Homeಮುಖಪುಟ'ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು' ಎಂಬಂತೆ NTA ಯಿಂದ ₹7.5 ಕೋಟಿಯ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

- Advertisement -
- Advertisement -

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್ ಕರೆಯುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಜವಾಬ್ದಾರಿ ಹೊತ್ತಿರುವ ಏಜೆನ್ಸಿಯೊಂದು, ಇಷ್ಟು ದಿನಗಳ ಕಾಲ ಕನಿಷ್ಠ ಭದ್ರತಾ ಮಾನದಂಡಗಳನ್ನೂ ಅಳವಡಿಸಿಕೊಳ್ಳದೆ ಸಂಪೂರ್ಣ ಉಡಾಫೆಯಿಂದ ವರ್ತಿಸಿದ್ದು ಈ ದೇಶದ ಅತಿದೊಡ್ಡ ದುರಂತ. ಇನ್ನು ಮುಂದಾದರೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ಮರುಕಳಿಸದೆ, ವಿದ್ಯಾರ್ಥಿಗಳ ಪರಿಶ್ರಮಕ್ಕೆ ಬೆಲೆ ಸಿಗುವಂತಾಗಲಿ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಂತರ, ತನ್ನ ಪರೀಕ್ಷಾ ವ್ಯವಸ್ಥೆಯ ಭದ್ರತೆಯನ್ನು ಬಲಪಡಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಮುಖ ಹೆಜ್ಜೆಯನ್ನಿಟ್ಟಿದೆ. ನವದೆಹಲಿಯಲ್ಲಿರುವ ತನ್ನ ಮುಖ್ಯ ಕಚೇರಿ, ಪ್ರಾದೇಶಿಕ ಕಚೇರಿಗಳು ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ 24×7 ತಾಸುಗಳ ಭದ್ರತಾ ಸೇವೆ ಒದಗಿಸಲು ಸುಮಾರು ₹7.5 ಕೋಟಿ ಮೌಲ್ಯದ ಟೆಂಡರ್ ಆಹ್ವಾನಿಸಿದೆ.

ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎನ್‌ಟಿಎ, ಹೌಸ್‌ಕೀಪಿಂಗ್ (ನೈರ್ಮಲ್ಯ ನಿರ್ವಹಣೆ) ಮತ್ತು ಸುರಕ್ಷಿತ ಮುದ್ರಣ (Secure Printing) ಸೇವೆಗಳಿಗಾಗಿಯೂ ಪ್ರತ್ಯೇಕ ಬಿಡ್‌ಗಳನ್ನು ಕರೆದಿದೆ ಎಂದು ಇಂಡಿಯಾ ಟುಡೆ ವರದಿ ಮಡಿದೆ.

ಜುಲೈ 25 ರಂದು ಹೊರಡಿಸಲಾದ ಟೆಂಡರ್ ದಾಖಲೆಯ ಪ್ರಕಾರ, ಆಯ್ಕೆಯಾಗುವ ಭದ್ರತಾ ಸಂಸ್ಥೆಯು ದೆಹಲಿಯ ಮಿಂಟೋ ರಸ್ತೆಯಲ್ಲಿರುವ ಎನ್‌ಟಿಎ ಪ್ರಧಾನ ಕಚೇರಿ, ಓಖ್ಲಾ ಪ್ರಾದೇಶಿಕ ಕಚೇರಿ ಮತ್ತು ಇತರ ನಿಗದಿತ ಸ್ಥಳಗಳಲ್ಲಿ ಭದ್ರತಾ ಸೇವೆಯನ್ನು ಒದಗಿಸಬೇಕಾಗುತ್ತದೆ. ಸಿಬ್ಬಂದಿ, ಭೇಟಿ ನೀಡುವ ಸಾರ್ವಜನಿಕರು, ಅತ್ಯಂತ ರಹಸ್ಯವಾದ ಪರೀಕ್ಷಾ ಸಾಮಗ್ರಿಗಳು, ಸರ್ವರ್ ಕೊಠಡಿಗಳು, ಸ್ಟ್ರಾಂಗ್ ರೂಮ್‌ಗಳು, ಗೋದಾಮುಗಳು ಮತ್ತು ದಾಖಲೆ ಕೊಠಡಿಗಳಿಗೆ ಪೂರ್ಣ ಪ್ರಮಾಣದ ಭದ್ರತೆ ನೀಡುವುದು ಈ ಸಂಸ್ಥೆಯ ಹೊಣೆಯಾಗಿರುತ್ತದೆ.

