Homeಕರ್ನಾಟಕNPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

NPS ನೌಕರನ ಡೆತ್‌ನೋಟ್: ಮಾಜಿ ಸಚಿವ ಬಿ.ಸಿ.ನಾಗೇಶ್, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಉಲ್ಲೇಖ

- Advertisement -
- Advertisement -

ರಾಜ್ಯ NPS ನೌಕರರ ಸಂಘ, ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಪ್ರಭಾಕರ್​ ಎಸ್​ ಅವರು ತಮ್ಮ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿದೆ. ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿದ್ದೇನೆ ಹಾಗಾಗಿ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ” ಎಂದು ಡೆತ್‌ನೋಟ್ ಬರೆದಿದ್ದಾರೆ.

NPS ನೌಕರರ ಈ ಡೆತ್ ನೋಟ್‌ನಿಂದ ಜುಲೈ 19 ರ ಇಡೀ ದಿನ ಆತಂಕ ಸೃಷ್ಟಿಯಾಗಿತ್ತು. ಪ್ರಭಾಕರ್ ಎಸ್‌ ಅವರು, ತಮ್ಮ ಸರ್ಕಾರಿ ನೌಕರರ ಸಂಘದ ವಾಟ್ಸಾಪ್ ಗ್ರೂಪ್​ನಲ್ಲಿ ಎರಡು ಡೆತ್​ನೋಟ್​ ಮೆಸೇಜ್​ ಕಳುಹಿಸಿದ್ದಾರೆ. ಡೆತ್​ನೋಟ್​ ಸೆಂಡ್​ ಮಾಡಿದ ಬಳಿಕ ಅವರ ಮೊಬೈಲ್ ಸ್ವಿಚ್ ಆಪ್​ ಆಗಿದೆ. ಇದರಿಂದ ಸಹಜವಾಗಿ ಅವರ ಕುಟುಂಬಸ್ಥರು ಮತ್ತು ಸ್ನೇಹಿತರ ವಲಯದಲ್ಲಿ ಆತಂಕ ಮೂಡಿದೆ.

ಪ್ರಭಾಕರ್ ಅವರು ಡೆತ್‌ನೋಟ್‌ನ ಮೆಸೇಜ್ ಕಳುಹಿಸಿದ ಬಳಿಕ ಶಿವಮೊಗ್ಗದ ಸೋಮಯ್ಯ ಲೇಔಟ್​ನಲ್ಲಿರುವ ಅವರ ಮನೆಯ ಬಳಿ, ಸ್ನೇಹಿತರು, ಬಂಧು ಬಳಗದವರು ಸೇರಿದ್ದಾರೆ. ನಂತರ ಆ ಡೆತ್‌ನೋಟ್‌ ಅಡಿಯಲ್ಲಿ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ನಾಟಕ ರಾಜ್ಯ NPS ನೌಕರರ ಸಂಘದ ಕಡೆಯಿಂದಲೂ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದವರ ಮೇಲೆ FIR ದಾಖಲಿಸಿ ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಘಟನೆ ಕುರಿತು ವಿವರ

ರಾಜ್ಯ NPS ನೌಕರರ ಸಂಘದ KSGNPSEA ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಭಾಕರ್ ಅವರು ಒಟ್ಟು ಎರಡು ಸಂದೇಶಗಳನ್ನು ಕಳುಹಿಸಿದ್ದಾರೆ. ಬುಧವಾರ ಬೆಳಿಗ್ಗೆ 4.28ಕ್ಕೆ ಮೊದಲ ಮೆಸೇಜ್​, ಎರಡನೇ ಮೆಸೇಜ್ ಬೆಳಗ್ಗೆ 8.13 ಕ್ಕೆ ಗ್ರೂಪ್​ಗೆ ಮೆಸೇಜ್‌ಗಳು ಬಂದಿವೆ.

