Homeಕರೋನಾ ತಲ್ಲಣದೇಶದಲ್ಲಿ ಒಂದೇ ದಿನದಲ್ಲಿ 2.6 ಲಕ್ಷ ದಾಟಿದ ಕೊರೊನಾ ಪ್ರಕರಣಗಳ ಸಂಖ್ಯೆ

ದೇಶದಲ್ಲಿ ಒಂದೇ ದಿನದಲ್ಲಿ 2.6 ಲಕ್ಷ ದಾಟಿದ ಕೊರೊನಾ ಪ್ರಕರಣಗಳ ಸಂಖ್ಯೆ

- Advertisement -
- Advertisement -

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,61,500 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಪ್ರತಿ ದಿನ 2 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ನಾಲ್ಕನೆ ದಿನ ಇದಾಗಿದೆ. ಕಳೆದ ಒಂದು ವಾರದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ 1,501 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,47,88,109 ದಾಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 18,01,316 ಲಕ್ಷ ದಾಟಿದೆ.

ಕೊರೊನಾ ಉಲ್ಬಣದ ಮಧ್ಯೆ ಹಲವು ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಮತ್ತು ಲಸಿಕೆಗಳು, ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಗಳು ಹೆಚ್ಚಾಗಿವೆ.  ಕೊರೊನಾ ನಿಯಂತ್ರಣಕ್ಕಾಗಿ ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂಗಳು, ವಾರಾಂತ್ಯದ ಕರ್ಫ್ಯೂಗಳು ಸೇರಿದಂತೆ ಹಲವು ನಿರ್ಬಂಧಗಳನ್ನು ಹಾಕಲಾಗಿದೆ.

ಇದನ್ನೂ ಓದಿ: ಕೊರೊನಾ ಎರಡನೆ ಅಲೆಗೆ ವೇದಿಕೆ ಒದಗಿಸಿದ್ದು ಮೋದಿ ಸರ್ಕಾರದ ಅಪಕ್ವ ನಿರ್ಧಾರಗಳು, ಕಣ್ಕಟ್ಟು ಅಂಕಿಅಂಶಗಳು

ಮಹಾರಾಷ್ಟ್ರದಲ್ಲಿ 67,123, ಉತ್ತರ ಪ್ರದೇಶದಲ್ಲಿ 27,734, ದೆಹಲಿಯಲ್ಲಿ 24,375, ಕರ್ನಾಟಕದಲ್ಲಿ 17,489, ಮತ್ತು ಛತ್ತೀಸ್‌ಗಢದಲ್ಲಿ 16,083 ಪ್ರಕರಣಗಳು ದಾಖಲಾಗಿವೆ. ಇವು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ದಾಖಲಿಸಿದ ಐದು ರಾಜ್ಯಗಳಾಗಿವೆ.

ಕೊರೊನಾ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದರು.

ಟ್ವೀಟ್ ಮೂಲಕ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ನರೇಂದ್ರ ಮೋದಿ, “ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧತೆಯನ್ನು ಪರಿಶೀಲಿಸಲಾಗಿದೆ. ಔಷಧಿಗಳು, ಆಮ್ಲಜನಕ, ವೆಂಟಿಲೇಟರ್‌ಗಳು ಮತ್ತು ವ್ಯಾಕ್ಸಿನೇಷನ್‌ಗೆ ಸಂಬಂಧಿಸಿದ ಅಂಶಗಳನ್ನು ಚರ್ಚಿಸಲಾಯಿತು. ನಾವು ಕಳೆದ ವರ್ಷ ಮಾಡಿದಂತೆ, ಇನ್ನೂ ಹೆಚ್ಚಿನ ವೇಗ ಮತ್ತು ಸಮನ್ವಯದೊಂದಿಗೆ ಕೋವಿಡ್ ವಿರುದ್ಧ ಯಶಸ್ವಿಯಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...