Homeದಲಿತ್ ಫೈಲ್ಸ್ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌...

ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ವೆಂಕಟೇಶ್ವರನ ಫೋಟೋ ತೆರವು ಮಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಫೋಟೋ ಇರಿಸುತ್ತಿರುವ ವಿಡಿಯೊ ವೈರಲ್ ಆಗಿದೆ.

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಬಾಲಕನ ಕುಟುಂಬವು ತನ್ನ ಮನೆಯಲ್ಲಿದ್ದ ದೇವರ ಫೋಟೋಗಳನ್ನು ತೆರವು ಮಾಡಿದೆ.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದಾರೆ. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದಾರೆ.

ಸಿಮೆಂಟ್‌ ಕಲ್ಲಿನಿಂದ ನಿರ್ಮಿಸಲಾದ, ಇನ್ನೂ ಕಾಂಕ್ರೀಟ್ ಕಾಣದಿರುವ ಮನೆಯಲ್ಲಿ ಪುಟ್ಟ ಬಾಲಕನೊಂದಿಗೆ ದಂಪತಿ ಶೋಭಾ ಹಾಗೂ ರಮೇಶ್ ವಾಸವಿದ್ದಾರೆ. ಸಂತ್ರಸ್ತ ಬಾಲಕನ ಮನೆಗೆ ತೆರಳಿದ ಸಂಘಟಕರು ಜಾಗೃತಿ ಮೂಡಿಸಿದ್ದಾರೆ.

ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟಿದ್ದಾರೆ. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದಾರೆ. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಕುಟುಂಬದೊಂದಿಗೆ ಎಎಸ್‌ಎಸ್‌ಕೆಯ ಮುಖಂಡರಾದ ಸಂದೇಶ್‌ ಮಾತನಾಡಿ, “ರಾಮಕೃಷ್ಣ, ಭೂತಮ್ಮ, ಇನ್ಯಾರೂ ಇಲ್ಲ. ಅಂಬೇಡ್ಕರ್‌ ಒಬ್ಬರೇ ನಮಗೆ ದೇವರು. ನಿಮಗೆ ನ್ಯಾಯ ಸಿಕ್ಕಿದೆ ಎಂದರೆ ಅಂಬೇಡ್ಕರ್‌ ಕಾರಣ. ಅವರನ್ನು ಸ್ಮರಿಸಬೇಕು. ಮಕ್ಕಳಿಗೆ ಅವರ ಬಗ್ಗೆ ತಿಳಿಸಿಕೊಡಬೇಕೇ ಹೊರತು ದೇವರುಗಳ ಬಗ್ಗೆ ಅಲ್ಲ” ಎಂದು ತಿಳಿಸಿದ್ದಾರೆ.

“ನಿಮಗೆ ಎಲ್ಲರೂ ಸಹಾಯ ಮಾಡುತ್ತಾರೆ. ಹಾಗೆಂದು ಕಾನೂನು ಮೀರುವ ಕೆಲಸವನ್ನು ನಾವು ಮಾಡಬಾರದು” ಎಂದಿದ್ದಾರೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದರು. ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನೂ ವಿಧಿಸಿದ್ದರು. ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು.

ಅಟ್ರಾಸಿಟಿ ಪ್ರಕರಣ ದಾಖಲು

ಸಾಮಾಜಿಕ ಬಹಿಷ್ಕಾರದ ಸುದ್ದಿ ವೈರಲ್ ಆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಗ್ರಾಮದ ಸವರ್ಣೀಯ ಸಮುದಾಯಕ್ಕೆ ಸೇರಿದ ಜಿ.ನಾರಾಯಣಸ್ವಾಮಿ ಬಿನ್ ಗೋಪಾಲಪ್ಪ, ಜಿ.ರಮೇಶ್, ಗೋಪಾಲಪ್ಪ, ವೆಂಕಟೇಶಪ್ಪ, ಕೋಟೆಪ್ಪ, ನಾರಾಯಣಸ್ವಾಮಿ, ಚಲಪತಿ, ಮೋಹನ್ ರಾವ್‌, ಚಿನ್ನಯ್ಯ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಯ ಕಾಯ್ದೆ 1989 ಅಡಿ ಹಾಗೂ ಐಪಿಸಿ ಕಲಂ 143, 147, 148, 149 504, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಳ್ಳೆಯ ಮಾಹಿತಿ ಅಸ್ಪೃಶ್ಯತೆ ಆಚರಣೆ ಮಾಡುವವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆ ವಿಧಿಸಿದೆ.ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...