Homeಮುಖಪುಟಲಖಿಂಪುರ್‌ ಖೇರಿ ಹತ್ಯಾಕಾಂಡ: ಸಚಿವ ಅಜಯ್ ಮಿಶ್ರಾ ವಾಹನದ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ

ಲಖಿಂಪುರ್‌ ಖೇರಿ ಹತ್ಯಾಕಾಂಡ: ಸಚಿವ ಅಜಯ್ ಮಿಶ್ರಾ ವಾಹನದ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ

- Advertisement -
- Advertisement -

ಲಖಿಂಪುರ್‌ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೇನಿಯ ತಂದೆ ಸಚಿವ ಅಜಯ್ ಮಿಶ್ರಾ ತೇನಿ ವಾಹನದ ಮೇಲೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಕಾರ್ಯಕರ್ತರು ಭಾನುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ವಾಹನದ ಮೇಲೆ ಮೊಟ್ಟೆಗಳನ್ನು ಎಸೆದಿದ್ದಾರೆ.

ಸಚಿವರ ಪುತ್ರ ಆರೋಪಿಯಾಗಿರುವ ಲಖಿಂಪುರ ಖೇರಿ ಹಿಂಸಾಚಾರದ ವಿರುದ್ಧ ಎಲ್ಲ ವಿದ್ಯಾರ್ಥಿಗಳಿ ಪ್ರತಿಭಟನೆ ನಡೆಸುತ್ತಿದ್ದರು. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಮಿಶ್ರಾ ಅವರು ಕಟಕ್ ಬಳಿಯ ಮುಂಡಲಿಯಲ್ಲಿರುವ ಸಿಐಎಸ್ಎಫ್ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತಿದ್ದರು.

 ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಬಂಧಿತ ಆರೋಪಿ ಆಶಿಶ್ ಮಿಶ್ರಾಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಎನ್‌ಎಸ್‌ಯುಐ ಕಾರ್ಯಕರ್ತರು ಕೇಂದ್ರ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ, ಸಚಿವರನ್ನು ಸುತ್ತುವರಿಯಲು ಯತ್ನಿಸಿದ್ದಾರೆ. ಒಡಿಶಾ ರಾಜ್ಯಕ್ಕೆ ಸಚಿವ ಅಜಯ್ ಮಿಶ್ರಾ ಭೇಟಿಯನ್ನು ವಿರೋಧಿಸುವುದಾಗಿ ಈ ಹಿಂದೆ NSUI ಘೋಷಿಸಿತ್ತು. ಪೊಲೀಸರು ಕೆಲವು ಎನ್‌ಎಸ್‌ಯುಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

‌ಅಕ್ಟೋಬರ್‌‌ 3ರಂದು ಲಖಿಂಪುರ್‌ ಖೇರಿಯಲ್ಲಿ ಮೂರು ವಾಹನಗಳು ಹರಿದು ಒಬ್ಬ ಪತ್ರಕರ್ತ ಹಾಗೂ ನಾಲ್ವರು ರೈತರು ಹತ್ಯೆಯಾಗಿದ್ದರು. ಜೊತೆಗೆ ಭುಗಿಲೆದ್ದ ಪ್ರತಿರೋಧದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರೂ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ರನ್ನು ಅಕ್ಟೋಬರ್‌‌ 9ರಂದು ಬಂಧಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ ದಾಖಲಾಗಿವೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಲಖಿಂಪುರ್ ಖೇರಿ ಘಟನೆಯ ಪ್ರಮುಖ ಆರೋಪಿ. ಘಟನೆಗೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.


ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...