ರಾಜ್ಯದ ಐಟಿ-ಬಿಟಿ ಕಂಪನಿಗಳು, ಕಾರ್ಖಾನೆಗಳು, ಖಾಸಗಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಆದೇಶಿಸಿದ್ದಾರೆ. ಮುಂದಿನ ಪೀಳಿಗೆಗೆ ಕನ್ನಡ ಭಾಷೆಯ ಮಹತ್ವವನ್ನು ತಿಳಿಸಲು ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು ನಗರದಲ್ಲಿ 50%ದಷ್ಟು ಜನ ಹೊರ ರಾಜ್ಯದವರಾಗಿದ್ದು, ಅವರಿಗೆ ಕನ್ನಡ ಕಲಿಯಲು ಅವಕಾಶ ನೀಡಬೇಕು. ಇದನ್ನು ಗಮನದಲ್ಲಿಟ್ಟುಕೊಂಡು ವಿಜಯದಶಮಿ ದಿನದಂದು ಈ ನಿರ್ಧಾರವನ್ನು ಪ್ರಕಟಿಸುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ.
ಇದನ್ನೂಓದಿ: ಉತ್ತರ ಪ್ರದೇಶ ಉಪಚುನಾವಣೆ | ಕಾಂಗ್ರೆಸ್ ಜೊತೆ ಒಗ್ಗಟ್ಟಿನ ಹೋರಾಟ ಎಂದ ಅಖಿಲೇಶ್; ಏಕಾಂಗಿಯಾಗಿ ಅಭ್ಯರ್ಥಿ ಘೋಷಣೆ!
ಐಟಿ-ಬಿಟಿ ಕಂಪನಿಗಳು ಮತ್ತು ಕಾರ್ಖಾನೆಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಿದ್ದರೂ ಕನ್ನಡ ಧ್ವಜಾರೋಹಣ ಮಾಡುವ ಮೂಲಕ ರಾಜ್ಯೋತ್ಸವವನ್ನು ಆಚರಿಸಬೇಕು. ರಾಜ್ಯೋತ್ಸವವನ್ನು ಆಚರಿಸುವ ಸಂಸ್ಥೆಗಳು ಬಿಬಿಎಂಪಿ ಒದಗಿಸಿದ ಸಂಖ್ಯೆಗೆ ವಾಟ್ಸಾಪ್ ಮೂಲಕ ಫೋಟೋಗಳನ್ನು ಕಳುಹಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
“ಈ ವರ್ಷ 70 ನೇ ಕರ್ನಾಟಕ ರಾಜ್ಯೋತ್ಸವವನ್ನು ರಾಜ್ಯಾದ್ಯಂತ ಆಚರಿಸಲಾಗುತ್ತದೆ. ಕನ್ನಡ ನಾಡಿನಲ್ಲಿ ಕನ್ನಡ ಕಲಿಯುವುದು ಪ್ರತಿಯೊಬ್ಬರ ಕರ್ತವ್ಯ. ಬೆಂಗಳೂರು ಉಸ್ತುವಾರಿ ಸಚಿವನಾಗಿ ನಾನು ಈ ನಿರ್ಧಾರವನ್ನು ಪ್ರಕಟಿಸುತ್ತಿದ್ದೇನೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
‘‘ಕರ್ನಾಟಕ ರಾಜ್ಯೋತ್ಸವವನ್ನು ಎಲ್ಲ ಸಂಘಟನೆಗಳು ಆಚರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಕನ್ನಡ ಪರ ಸಂಘಟನೆಗಳು ಅಥವಾ ಇತರರು ಆಚರಣೆಗೆ ಸಂಬಂಧಿಸಿದಂತೆ ಯಾವುದೇ ಸಂಘಟನೆಗೆ ಬೆದರಿಕೆ ಅಥವಾ ತೊಂದರೆ ನೀಡುವಂತಿಲ್ಲ, ಯಾವುದೇ ಗೊಂದಲ ಉಂಟಾದರೆ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ. ನವೆಂಬರ್ 1 ರಂದು
ವಿಡಿಯೊ ನೋಡಿ: ಕುಂಕುಮ ಧರಿಸದ ಮಹಿಳೆಗೆ ನಿಂದಿಸಿದ ಸಂಸದ ಮುನಿಸ್ವಾಮಿ ವಿರುದ್ಧ ಮಹಿಳೆಯರ ಪ್ರತಿಭಟನೆ


