HomeಮುಖಪುಟNPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಾವು ನಿರ್ಧರಿಸಿದ್ದೇವೆ ಎಂದು ಜಗನ್‌ ಟ್ವೀಟ್‌ ಮಾಡಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ 2010 ರಲ್ಲಿ ಇದ್ದ ಷರತ್ತುಗಳನ್ನು ಅನುಸರಿಸುವಂತೆ ಕೇಂದ್ರವನ್ನು ಕೋರಲಿದ್ದೇನೆ ಎಂದು ಘೋಷಿಸಿದರು.

ಎನ್‌ಪಿಆರ್‌ನಲ್ಲಿ ಪ್ರಸ್ತಾಪಿಸಲಾದ ಕೆಲವು ಪ್ರಶ್ನೆಗಳು ನನ್ನ ರಾಜ್ಯದ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆಯನ್ನು ಉಂಟುಮಾಡುತ್ತಿವೆ. ನಮ್ಮ ಪಕ್ಷದೊಳಗೆ ವಿಸ್ತಾರವಾದ ಸಮಾಲೋಚನೆಗಳ ನಂತರ, 2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲು ನಾವು ನಿರ್ಧರಿಸಿದ್ದೇವೆ ಎಂದು ಜಗನ್‌ ಟ್ವೀಟ್‌ ಮಾಡಿದ್ದಾರೆ.

ಇದಕ್ಕಾಗಿ ಮುಂಬರುವ ಅಸೆಂಬ್ಲಿ ಅಧಿವೇಶನದಲ್ಲಿ ನಾವು ನಿರ್ಣಯವನ್ನು ಅಂಗೀಕರಿಸುತ್ತೇವೆ ಎಂದು ಸಹ ಜಗನ್‌ ಹೇಳಿದ್ದಾರೆ.

ಏಪ್ರಿಲ್‌ನಿಂದ ಸೆಪ್ಟಂಬರ್‌ ಒಳಗೆ ಎನ್‌ಪಿಆರ್‌ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದ ಬೆನ್ನಲ್ಲೇ ಜಗನ್‌ ಮೋಹನ್‌ ರೆಡ್ಡಿಯವರ ಈ ತೀರ್ಮಾನ ವ್ಯಕ್ತಿವಾಗಿದೆ. ಈಗಿರುವ ಎನ್‌ಪಿಆರ್‌ ಪ್ರಶ್ನಾವಳಿಗಳು ತಮ್ಮ ಪೋಷಕರ ಜನ್ಮದಿನಾಂಕ ಮತ್ತು ಹುಟ್ಟಿದ ಸ್ಥಳಗಳನ್ನು ಕೇಳುವುದರಿಂದ ಇದು ಎನ್‌ಆರ್‌ಸಿ ಜಾರಿಗೆ ಪ್ರಥಮ ಹೆಜ್ಜೆಯಾಗಿದೆ ಎಂದು ಹಲವಾರು ಜನ ಅನುಮಾನ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವರೆ ಈ ಕುರಿತು ಕೆಲವೆಡೆ ಹೇಳಿಕೆಗಳನ್ನು ಸಹ ನೀಡಿದ್ದಾರೆ.

“ಎನ್‌ಪಿಆರ್ ಜಾರಿಗೆ ಸಂಬಂಧಿಸಿದಂತೆ ಹಲವಾರು ಭಾಗಗಳಲ್ಲಿ ಹಲವಾರು ಆತಂಕಗಳು ಮತ್ತು ಅನುಮಾನಗಳು ವ್ಯಕ್ತವಾಗುತ್ತಿರುವುದರಿಂದ, ಎಲ್ಲಾ ಜಿಲ್ಲಾಧಿಕಾರಿಗಳು / ಪ್ರಧಾನ ಜನಗಣತಿ ಅಧಿಕಾರಿಗಳಿಗೆ ಈ ಕೆಳಗಿನ ಸ್ಪಷ್ಟೀಕರಣಗಳನ್ನು ‘ಪದೇ ಪದೇ ಕೇಳಲಾಗುವ ಪ್ರಶ್ನೆಗಳು’ (FAQ) ರೂಪದಲ್ಲಿ ನೀಡಲಾಗುತ್ತದೆ. ಸಂಬಂಧಪಟ್ಟ ಎಲ್ಲರಿಗೂ ಸುಲಭವಾಗಿ ಪ್ರಸಾರ ಮಾಡಲಾಗುವುದು” ಎಂದು ಸಾಮಾನ್ಯ ಆಡಳಿತ ಇಲಾಖೆ ಕಾರ್ಯದರ್ಶಿ ಶಶಿ ಭೂಷಣ್ ಕುಮಾರ್ ಜನವರಿ 22 ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದರು.

ಎನ್‌ಪಿಆರ್ ನಡೆಯುವ ಸಮಯದಲ್ಲಿ ಜನರು ಯಾವುದೇ ದಾಖಲೆಗಳನ್ನು ಎಣಿಕೆದಾರರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದರು.

“ಎನ್‌ಪಿಆರ್‌ ಮಾಡುವವರು ಜನರು ನೀಡುವ ಯಾವುದೇ ಉತ್ತರಗಳನ್ನು ದಾಖಲಿಸುವುದು ಅಗತ್ಯವಾಗಿರುತ್ತದೆ. ಯಾವುದೇ ಪ್ರಶ್ನೆಗೆ ಹೆಚ್ಚಿನ ಉತ್ತರಗಳನ್ನು ನೀಡುವಂತೆ ಒತ್ತಾಯಿಸಬಾರದು, ಅವರು ನೀಡಲು ಇಚ್ಛಿಸದಿದ್ದರೆ  ಯಾವುದೇ ದಾಖಲೆಯನ್ನು ಕೇಳಬಾರದು” ಎಂದು ಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...