Homeಮುಖಪುಟಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

- Advertisement -
- Advertisement -

ಕರ್ನಾಟದಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಅಭಿಮಾನಗಳ ಹರ್ಷೋದ್ಗಾರ ಮುಗಿಲು ಮುಟ್ಟಿತು. ಸಿದ್ದರಾಮಯ್ಯನವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿ.ಕೆ ಶಿವಕುಮಾರ್ ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡಿದರು.

ಸಿಎಂ ಸಿದ್ದರಾಮಯ್ಯನವರ ಪ್ರಮಾಣ ವಚನ

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಪರ್ಯಾಯಲೋಚನೆಗೆ ತರಲಾಗುವ ಅಥವಾ ನನಗೆ ತಿಳಿದುಬರುವ ಯಾವುದೇ ವಿಷಯವನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳ ಯುಕ್ತನಿರ್ವಹಣೆಗೆ ಅಗತ್ಯವಾಗಬಹುದಾದ ಸಂದರ್ಭದಲ್ಲದೆ, ಅನ್ಯತ ಯಾರೇ ವ್ಯಕ್ತಿಗೆ ಅಥವಾ ವ್ಯಕ್ತಿಗಳಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತಿಳಿಸುವುದಿಲ್ಲ ಅಥವಾ ಬಹಿರಂಗಪಡಿಸುವುದಿಲ್ಲ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಡಿಸಿಎಂ ಡಿ.ಕೆ ಶಿವಕುಮಾರ್‌ರವರ ಪ್ರಮಾಣ ವಚನ

ನಾನು ಡಿ.ಕೆ ಶಿವಕುಮಾರ್ ಎಂಬ ಹೆಸರಿನವನಾದ ನಾನು ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ನಾನು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು ಮತ್ತು ಕರ್ನಾಟಕದ ರಾಜ್ಯದ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣದಿಂದ ನಿರ್ವಹಿಸುತ್ತೇನೆಂದು, ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ ದ್ವೇಷವಿಲ್ಲದೆ, ಎಲ್ಲ ಬಗೆಯ ಜನರಿಗೆ ಸಂವಿಧಾನ ಮತ್ತು ಕಾನೂನಿಗೆ ಅನುಸಾರವಾಗಿ, ನ್ಯಾಯವಾದುದ್ದನ್ನೇ ಮಾಡುತ್ತೇನೆಂದು ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ದೃಡೀಕರಣ ಮಾಡುತ್ತೇನೆ.

ಸಚಿವ ಸತೀಶ್ ಜಾರಕಿಹೊಳಿಯವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಜಿ ಪರಮೇಶ್ವರ್‌ರವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜಮೀರ್ ಅಹಮದ್ ಖಾನ್ ಅಲ್ಲಾ ಮತ್ತು ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದ ಮಂತ್ರಿಗಳು ದೇವರ ಹೆಸರಿನಲ್ಲಿ ಪ್ರಮಾನ ವಚನ ಸ್ವೀಕರಿಸಿದರು.

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ.

ಕರ್ನಾಟದಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ, ಈ ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಿಕ್ಕ ಜಯವಾಗಿದೆ. ಅವರೆಲ್ಲರ ಆರ್ಶಿವಾದದಿಂದ ಇವತ್ತು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ರಾಜ್ಯದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಮೂಲಕ ಪ್ರಚಾರ ಆರಂಭವಾಯಿತು. ಅವರ ಜೊತೆಗೆ ಖರ್ಗೆ ಮತ್ತು ಪ್ರಿಯಾಂಕ ಗಾಂಧಿಯವರು ಸೇರಿದಂತೆ ರಾಷ್ಟ್ರನಾಯಕರು ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಸಾಹಿತಿಗಳು, ಸಂಘಟನೆಗಳು, ಚಿಂತಕರು ಕಾಂಗ್ರೆಸ್ ಪಕ್ಷದ ಪರವಾಗಿ ಆರ್ಶಿವಾದ ಮಾಡಿದ್ದಾರೆ. ಮಹಿಳೆಯರು, ರೈತರು, ಕಾರ್ಮಿಕರಿಗೆ ಧನ್ಯವಾದಗಳು” ಎಂದರು.

ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ಕೊಡುತ್ತೇವೆ. ಜನರು ಬದಲಾವಣೆ ಬಯಸಿದ್ದಾರೆ. ಹಾಗಾಗಿ ಐದು ಗ್ಯಾರಂಟಿಗಳನ್ನು ಇವತ್ತೇ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಕೊಡುವುದರ ಮೂಲಕ ಆದೇಶ ಹೊರಡಿಸಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಇದು ಕನ್ನಡ ನಾಡಿನ ಎಲ್ಲ ಜನರಿಗೆ ನಮ್ಮ ಹೊಸ ಸರ್ಕಾರ ಕೊಡುತ್ತಿರುವ ಭರವಸೆ, ವಾಗ್ದಾನವಾಗಿದೆ. ಈ ವಾಗ್ದಾನವನ್ನು ಈಡೇರಿಸಿಯೇ ತೀರುತ್ತೇವೆ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಐದು ವರ್ಷದಲ್ಲಿ ಪೂರೈಸುತ್ತೇವೆ. ಹಿಂದೆ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆಯೇ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ನೂತನ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾದ ದೇಶದ ಪ್ರಮುಖ ವಿರೋಧ ಪಕ್ಷದ ಮುಖಂಡರಿವರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...