ಮೊದಲ ಮೆಸೇಜ್ ನಲ್ಲಿ ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ. ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಿಂದ ವ್ಯವಸ್ಥಿತ ತೊಂದರೆಯಾಗಿ ಕಳೆದ 6 ತಿಂಗಳಿಂದ ವೇತನವಿಲ್ಲದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ. ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ. ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ. ಇಂತಿ ನಿಮ್ಮ ನತದೃಷ್ಟ NPS ನೌಕರ ಪ್ರಭಾಕರ ಎಸ್.” ಎಂದು ಬರೆದು ಮೆಸೇಜ್ ಕಳುಹಿಸಿದ್ದಾರೆ.

ಆನಂತರ 8.13ಕ್ಕೆ ಇನ್ನೊಂದು ಮೆಸೇಜ್ ಕಳುಹಿಸಲಾಗಿದ್ದು, ಅದರಲ್ಲಿ, ”ಆತ್ಮೀಯ ರಾಜ್ಯದ ಸಮಸ್ತ NPS ನೌಕರ ಸಂಘದ ಪದಾಧಿಕಾರಿ ಮಿತ್ರರೇ ನಾನು ಕಳೆದ ಹತ್ತು ವರ್ಷಗಳಿಂದ NPS ನೌಕರ ಸಂಘವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ರಾಜ್ಯ ಸಂಘದ ನಿರ್ಧೇಶನದಂತೆ ಅನೇಕ ಕಾರ್ಯಕ್ರಮಗಳನ್ನು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಸಂಘಟನೆ ಮಾಡಿದ್ದೇನೆ.”

”ಇತ್ತೀಚೆಗೆ ಜನವರಿ 22-2023 ರಂದು ಶಿವಮೊಗ್ಗ ಜಿಲ್ಲಾ ಮಟ್ಟದ NPS ನೌಕರರ ಸಮಾವೇಶ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದರ ಫಲವಾಗಿ ನನ್ನ ವೃತ್ತಿಬದುಕಿಗೆ ರಾಜ್ಯದ ನೌಕರ ಸಂಘದ ಅಧ್ಯಕ್ಷರಾದ ಷಡಕ್ಷರಿ, ಅವರ ಸಹಚರರಾದ ಮೋಹನ್ ಕುಮಾರ ಆರ್,ಬಸವನಗೌಡ, ಹಾಗೂ ಹಿಂದಿನ ಶಿಕ್ಷಣ ಸಚಿವರಾ ಬಿ.ಸಿ.ನಾಗೇಶ್ ಮತ್ತು ಅವರ ಆಪ್ತ ಕಾರ್ಯದರ್ಶಿಗಳಾಗಿದ್ದ ಎ ಆರ್ ರವಿ ಅವರ ವ್ಯವಸ್ಥಿತ ಪಿತೂರಿಯಿಂದಾಗಿ ಹಿಂಬಡ್ತಿ ಮಾಡಿ ನಿಯಮಗಳಲ್ಲಿ ವೇತನ ಸಂರಕ್ಷಣೆಗೆ ಅವಕಾಶವಿದ್ದರೂ ಹಿಂಬಡ್ತಿ ಆದೇಶದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಶ್ರೀ ಮಹಂತಯ್ಯ ಹೊಸಮಠ ಅವರು ಹಿಂಬಡ್ತಿ ಮಾಡಿದ್ದಲ್ಲದೆ, ಹೆಚ್ಚುವರಿ ವೇತನ ಕಟಾಯಿಸುವಂತೆ ಆದೇಶ ಮಾಡಿದ್ದರ ಪ್ರತಿಫಲವಾಗಿ, ಹೊನ್ನಾಳಿ BEO ರವರಾದ ನಂಜರಾಜ ಅವರು ಸರಿಯಾದ ಸಮಯಕ್ಕೆ ಅಂತಿಮ ವೇತನ ಪ್ರಮಾಣ ಪತ್ರ, ಸೇವಾವಹಿಯನ್ನು ಕಳುಹಿಸದೆ ಕಳೆದ 6 ತಿಂಗಳಿಂದ ವೇತನ ಆಗದೆ ನರಕಯಾತನೆ ಅನುಭವಿಸಿದ್ದೇನೆ. ಮತ್ತು ನನ್ನ ಇಡೀ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ ನನ್ನ ಸಮಸ್ಯೆಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ 6 ತಿಂಗಳಕಾಲ ಕಳೆದಾಯಿತು. ಆದರೂ ಯಾವುದೇ ಪರಿಹಾರ ಸಿಗದೆ ಪ್ರಯತ್ನಗಳೆಲ್ಲ ವಿಫಲವಾಗಿದ್ದು ಅತ್ಯಂತ ನೋವಿನ ಸಂಗತಿ.”

