Homeಮುಖಪುಟಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ - ಅಸ್ಸಾಂ ಸಿಎಂ ಹಿಮಂತ ಶರ್ಮಾ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ – ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

ನಿವಾಸಿಗಳು ಅಥವಾ ಅವರ ಕುಟುಂಬದ ಸದಸ್ಯರು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯ ಭಾಗವಾಗಲು ಅರ್ಜಿ ಸಲ್ಲಿಸದಿದ್ದರೆ ಅಸ್ಸಾಂ ಸರ್ಕಾರ ಅಂತವರ ಆಧಾರ್ ಕಾರ್ಡ್‌ಗಾಗಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸುತ್ತದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ, ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಖಚಿತಪಡಿಸಿಕೊಳ್ಳಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ ಎಂದು ಸಿಎಂ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎನ್‌ಆರ್‌ಸಿಗೆ ಅರ್ಜಿ

“ಕಳೆದ ಎರಡು ತಿಂಗಳಲ್ಲಿ ಅಸ್ಸಾಂ ಪೋಲೀಸ್, ತ್ರಿಪುರಾ ಪೋಲೀಸ್ ಮತ್ತು ಬಿಎಸ್ಎಫ್ [ಗಡಿ ಭದ್ರತಾ ಪಡೆ] ಹಲವಾರು ನುಸುಳುಕೋರರನ್ನು ಬಂಧಿಸಿದ್ದಾರೆ. ಅದಕ್ಕಾಗಿಯೇ ಬಾಂಗ್ಲಾದೇಶದಿಂದ ಒಳನುಸುಳುವಿಕೆ ಬಗ್ಗೆ ನಮಗೆ ಕಳವಳವಿದೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯು ಅಸ್ಸಾಂನಲ್ಲಿ ಬಂಗಾಳಿ ಮುಸ್ಲಿಂ ಸಮುದಾಯವನ್ನು ಸ್ಥಳೀಯ ಜನರ ಸಂಪನ್ಮೂಲಗಳು, ಉದ್ಯೋಗಗಳು ಮತ್ತು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ “ನುಸುಳುಕೋರರು” ಎಂದು ಆಗಾಗ್ಗೆ ಹಣೆಪಟ್ಟಿ ಕಟ್ಟುತ್ತಿದೆ. ಜೊತೆಗೆ ಈ ಸಮುದಾಯವು ಅಸ್ಸಾಮಿ ಸಂಸ್ಕೃತಿ ಮತ್ತು ಗುರುತಿಗೆ ಬೆದರಿಕೆಯನ್ನುಂಟುಮಾಡುತ್ತದೆ ಎಂದು ಪಕ್ಷವೂ ಚಿತ್ರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದ್ದು, ಅದಕ್ಕಾಗಿಯೇ ನಾವು ಆಧಾರ್ ಕಾರ್ಡ್ ಕಾರ್ಯವಿಧಾನವನ್ನು ಕಠಿಣಗೊಳಿಸಲು ನಿರ್ಧರಿಸಿದ್ದೇವೆ” ಎಂದು ಹಿಮಂತ ಶರ್ಮಾ ಹೇಳಿದ್ದಾರೆ. ಆಧಾರ್ ಒಂದು ವಿಶಿಷ್ಟವಾದ 12 ಅಂಕಿಯ ಸಂಖ್ಯೆಯ ಗುರುತಿನ ಸಂಖ್ಯೆಯಾಗಿದ್ದು, ಇದನ್ನು ಶಾಸನಬದ್ಧ ಸಂಸ್ಥೆಯಾದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಭಾರತದ ನಿವಾಸಿಗಳಿಗೆ ನೀಡಲಾಗುತ್ತದೆ.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಅಸ್ಸಾಂ ಆಗಸ್ಟ್ 31, 2019 ರಂದು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯನ್ನು ಪ್ರಕಟಿಸಿತ್ತು. ಅದರಂತೆ ನಿವಾಸಿಗಳು ತಾವು ಅಥವಾ ಅವರ ಪೂರ್ವಜರು ಅಸ್ಸಾಂ ಅನ್ನು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗುತ್ತದೆ.

ಅದಾಗ್ಯೂ, ರಾಜ್ಯದಾದ್ಯಂತ 19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ಎನ್‌ಆರ್‌ಸಿಗೆ ಇನ್ನಷ್ಟೆ ಸೂಚನೆ ನೀಡಬೇಕಿದೆ.

