Homeಮುಖಪುಟ5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ನೀಡುತ್ತೇವೆ: ಸಚಿವ ಮುನಿಯಪ್ಪ ಘೋಷಣೆ

5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ನೀಡುತ್ತೇವೆ: ಸಚಿವ ಮುನಿಯಪ್ಪ ಘೋಷಣೆ

5 ಅಕ್ಕಿ ಕೊಡುವುದರ ಜೊತೆಗೆ ಹೆಚ್ಚುವರಿ 5ಕೆಜಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂಗಳಂತೆ ಪ್ರತಿ ವ್ಯಕ್ತಿಗೆ 170 ರೂ ಕೊಡಲಾಗುವುದು.

- Advertisement -
- Advertisement -

ಅನ್ನಭಾಗ್ಯ ಅಕ್ಕಿ ನೀಡಲು ಅಕ್ಕಿ ಕೊರತೆಯಾದ ಕಾರಣ 5 ಕೆಜಿ ಅಕ್ಕಿ ನೀಡುವುದರ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಅದಕ್ಕೆ ತಗುಲುವ ಹಣವನ್ನು ಫಲಾನುಭವಿಗಳಿಗೆ ನೀಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಇಂದು ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಪ್ರತಿ ಕೆಜಿ ಅಕ್ಕಿಗೆ 34 ರೂಗಳಂತೆ ಪ್ರತಿ ವ್ಯಕ್ತಿಗೆ 170 ರೂ ಕೊಡಲಾಗುವುದು. ಹಣವನ್ನು ಬಿಪಿಎಲ್ ಕಾರ್ಡಿನಲ್ಲಿ ಮನೆಯ ಮುಖ್ಯಸ್ಥ ಎಂದು ನಮೂದಿಸಿದವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯಕ್ಕೆ 5ಕೆಜಿ ಅಕ್ಕಿ ನೀಡಲಾಗುತ್ತದೆ ಮತ್ತು ಉಳಿದುದ್ದಕ್ಕೆ ಹಣ ನೀಡಲಾಗುತ್ತದೆ. ಬಿಪಿಎಲ್ ಕಾರ್ಡಿನಲ್ಲಿ ಎಷ್ಟು ಜನರಿರುತ್ತಾರೊ ಅವರಿಗೆಲ್ಲ ಪ್ರತಿಯೊಬ್ಬರಿಗೂ 170 ರೂ ನೀಡಲಾಗುತ್ತದೆ. ಅಕ್ಕಿ ಸಿಗುವ ತನಕವೂ ಇದು ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡುದಾರರಿಗೆ 10ಕೆಜಿ ಅಕ್ಕಿ ಕೊಡುತ್ತೇವೆ ಎಂದು ನಾವು ಮಾತು ಕೊಟ್ಟಿದ್ದೇವೆ. ಈ ಕುರಿತು ಕೇಂದ್ರದ ಬಳಿ ದುಡ್ಡು ಕೊಡುತ್ತೇವೆ ಅಕ್ಕಿ ಕೊಡಿ, ನಿಮ್ಮಲ್ಲಿ ದಾಸ್ತಾನಿಗೆ ಎಂದು ಕೇಳಿಕೊಂಡೆವು. ಆದರೆ ಕೇಂದ್ರ ಸರ್ಕಾರ ಅಕ್ಕಿ ಕೊಡದೇ ರಾಜಕೀಯ ಮಾಡುತ್ತಿದೆ ಎಂದು ಇದೇ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಮಾತನಾಡಿ, ರಾಜ್ಯದ ಶೇ.95% ಜನರ ಬಿಪಿಲ್ ಕಾರ್ಡ್‌ಗೆ ಅವರ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ. ಹಾಗಾಗಿ ಜುಲೈ 1ರಿಂದಲೇ ಅನ್ನಭಾಗ್ಯ ಯೋಜನೆ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಮಾತನಾಡಿ, ನಮ್ಮ ಯೋಜನೆಗೆ ಅಕ್ಕಿ ಕೊಡುವುದಾಗಿ ಎಫ್‌ಸಿಐ ಒಪ್ಪಿಕೊಂಡು ಪತ್ರ ಕೊಟ್ಟಿತ್ತು. ಆದರೆ ಕೇಂದ್ರ ಸರ್ಕಾರದ ದ್ವೇಷ ರಾಜಕಾರಣಕ್ಕೆ ಸಿಲುಕಿ ಅಕ್ಕಿ ಕೊಡುತ್ತಿಲ್ಲ. ಹಾಗಾಗಿ ನಾವು ಕೊಟ್ಟ ಮಾತಿನಂತೆ ಜುಲೈ ತಿಂಗಳಿನಿಂದಲೇ ಅನ್ನಭಾಗ್ಯ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಅಕ್ಕಿ ದಾಸ್ತಾನು ಅಗುವವರೆಗೂ ಹೆಚ್ಚುವರಿ ಅಕ್ಕಿಯ ಬದಲಿಗೆ ಹಣ ನೀಡುವ ಯೋಜನೆ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...