”ಈ ಘಟನೆಗೆ ಕಾರಣರಾದವರು ಚೆನ್ನಾಗಿರಲಿ……ನಾನು ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನಸಿಕವಾಗಿ ವಿಫಲನಾಗಿರುವ ಪ್ರಯುಕ್ತ ನಾನು ಬದುಕಿಗೆ ವಿಧಾಯ ಹೇಳಲು ಬಯಸಿದ್ದೇನೆ….. ನನ್ನ ನಿರ್ಧಾರಕ್ಕೆ ಮೇಲ್ಕಾಣಿಸಿದ ವ್ಯಕ್ತಿಗಳೇ ನೇರ ಕಾರಣರಾಗಿರುತ್ತಾರೆ. ನನ್ನ ಈ ನನ್ನ ಕುಟುಂಬದ ಹೊಣೆಗಾರಿಕೆ ಇಡೀ NPS ನೌಕರ ಸಂಘಟನೆಯದ್ದು ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಸಹಕಾರ ಮಾಡಿ……
ಇಂತಿ ನಿಮ್ಮ ನತದೃಷ್ಟ NPS ನೌಕರ” ಎಂದು ಬರೆಯಲಾಗಿದೆ.

ಪ್ರಭಾಕರ್ ಅವರು ಕಳಿಸಿದ ಎರಡೂ ಮೆಸೇಜ್‌ಗಳು ಬಹುತೇಕ ಒಂದೇ ವಿಷಯವಾಗಿದೆ. ಆದರೆ, ಮೊದಲ ಮೆಸೇಜ್ ನಲ್ಲಿ ಯಾವುದೇ ವ್ಯಕ್ತಿಗಳ ಹೆಸರು ಬಳಸಿಲ್ಲ, ಎರಡನೇ ಮೆಸೇಜ್ ನಲ್ಲಿ ತನ್ನ ಈ ಸ್ಥಿತಿಗೆ ಕಾರಣರಾದವರ ಹೆಸರು ಉಲ್ಲೇಖಿಸಿದ್ದಾರೆ.

ಈ ಡೆತ್ ನೋಟ್ ನಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್ ಹಾಗೂ ರಾಜ್ಯ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೆಸರು ಇರುವುದು ಭಾರೀ ಚರ್ಚೆಯಾಗುತ್ತಿದೆ. ಪ್ರಭಾಕರ್ ಅವರ ಮುಖ್ಯ ಉದ್ದೇಶ ಇರುವುದು ಘಟನೆ ಹಿನ್ನೆಲೆಯಲ್ಲಿ ತನಿಖೆ ಆಗಬೇಕು, ತಮಗೆ ತೊಂದರೆ ನೀಡಿದ ವ್ಯಕ್ತಿಗಳಿಗೆ ಶಿಕ್ಷೆ ಆಗಬೇಕು ಎಂಬ ಉದ್ದೇಶ ಇರುವುದು ಸ್ಪಷ್ಟವಾಗಿದೆ.