ಸೆಪ್ಟೆಂಬರ್ 7 ರಂದು, ಅಸ್ಸಾಂನಲ್ಲಿ ಆಧಾರ್ ಸಂಖ್ಯೆಗಳನ್ನು ನೀಡುವ ಪ್ರಕ್ರಿಯೆಯನ್ನು “ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುವುದು” ಎಂದು ಹಿಮಂತ ಶರ್ಮಾ ಘೋಷಿಸಿದ್ದಾರೆ. ಅರ್ಜಿದಾರರು 2015 ರಲ್ಲಿ ಅರ್ಜಿ ಸಲ್ಲಿಸುವಾಗ ಅವರಿಗೆ ಒದಗಿಸಲಾದ ತಮ್ಮ ಎನ್‌ಆರ್‌ಸಿ ಅರ್ಜಿ ಸಂಖ್ಯೆಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.

“ಎನ್‌ಆರ್‌ಸಿ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಮಾತ್ರ ಆಧಾರ್ ಅನ್ನು ಪಡೆದುಕೊಳ್ಳಬಹುದು. ಈ ನೀತಿಯಿಂದ ಅಸ್ಸಾಂನಲ್ಲಿ ಯಾವುದೇ ಶಂಕಿತ ವಿದೇಶಿಯರು ಆಧಾರ್ ಕಾರ್ಡ್‌ಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಖಚಿತಪಡಿಸುತ್ತದೆ. ಜೊತೆಗೆ ಇದು ಅಕ್ರಮ ವಿದೇಶಿಯರ ಒಳನುಸುಳುವಿಕೆಯವನ್ನು ತಡೆಯುತ್ತದೆ.” ಎಂದು ಅವರು ಹೇಳಿದ್ದಾರೆ.

ಆಧಾರ್ ನೀಡಲು ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ನೋಡಲ್ ಏಜೆನ್ಸಿಯಾಗಲಿದೆ ಎಂದು ಮುಖ್ಯಮಂತ್ರಿ ಬುಧವಾರ ಹೇಳಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ವೃತ್ತ ಮಟ್ಟದಲ್ಲಿ ವೃತ್ತ ಅಧಿಕಾರಿಗಳು ಇದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಕಾರ್ಯವಿಧಾನದ ಪ್ರಕಾರ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಆಧಾರ್‌ಗಾಗಿ ಹೊಸ ಅರ್ಜಿಯನ್ನು ಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತದೆ ಎಂದು ಹಿಮಂತಾ ಶರ್ಮಾ ಹೇಳಿದ್ದಾರೆ. ಇದರ ನಂತರ, ಅರ್ಜಿದಾರರು ಅಥವಾ ಅವರ ಕುಟುಂಬವು ಎನ್‌ಆರ್‌ಸಿಗೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದರೆ ಸರ್ಕಲ್ ಅಧಿಕಾರಿ ಅದನ್ನು ಪರಿಶೀಲಿಸುತ್ತಾರೆ.

“ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕಂಡುಬಂದರೆ, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸರ್ಕಲ್ ಆಫೀಸರ್ ಕ್ಷೇತ್ರ ಮಟ್ಟದ ಪರಿಶೀಲನೆಗೆ ಹೋಗುತ್ತಾರೆ. ಅಧಿಕಾರಿಗೆ ಸಂಪೂರ್ಣವಾಗಿ ಮನವರಿಕೆಯಾದ ನಂತರ, ಆಧಾರ್ ಅನ್ನು ಅನುಮೋದಿಸಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ಸಿಎಂ ಅವರ ಈ ಕ್ರಮವನ್ನು ಹೋರಾಟಗಾರರು ವಿರೋಧಿಸಿದ್ದು, ಗುರುತಿನ ದಾಖಲೆಗಾಗಿ ಅರ್ಹತಾ ಮಾನದಂಡಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ. ಅವರ ಈ ತೀರ್ಮಾನವು ಆಧಾರ್ ಕಾಯಿದೆ ಮತ್ತು ಆಧಾರ್ ಪರಿಕಲ್ಪನೆಯನ್ನು ತಿದ್ದುಪಡಿ ಮಾಡುತ್ತದೆ, ಇದು ದೊಡ್ಡ ಪರಿಣಾಮಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...