಗಿ ಮತ್ತು ಈ ಧರಣಿಯನ್ನು ರಾಜಕೀಯ-ರಹಿತವಾಗಿ ನೋಡಿಕೊಂಡಿದ್ದಕ್ಕಾಗಿ ಸಚಿವರೇ ನಮ್ಮನ್ನು ಅಭಿನಂದಿಸಿದ್ದರು. ನಮ್ಮ ಸಭೆಗಳಲ್ಲಿ ಅವರು ಇದನ್ನು ‘ಕಿಸಾನ್ ಆಂದೋಲನ್’ ಎಂದು ಕರೆಯುತ್ತಿದ್ದರು ಮತ್ತು ಈಗ ನಾವು ಅವರ ಪಾಲಿಗೆ ಬರೀ ಜನಸಮೂಹವಾಗಿದ್ದೇವೆ” ಎಂದಿದ್ದಾರೆ.

ಸಂಯುಕ್ತ್ ಕಿಸಾನ್ ಮೋರ್ಚಾದ ಸದಸ್ಯ ಡಾ. ದರ್ಶನ್ ಪಾಲ್, “ನಾವು ಇಂತಹ ಕ್ರಮಗಳನ್ನು ಬಲವಾಗಿ ಖಂಡಿಸುತ್ತೇವೆ. ಗಡಿಯಲ್ಲಿ 90 ದಿನಗಳ ಕಾಲ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ನಾವು ದೆಹಲಿಯೊಳಗೇನೂ ಕುಳಿತಿಲ್ಲ” ಎಂದಿದ್ದಾರೆ.

ಮಂಗಳವಾರ ಟಿಕ್ರಿ ಗಡಿಯಲ್ಲಿ, ಪೊಲೀಸ್ ನಿಯೋಜನೆಯ ನೆರಳಿನಲ್ಲಿಯೇ ರೈತರು ಎಂದಿನಂತೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಅನಿಲ್ ಮಲಿಕ್ ಎಂಬ ರೈತ ಮಾತನಾಡಿ “ಅವರು ಇದನ್ನು ಈಗಾಗಲೇ ಗಾಜಿಪುರದಲ್ಲಿ ಪ್ರಯತ್ನಿಸಿದ್ದಾರೆ. ಆದರೆ ಅದು ಹಿಮ್ಮೆಟ್ಟಿತು. ನಾವು ಎಲ್ಲಿಯೂ ಹೋಗುವುದಿಲ್ಲ. ಯಾವುದೇ ಸುಳಿವು ಇದ್ದರೆ ಪೊಲೀಸ್ ಕ್ರಮ ಜರುಗಿಸಲಿ. ಹೆಚ್ಚಿನ ಜನರು ನಮ್ಮೊಂದಿಗೆ ಸೇರಲು ಬರುತ್ತಲೇ ಇದ್ದಾರೆ..” ಎಂದಿದ್ದಾರೆ.


ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...