Homeಮುಖಪುಟಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಕೊಲೆ

ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಕೊಲೆ

- Advertisement -
- Advertisement -

ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಹೊರವಲಯದ ನೀರಾವರಿ ಟ್ಯಾಂಕ್ ಬಳಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿದ್ದ ಸಂಪತ್(36) ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಎನ್‌ಎಸ್‌ಯುಐ ಉಸ್ತುವಾರಿಯನ್ನು ವಹಿಸಿದ್ದರು ಮತ್ತು ರಾಹುಲ್ ಗಾಂಧಿಯವರ ಐದು ತಿಂಗಳ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು.

ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ರಾಜ್ ಸಂಪತ್‌ಗೆ ಅವರ ಸ್ನೇಹಿತರು ಕೊನೆಯ ಬಾರಿ ನೋಡಿದ್ದರು. ಆ ಬಳಿಕ ಅವರು ನಾಪತ್ತೆಯಾಗಿದ್ದರು. ಸ್ಥಳೀಯರು ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬಯಲಾಗಿದೆ. ಪ್ರಾಥಮಿಕ ತನಿಖೆಯಿಂದ ಸಂಪತ್‌ನನ್ನು ಬೇರೆಡೆ ಕೊಲೆ ಮಾಡಿ ಶವವನ್ನು ಪಟ್ಟಣದ ಹೊರವಲಯದ ತೊಟ್ಟಿಯ ಬಳಿ ಎಸೆದು ಹೋಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಡಿಎಸ್ಪಿ ಶ್ರೀನಿವಾಸ ರಾವ್, ವಿಧಿವಿಜ್ಞಾನ ತಂಡದೊಂದಿಗೆ ಶವ ಪತ್ತೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಂಪತ್‌ಗೆ ಸಹ ವಕೀಲರೊಬ್ಬರ ಜತೆ ಜಮೀನು ವಿವಾದವಿದ್ದು, ಈ ಕುರಿತು ಇತ್ತೀಚೆಗೆ ಹಿರಿಯ ಪೊಲೀಸ್‌ ಅಧಿಕಾರಿಗೆ ವಾಟ್ಸಾಪ್‌ ಸಂದೇಶ ಕಳುಹಿಸಿ ಜೀವಕ್ಕೆ ಅಪಾಯವಿದೆ ಎಂದು ಹೇಳಿದ್ದರು ಎಂದು ಸಂಪತ್‌ ಅವರ ಆಪ್ತ ಮೂಲಗಳು ತಿಳಿಸಿವೆ. ಈ ಕುರಿತು ಎಲ್ಲಾ ಕೋನಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತರನ್ನು ಹೆಸರಿಸಲು ಅಥವಾ ಕೊಲೆಯ ಹಿಂದಿನ ಸಂಭವನೀಯ ಉದ್ದೇಶದ ಬಗ್ಗೆ ಪ್ರಾಥಮಿಕವಾಗಿ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಹೇಳಿದ್ದಾರೆ.

ವಕೀಲರಾಗಿರುವ ಸಂಪತ್ ಅವರು ಧರ್ಮಾವರಂ ಮಂಡಲದ ಯರ್ರಗುಂಟಪಲ್ಲೆ ಮೂಲದವರು ಆದರೆ ಎರಡು ದಶಕಗಳಿಗೂ ಹೆಚ್ಚು ಕಾಲ ಹಿಂದೂಪುರದಲ್ಲಿ ನೆಲೆಸಿದ್ದಾರೆ. ವಿದ್ಯಾರ್ಥಿ ಜೀವನದಿಂದ ರಾಜಕೀಯ ಪ್ರಾರಂಭಿಸಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುನ್ನೆಲೆಗೆ ಬಂದಿದ್ದರು ಮತ್ತು NSUIನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

ಈ ಕುರಿತು NSUI ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ರಾಜ್ ಸಂಪತ್‌ ನಿಧನಕ್ಕೆ ಸಂತಾಪವನ್ನು ಸೂಚಿಸಿದೆ. ನಿಮ್ಮ ನಾಯಕತ್ವ ಮತ್ತು ಬದ್ಧತೆಯನ್ನು NSUI ಕುಟುಂಬವು ಶಾಶ್ವತವಾಗಿ ಸ್ಮರಿಸುತ್ತದೆ. ನೀವು ಯಾವಾಗಲೂ ನಮ್ಮ ಹೃದಯದಲ್ಲಿ ಉಳಿಯುತ್ತೀರಿ ಎಂದು ಹೇಳಿಕೊಂಡಿದೆ. ಸಂಪತ್ ಕುಮಾರ್ ಹತ್ಯೆಯನ್ನು ಖಂಡಿಸಿರುವ ಕಾಂಗ್ರೆಸ್, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಇದನ್ನು ಓದಿ: ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...