Homeಮುಖಪುಟಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

ಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

- Advertisement -
- Advertisement -

ಬಜರಂಗದಳದ ಕಾರ್ಯಕರ್ತನ ಕೊಲೆ ಹಿನ್ನೆಲೆಯಲ್ಲಿ ಉದ್ವಿಗ್ನಗೊಂಡಿದ್ದ ಶಿವಮೊಗ್ಗದ ಪರಿಸ್ಥಿತಿ ಈಗ ಶಾಂತವಾಗಿದೆ. ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಹೇರಲಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ವ್ಯಾಪರ ವಹಿವಾಟು ಬಂದ್ ಆಗಿದೆ.

ಸೋಮವಾರ ಕೊಲೆ ಹಿನ್ನೆಲೆಯಲ್ಲಿ 144 ಸೆಕ್ಷನ್ ಹೇರಿದ್ದರೂ ಸಹ ಶವದ ಮೆರವಣಿಗೆಗೆ ಅವಕಾಶ ಕೊಟ್ಟಿದ್ದು, ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರ ಮೆರವಣಿಗೆಯ ನೇತೃತ್ವ ವಹಿಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ-ಆರ್‌ಎಸ್‌ಎಸ್‌ ಕಾರ್ಯಕರ್ತರು ಮುಸ್ಲಿಂ ಮಾಲಿಕತ್ವದ ಸುಮಾರು 300 ಅಂಗಡಿ-ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. 45 ಜನರ ಮೇಲೆ ಹಲ್ಲೆಯಾಗಿದ್ದು, ಇಬ್ಬರೂ ಪತ್ರಕರ್ತರು ಸಹ ಗಾಯಗೊಂಡಿದ್ದಾರೆ. ಶಿವಮೊಗ್ಗದ ಹಳೆ ಟೌನ್‌ನಲ್ಲಿ ದಾಂಧಲೆ ನಡೆಸಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದರು. ಹಾಗಾಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು. ಈ ಪೊಲೀಸ್ ವೈಫಲ್ಯದ ಕುರಿತು ಸಾರ್ವಜನಿಕರಿಂದ ತೀವ್ರ ಟೀಕೆ ಕೇಳಿಬಂದಿತ್ತು. ಆಡಳಿತ ಸರ್ಕಾರ ಬೇಕಂತಲೆ ಗಲಭೆಗೆ ಅವಕಾಶ ಮಾಡಿಕೊಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಲಾಗಿತ್ತು. ಸಚಿವ ಈಶ್ವರಪ್ಪ ಮತ್ತು ಸಂಸದ ರಾಘವೇಂದ್ರರವರು ಬೇಕಂತಲೆ ಪರಿಸ್ಥಿತಿ ಉದ್ವಿಗ್ವಗೊಳಿಸಿದರು. ಅವರು ಸುಮ್ಮನಿದ್ದರೆ ಈ ಅನಾಹುತ ತಡೆಯಬಹುದಿತ್ತು, ಅದೇ ಜಿಲ್ಲೆಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸಹ ಇದಕ್ಕೆಲ್ಲ ಅವಕಾಶ ಕೊಡಬಾರದಿತ್ತು ಎಂಬ ಅಭಿಪ್ರಾಯಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಬೇರೆ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಬಲ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದೆ. ರ್ಯಾಪಿಡ್ ಆಕ್ಷನ್ ಫೋರ್ಸ್ ಶಿವಮೊಗ್ಗದಲ್ಲಿ ಬೀಡುಬಿಟ್ಟಿದೆ. ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಮುಂದುವರೆಸಿದೆ. ಹಲವೆಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು ಆಸ್ಪತ್ರೆ-ಔಷಧಿಯಂತಹ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

“ಕೊಲೆ ನಂತರ ನಡೆದಿರುವ ಹಿಂಸಾಚಾರದ ಬಗ್ಗೆ ಮಾಹಿತಿ ಕಲೆ ಹಾಕಿದ್ದೇವೆ. ಸುಮಾರು 13 ಸ್ಥಳಗಳಲ್ಲಿ ಅಹಿತಕರ ಘಟನೆಗಳು ನಡೆದಿವೆ. ಕೆಲವೆಡೆ ವಾಹನಗಳಿಗೆ ಬೆಂಕಿ ಹಾಕಿದ್ದು, ಸಂಪೂರ್ಣ ಭಸ್ಮಗೊಂಡಿವೆ. ಹಾಗಾಗಿ ವಾಹನ ಮಾಲೀಕರನ್ನು ಗುರುತಿಸುವ ಕೆಲಸ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ, ಹಿಂಸಾಚಾರದಲ್ಲಿ ಭಾಗಿಯಾದವರನ್ನು ಬಂಧಿಸುತ್ತೇವೆ” ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬುಧವಾರ ಬೆಳಗಿನ ಜಾವ 6 ಗಂಟೆಯ ತನಕ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ಪಮಣಿ ಆದೇಶ ಹೊರಡಿಸಿದ್ದಾರೆ. ಜನರು ಶಾಂತ ರೀತಿಯಿಂದ ವರ್ತಿಸಬೇಕೆಂದು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಪೊಲೀಸರು ತನಿಖಾ ಕಾರ್ಯದಲ್ಲಿ ನಿರತರಾಗಿದ್ದು, ಇದುವರೆಗೂ ಮೂವರನ್ನು ಬಂಧಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆಂಬ ಮಾಹಿತಿ ಇದೆ. ಶಿವಮೊಗ್ಗ ಬುದ್ಧನಗರದ ಖಾಸಿಫ್‌ (30), ಜೆಪಿ ನಗರದ ಸೈಯದ್ ನದೀಂ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಇತರ 12 ಮಂದಿಯನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಮೃತನ ಸಹೋದರಿ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಆಗಿದ್ದು, “ಹಿಂದೂ, ಹಿಂದುತ್ವ ಎಂದಿದ್ದಕ್ಕೆ ನನ್ನ ತಮ್ಮ ಆ ಪರಿಸ್ಥಿತಿಯಲ್ಲಿ ಬಿದ್ದಿದ್ದಾನೆ. ದಯವಿಟ್ಟು ಎಲ್ಲರೂ ಒಂದು ಸಲ ನೋಡಿ, ಎಲ್ಲಾ ನನ್ನ ಅಣ್ಣ-ತಮ್ಮಂದಿರಿಗೂ ಕೈಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಂ, ಹಿಂದೂ ಎಲ್ಲಾ ಸಹೋದರರಿಗೆ ಬೇಡಿಕೊಳ್ಳುತ್ತೇನೆ. ನಿಮ್ಮ ಅಪ್ಪ ಅಮ್ಮನಿಗೆ ಒಳ್ಳೆಯ ಮಕ್ಕಳಾಗಿರಿ ಹೊರತು, ಇದನ್ನೆಲ್ಲ ಮಾಡಿಕೊಳ್ಳಲು ಹೋಗಬೇಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ; ಹರ್ಷ ಕೊಲೆ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...