Homeಮುಖಪುಟನುಹ್ ಹಿಂಸಾಚಾರ: ಸುಳ್ಳು ಮಾಹಿತಿ ಟ್ವೀಟ್ ಮಾಡಿದ ಸುದರ್ಶನ್ ನ್ಯೂಸ್ ಸಂಪಾದಕ ಅರೆಸ್ಟ್

ನುಹ್ ಹಿಂಸಾಚಾರ: ಸುಳ್ಳು ಮಾಹಿತಿ ಟ್ವೀಟ್ ಮಾಡಿದ ಸುದರ್ಶನ್ ನ್ಯೂಸ್ ಸಂಪಾದಕ ಅರೆಸ್ಟ್

- Advertisement -
- Advertisement -

ಹರಿಯಾಣದಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಟ್ವೀಟ್ ಮಾಡಿದ್ದಕ್ಕಾಗಿ ಸುದರ್ಶನ್ ನ್ಯೂಸ್‌ನ ಎಡಿಟರ್ ಮುಖೇಶ್ ಕುಮಾರ್ ಅವರನ್ನು ಶುಕ್ರವಾರ ಗುರುಗ್ರಾಮ್ ಪೊಲೀಸರು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜುಲೈ 31ರಂದು ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಯ ಮೆರವಣಿಗೆ ಆಯೋಜಿಸಿದ್ದರು. ಈ ವೇಳೆ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆಗಳು ಆರಂಭವಾದವು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೆ ಗಲಾಟೆಗಳು ಶುರುವಾದವು.

ಈ ಹಿಂಸಾಚಾರದಲ್ಲಿ ಇಬ್ಬರು ಗೃಹರಕ್ಷಕರು ಮತ್ತು ಒಬ್ಬ ಬಜರಂಗದಳದ ಸದಸ್ಯ ಸೇರಿದಂತೆ ಐದು ಜನರನ್ನು ಸಾವಿಗೀಡಾದರು. ಆ ಬಳಿಕ ತ್ವರಿತವಾಗಿ ನುಹ್‌ನ ಆಚೆಗೂ ಹಿಂಸಾಚಾರ ಹರಡಿತು.ಗುರುಗ್ರಾಮ್‌ನಲ್ಲಿ ಹಿಂದುತ್ವವಾದಿ ಗುಂಪುಗಳು ಅತಿರೇಕಕ್ಕೆ ಹೋದವು. ಸೆಕ್ಟರ್ 57ರಲ್ಲಿ ಮಸೀದಿಯನ್ನು ಸುಟ್ಟುಹಾಕಿದರು, ಅದರ ಉಪ ಇಮಾಮ್ ಅನ್ನು ಕೊಂದರು ಮತ್ತು ಮರುದಿನ ಸೆಕ್ಟರ್ 70ರಲ್ಲಿ ಮುಸ್ಲಿಂ ವಲಸೆ ಕಾರ್ಮಿಕರ ಅಂಗಡಿಗಳು ಮತ್ತು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು.

ಇದನ್ನೂ ಓದಿ: ನುಹ್ ಹಿಂಸಾಚಾರ: ಮುಸ್ಲಿಮರ ಆರ್ಥಿಕ ಬಹಿಷ್ಕಾರ ಸ್ವೀಕಾರಾರ್ಹವಲ್ಲ ಎಂದ ಸುಪ್ರೀಂ

ಸುದರ್ಶನ್ ನ್ಯೂಸ್‌ನ ಎಡಿಟರ್ ಮುಖೇಶ್ ಕುಮಾರ್ ಅವರು ಟ್ವೀಟ್ ಮಾಡಿ, ”ಆಗಸ್ಟ್ 8 ರಂದು ಕತಾರ್‌ನ ಮಾಧ್ಯಮ ಸಂಸ್ಥೆ ಅಲ್ ಜಜೀರಾನ ಪತ್ರಕರ್ತರೊಬ್ಬರು ಗುರುಗ್ರಾಮ್ ಪೊಲೀಸ್ ಕಮಿಷನರ್‌ಗೆ ಕರೆ ಮಾಡಿ ಹಿಂಸಾಚಾರ ವಿಚಾರದಲ್ಲಿ ಹಿಂದೂಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ” ಎಂದು ಆರೋಪಿಸಿದ್ದರು.

”ಅದರಂತೆ ಪೊಲೀಸ್ ಕಮಿಷನರ್ ಹಿಂದೂ ಕಾರ್ಯಕರ್ತರನ್ನು ಎಲ್ಲೆಂದರಲ್ಲಿ ಬಂಧನ ಮಾಡಿಸಿದ್ದಾರೆ” ಎಂದು ಟ್ವೀಟ್ ಮಾಡಿದ ಕುಮಾರ್ ಅವರು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಟ್ಯಾಗ್ ಮಾಡಿದ್ದರು.

ಗುರುಗ್ರಾಮ್‌ದ ಪೊಲೀಸರು ಕುಮಾರ್ ಅವರ ಟ್ವೀಟ್ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವಂತಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಮುಖೇಶ್ ಕುಮಾರ್ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66 ಸಿ ಹಾಗೂ ಸೆಕ್ಷನ್ 153 ಬಿ (ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ, ಸಮರ್ಥನೆಗಳು), 469 (ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ನಕಲಿ), 501 (ಮುದ್ರಣ ಅಥವಾ ಕೆತ್ತನೆ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ 505 (1)(ಸಿ) (ಪ್ರಚೋದಿಸುವ ಉದ್ದೇಶದಿಂದ ಹೇಳಿಕೆಗಳು) ಮಾನಹಾನಿಕರ ಪ್ರಕರಣಗಳನ್ನು ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...