Homeಮುಖಪುಟಕಪ್ಪುಪಟ್ಟಿ ಧರಿಸಿ ವಕ್ಫ್‌ ಮಸೂದೆ ವಿರುದ್ದ ಪ್ರತಿಭಟಿಸಿದ 24 ಜನರಿಗೆ ನೋಟಿಸ್; ತಲಾ 2 ಲಕ್ಷ...

ಕಪ್ಪುಪಟ್ಟಿ ಧರಿಸಿ ವಕ್ಫ್‌ ಮಸೂದೆ ವಿರುದ್ದ ಪ್ರತಿಭಟಿಸಿದ 24 ಜನರಿಗೆ ನೋಟಿಸ್; ತಲಾ 2 ಲಕ್ಷ ರೂ. ಬಾಂಡ್ ಸಲ್ಲಿಸಲು ಸೂಚನೆ!

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆ, 2025ರ ವಿರುದ್ಧ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ವ್ಯಕ್ತಪಡಿಸಿದ 24 ಜನರಿಗೆ ಉತ್ತರ ಪ್ರದೇಶದ ಮುಝಫ್ಫರ್‌ನಗರ ಜಿಲ್ಲೆಯ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ತಲಾ 2 ಲಕ್ಷ ರೂಪಾಯಿ ಬಾಂಡ್ ಸಲ್ಲಿಸುವಂತೆ ಸೂಚಿಸಿದ್ದಾರೆ.

ಈ ಬಗ್ಗೆ ಶನಿವಾರ (ಏ.5) ಮಾಧ್ಯಮಗಳಿಗೆ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸತ್ಯನಾರಾಯಣ್ ಪ್ರಜಾಪತ್, “ಸಿಸಿಟಿವಿ ದೃಶ್ಯಾವಳಿಗಳ ಮೂಲಕ 24 ಜನರನ್ನು ಗುರುತಿಸಲಾಗಿದ್ದು, ನಂತರ ಅವರಿಗೆ ನೋಟಿಸ್ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಪೊಲೀಸರ ವರದಿಯ ಆಧಾರದ ಮೇಲೆ, ನಗರ ಮ್ಯಾಜಿಸ್ಟ್ರೇಟ್ ವಿಕಾಸ್ ಕಶ್ಯಪ್ ಅವರು ನೋಟಿಸ್ ಜಾರಿ ಮಾಡಲು ಸೂಚಿಸಿದ್ದಾರೆ. ಏಪ್ರಿಲ್ 16ರಂದು ಈ 24 ಜನರು ನ್ಯಾಯಾಲಯಕ್ಕೆ ಹಾಜರಾಗುವಂತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ತಲಾ 2 ಲಕ್ಷ ರೂಪಾಯಿ ಬಾಂಡ್‌ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ ಎಂದು ವರದಿಗಳು ಹೇಳಿವೆ.

ರಂಝಾನ್ ತಿಂಗಳ ಕೊನೆಯ ಶುಕ್ರವಾರ (ಜುಮಾಅತುಲ್ ವಿದಾ) ಮಾರ್ಚ್ 28 ರಂದು ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸಿ ದೇಶದಾದ್ಯಂತ ಮುಸ್ಲಿಮರು ತಮ್ಮ ತೋಳಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದರು. ಅದರಂತೆ, ಮುಝಪ್ಪರ್‌ನಗರದ ಮಸೀದಿಗಳಲ್ಲೂ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ. ಅಂತವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ (ಎಐಎಂಪಿಎಲ್‌ಬಿ) ನಿರ್ದೇಶನದಂತೆ ಜನರು ಕಪ್ಪುಪಟ್ಟಿ ಧರಿಸಿ ಮೌನವಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದರು.

“ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಅಥವಾ ಉದ್ವಿಗ್ನತೆಯನ್ನು ಸೃಷ್ಟಿಸುವ ಉದ್ದೇಶವಿಲ್ಲದೆ, ಶಾಂತಿಯುತ ಮತ್ತು ಪ್ರಜಾಪ್ರಭುತ್ವದ ರೀತಿಯಲ್ಲಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ಮಾತ್ರ ಕಪ್ಪುಪಟ್ಟಿಗಳನ್ನು ಧರಿಸಿದ್ದೆವು” ಎಂದು ನೋಟಿಸ್‌ ಸ್ವೀಕರಿಸಿದವರು ಹೇಳಿದ್ದಾರೆ ಎಂದು ವರದಿಯಾಗಿದೆ.

ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆಯು ಬುಧವಾರ ಲೋಕಸಭೆಯಲ್ಲಿ ಮಂಡನೆಯಾಗಿ ಅಂಗೀಕಾರಗೊಂಡಿದೆ. ಮರುದಿನ, ಗುರುವಾರ ರಾಜ್ಯಸಭೆಯಲ್ಲೂ ಅಂಗೀಕಾರ ಪಡೆದುಕೊಂಡಿದೆ. ಇನ್ನು ರಾಷ್ಟ್ರಪತಿಗಳ ಸಹಿ ಬೀಳಲು ಬಾಕಿಯಿದೆ.

ಈ ನಡುವೆ ಮಸೂದೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ ಸಂಸದ ಮೊಹಮ್ಮದ್ ಜಾವೆದ್, ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಎಎಪಿ ಸಂಸದ ಅಮಾನತುಲ್ಲಾ ಖಾನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

‘ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’: ಅಮಿತ್ ಶಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...