ಈ ಗುತ್ತಿಗೆ ಅವಧಿಯು ಆರಂಭದಲ್ಲಿ ಎರಡು ವರ್ಷಗಳಾಗಿದ್ದು, ತೃಪ್ತಿಕರ ಸೇವೆಯ ಆಧಾರದ ಮೇಲೆ ತಲಾ ಒಂದು ವರ್ಷದಂತೆ ಎರಡು ಬಾರಿ ವಿಸ್ತರಿಸುವ ಅವಕಾಶವಿದೆ. ಆಸಕ್ತ ಸಂಸ್ಥೆಗಳು ಆಗಸ್ಟ್ 17 ರ ಮಧ್ಯಾಹ್ನ 3 ಗಂಟೆಯವರೆಗೆ ಬಿಡ್‌ಗಳನ್ನು ಸಲ್ಲಿಸಬಹುದಾಗಿದ್ದು, ಅದೇ ದಿನ ತಾಂತ್ರಿಕ ಬಿಡ್‌ಗಳನ್ನು ತೆರೆಯಲಾಗುತ್ತದೆ. ಭದ್ರತೆ ಮತ್ತು ಹೌಸ್‌ಕೀಪಿಂಗ್ ಟೆಂಡರ್‌ಗಳಿಗೆ ಆಗಸ್ಟ್ 17 ಕೊನೆಯ ದಿನವಾಗಿದ್ದರೆ, ಮುದ್ರಣ ಸೇವೆಗಳ ಟೆಂಡರ್‌ಗೆ ಆಗಸ್ಟ್ 20 ಕೊನೆಯ ದಿನವಾಗಿದೆ.

ಸಾಮಾನ್ಯವಾಗಿ ಸರ್ಕಾರಿ ಇಲಾಖೆಗಳು ಅನುಸರಿಸುವ ‘ಕಡಿಮೆ ವೆಚ್ಚದ ಬಿಡ್‌’ (Lowest Bid) ಮಾದರಿಯನ್ನು ಬದಿಗೊತ್ತಿ, ಎನ್‌ಟಿಎ ಈ ಬಾರಿ ‘ಗುಣಮಟ್ಟ ಮತ್ತು ವೆಚ್ಚ ಆಧಾರಿತ ಆಯ್ಕೆ’ (QCBS) ವಿಧಾನವನ್ನು ಆಯ್ಕೆ ಮಾಡಿಕೊಂಡಿದೆ. ದೇಶದ ಪ್ರಮುಖ ಪರೀಕ್ಷಾ ಮೂಲಸೌಕರ್ಯವನ್ನು ರಕ್ಷಿಸಲು ತಾಂತ್ರಿಕ ಸಾಮರ್ಥ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಅಗತ್ಯ ಎಂಬ ಕಾರಣಕ್ಕೆ ಈ ನಿರ್ಧಾರ ತಳೆಯಲಾಗಿದೆ. ಈ ವ್ಯವಸ್ಥೆಯಡಿ ತಾಂತ್ರಿಕ ಸಾಮರ್ಥ್ಯಕ್ಕೆ ಶೇ. 70 ರಷ್ಟು ಮತ್ತು ಆರ್ಥಿಕ ಬಿಡ್‌ಗೆ ಶೇ. 30 ರಷ್ಟು ಅಂಕಗಳನ್ನು ನಿಗದಿಪಡಿಸಲಾಗಿದೆ.

ತಾಂತ್ರಿಕ ಮೌಲ್ಯಮಾಪನದಲ್ಲಿ ಕನಿಷ್ಠ 70 ಅಂಕಗಳನ್ನು ಪಡೆಯದ ಸಂಸ್ಥೆಗಳನ್ನು ಆರ್ಥಿಕ ಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದಿಲ್ಲ. ಅರ್ಹತೆಗಾಗಿ ಅರ್ಜಿದಾರರು ಭದ್ರತಾ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷಗಳ ಅನುಭವ, ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಸರಾಸರಿ ₹10 ಕೋಟಿ ವಾರ್ಷಿಕ ವಹಿವಾಟು ಹಾಗೂ ಕೇಂದ್ರ ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ವಿಮಾನ ನಿಲ್ದಾಣಗಳು ಅಥವಾ ಮೆಟ್ರೋ ಜಾಲಗಳಂತಹ ಉನ್ನತ ಭದ್ರತಾ ಸಂಸ್ಥೆಗಳಿಗೆ ಸೇವೆ ನೀಡಿದ ಅನುಭವ ಹೊಂದಿರಬೇಕಾಗುತ್ತದೆ.