ಗ್ರೂಪ್‌ನಲ್ಲಿ ಮೊದಲ ಮೆಸೇಜ್‌ ಬಂದ ಬಳಿಕ ಅವರ ಸ್ನೇಹಿತರು ಪ್ರಭಾಕರ್​​ನ್ನು ಸಂಪರ್ಕಿಸುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ಪ್ರಭಾಕರ್ ಯಾರ ಸಂಪರ್ಕಕ್ಕೂ ಬಂದಿಲ್ಲ. ಬಳಿಕ ಮತ್ತೊಂದು ಮೆಸೇಜ್​ ಕಳುಹಿಸಿದ ಆನಂತರ ಪುನಃ ಮೊಬೈಲ್ ಸ್ವಿಚ್​ ಆಫ್​ ಆಗಿದೆ. ವಿಷಯ ತಿಳಿದು ಸರ್ಕಾರಿ ನೌಕರರು ಹಾಗು ಸ್ನೇಹಿತರು, ಪ್ರಭಾಕರ್​ರವರ ಮನೆ ಮತ್ತು ಕೆಲಸ ಮಾಡುವ ಜಾಗದಲ್ಲಿ ವಿಚಾರಿಸಿದ್ದಾರೆ. ಎಲ್ಲಿಯು ಪತ್ತೆಯಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಭಾಕರ್ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿಯ ಕೊಕ್ಕೋಡುವಿನಲ್ಲಿ ಟೀಚರ್ ಆಗಿದ್ದರು. ಶೆಟ್ಟಿಹಳ್ಳಿಯಲ್ಲಿ ಸಿಆರ್​ಪಿಯಾಗಿ ಕಾರ್ಯನಿರ್ವಹಿಸಿದ್ದರು. ಆನಂತರ ಅವರು ಎಫ್​ಡಿಎ ಆಗಿ ಹೊನ್ನಾಳಿ ಬಿಒ ಆಫೀಸ್​ನಲ್ಲಿ ಕಾರ್ಯನಿರ್ವಹಿಸಿದ್ದರು. ಟೀಚರ್ ಆಗಿದ್ದವರು ಎಫ್​ಡಿಎ ಆಗಿ ಬದಲಾವಣೆ ಪಡೆದಿದ್ದರ ಸಂಬಂಧ ಕೆಲವು ಆಕ್ಷೇಪಣೆ ಸಲ್ಲಿಸಿದ್ದರು. ಅಲ್ಲದೆ ಇದರ ನಡುವೆ ಅವರನ್ನು ಹಿರಿಯೂರು ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಪ್ರಭಾಕರ್ ಕೋರ್ಟ್​ ಮೊರೆಹೋಗಿ, ವರ್ಗಾವಣೆಗೆ ಸ್ಟೇ ತಂದಿದ್ದರು. ಅವರ ವರ್ಗಾವಣೆ ಮತ್ತು ಹಿಂಬಡ್ತಿಗೆ ಮುಖ್ಯ ಕಾರಣ ಅವರು ನೌಕರರ ಸಂಘದ ಹೋರಾಟಗಳಲ್ಲಿ ಭಾಗಿ ಆಗಿದ್ದು ಎಂಬುದು ಪರಿಚಿತರಿಂದ ಸಿಕ್ಕ ಮಾಹಿತಿಯಾಗಿದೆ.

ವರ್ಗಾವಣೆಗೆ ಸ್ಟೇ ತಂದ ನಂತರ ಎಫ್ ಡಿಎಯಿಂದ ಎಸ್ ಡಿಎ ಆಗಿ ಹಿಂಬಡ್ತಿಗೆ ದೂಡಲಾಗಿತ್ತು. ನಂತರ ಹೊಸನಗರದ ಮಾರುತಿಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ಅಲ್ಲಿಗೆ ವರ್ಗಾವಣೆಗೊಳ್ಳದ ಪ್ರಭಾಕರ್, ತಮ್ಮ ವಿರುದ್ಧದ ನಿರ್ಣಯದ ವಿರುದ್ಧ ಹೋರಾಟಕ್ಕೆ ಇಳಿದಿದ್ದರು.  ಈ ಸಂಬಂಧ ಸರ್ಕಾರದಿಂದ ಪತ್ರವೊಂದು ಬಂದಿದೆ ಎನ್ನಲಾಗುತ್ತಿದ್ದು, ಆನಂತರ ಪ್ರಭಾಕರ್​ ರವರು ತುಂಬಾ ನೊಂದಿದ್ದರಿಂದ ಈ ಡೆತ್‌ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...