ಆಯ್ಕೆಯಾಗುವ ಭದ್ರತಾ ಸಂಸ್ಥೆಯು ಎನ್‌ಟಿಎ ಆವರಣಕ್ಕೆ ಬರುವವರ ಗುರುತಿನ ಚೀಟಿ ತಪಾಸಣೆ, ಬಯೋಮೆಟ್ರಿಕ್ ಹಾಜರಾತಿ ಮತ್ತು ತಂತ್ರಜ್ಞಾನ ಆಧಾರಿತ ಜಿಪಿಎಸ್ (GPS) ಗಸ್ತು ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಪ್ರವೇಶ ದ್ವಾರಗಳಲ್ಲಿ ಡೋರ್ ಫ್ರೇಮ್ ಮತ್ತು ಹ್ಯಾಂಡ್-ಹೆಲ್ಡ್ ಮೆಟಲ್ ಡಿಟೆಕ್ಟರ್‌ಗಳನ್ನು ಬಳಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆ, ಭದ್ರತಾ ನಿಯಮಾವಳಿಗಳು ಮತ್ತು ಐಟಿ ಮೂಲಸೌಕರ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸದಂತೆ ಕಟ್ಟುನಿಟ್ಟಿನ ಗೌಪ್ಯತಾ ಷರತ್ತುಗಳನ್ನು ವಿಧಿಸಲಾಗಿದೆ. ಗುತ್ತಿಗೆ ಅವಧಿ ಮುಗಿದ ನಂತರವೂ ಈ ಗೌಪ್ಯತೆ ಮುಂದುವರಿಯಲಿದೆ.

ಮೇ 3 ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಆ ಪರೀಕ್ಷೆಯನ್ನು ರದ್ದುಗೊಳಿಸಿ, ಜೂನ್ 21 ರಂದು ಮರುಪರೀಕ್ಷೆ ನಡೆಸಲಾಗಿತ್ತು. ಈ ಘಟನೆಯು ದೇಶದ ಪರೀಕ್ಷಾ ವ್ಯವಸ್ಥೆಯನ್ನು ಅಮೂಲಾಗ್ರವಾಗಿ ತಿದ್ದುಪಡಿ ಮಾಡಲು ವೇದಿಕೆ ಕಲ್ಪಿಸಿದ್ದು, ಸಂಸತ್ತು ‘ಪ್ರಶ್ನೆಪತ್ರಿಕೆ ಸೋರಿಕೆ ತಡೆ ವಿಧೇಯಕ’ವನ್ನು (Anti-Paper Leak Bill) ಅಂಗೀಕರಿಸಿತ್ತು.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ನಂಬಿಕೆಯನ್ನು ಮರುಸ್ಥಾಪಿಸಲು ಎನ್‌ಟಿಎ ಈಗ ಮುದ್ರಣ, ಸಂಗ್ರಹಣೆ, ಸ್ಥಳದ ಭದ್ರತೆಯಿಂದ ಹಿಡಿದು ಪ್ರತಿಯೊಂದು ಹಂತದಲ್ಲೂ ತಂತ್ರಜ್ಞಾನ ಮತ್ತು ಕಟ್ಟುನಿಟ್ಟಿನ ಭದ್ರತೆಯನ್ನು ಅಳವಡಿಸಿಕೊಳ್ಳುತ್ತಿದೆ. ಈ ಎಲ್ಲಾ ಬೆಳವಣಿಗೆಗಳು NTA ಮುಂದಿನ ದಿನಗಳಲ್ಲಿ ಪಾರದರ್ಶಕವಾಗಿ ನಡೆದುಕೊಳ್ಳಲಿದೆಯೇ? ವಿದ್ಯಾರ್ಥಿಗಳ ನಂಬಿಕೆಯನ್ನು ಉಳಿಸಿಕೊಳ್ಳದೆಯೇ ಕಾದುನೊಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...