Homeಮುಖಪುಟಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

ಮರಾಠರಿಗೆ OBC ವರ್ಗದಡಿ ಮೀಸಲಾತಿ ನೀಡುವುದಕ್ಕೆ ಒಬಿಸಿ ಸಮುದಾಯ ವಿರೋಧ

- Advertisement -
- Advertisement -

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮವನ್ನು ವಿರೋಧಿಸಲು ಒಬಿಸಿ ನಾಯಕರು ನಿರ್ಧಾರವನ್ನು ತೆಗೆದುಕೊಂಡಿದ್ದು, ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದಾರೆ.

ಸರ್ಕಾರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಲು ಮುಂದಿನ 20 ದಿನಗಳಲ್ಲಿ 3 ರ್ಯಾಲಿಗಳನ್ನು ಆಯೋಜಿಸಲು ಒಬಿಸಿ ಸಮುದಾಯದ ನಾಯಕರು ಒಟ್ಟಾಗಿ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಈ ಸಭೆಗಳಲ್ಲಿ ತೇಜಸ್ವಿ ಯಾದವ್ ಸೇರಿದಂತೆ ದೇಶಾದ್ಯಂತದ ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಒಬಿಸಿ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.

ಮೊದಲ ಸಭೆ ನ 17ರಂದು ಜಲ್ನಾದ ಅಂಬಾಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಇದೇ ಸ್ಥಳದಲ್ಲಿ ಮರಾಠ ಮೀಸಲಾತಿ ಪರ ಹೊರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ಈ ಹಿಂದೆ ಅಮರಣಾಂತ ಉಪವಾಸ ಕುಳಿತಿದ್ದರು. ನ.26 ರಂದು ಹಿಂಗೋಲಿಯಲ್ಲಿ 2ನೇ ಸಭೆ ಮತ್ತು 3ನೇ ಸಭೆಯನ್ನು ಯವತ್ಮಾಲ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು OBC ನಾಯಕರ ನಿಯೋಗ ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿಪಿ ನಾಯಕರಾದ (ಅಜಿತ್ ಪವಾರ್ ಬಣ) ಛಗನ್ ಭುಜಬಲ್ ಅವರನ್ನು ವಿಷಯದ ಕುರಿತು ಚರ್ಚಿಸಲು ಭೇಟಿಯಾಗಿದ್ದರು. ಈ ಹಿಂದೆ ಭುಜಬಲ್ ಅವರು ಒಬಿಸಿಗಳಿಗೆ ಅನ್ಯಾಯವಾಗುವುದನ್ನು ಸಹಿಸುವುದಿಲ್ಲ ಮತ್ತು ಮೌನವಾಗಿರುವುದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಏಕನಾಥ್ ಶಿಂಧೆ ಸರ್ಕಾರವು 2024ರ ಜ.2ರೊಳಗೆ ಮರಾಠರಿಗೆ ಒಬಿಸಿ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಮೀಸಲಾತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದೆ ಮತ್ತು ಅವರನ್ನು ಒಬಿಸಿ ಕುಂಬಿ ವರ್ಗಕ್ಕೆ ಸೇರಿಸುವುದಾಗಿ ಹೇಳಿದೆ. ಈ ಬೆಳವಣಿಗೆಯು ಒಬಿಸಿ ಸಮುದಾಯದ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಮರಾಠರು ಒಬಿಸಿಗಳ ಮೀಸಲಾತಿಯನ್ನು ಕಸಿದುಕೊಳ್ಳುತ್ತಾರೆ ಎಂದು ಆತಂಕದಲ್ಲಿದ್ದಾರೆ.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ.  ಶೀಘ್ರದಲ್ಲೇ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದಾರೆ.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಅಭಿಪ್ರಾಯಪಟ್ಟಿದ್ದಾರೆ. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ.  ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ತಮ್ಮ ಆಂದೋಲನವನ್ನು ಪ್ರಾರಂಭಿಸಲು ದೀಪಾವಳಿ ಹಬ್ಬಗಳು ಮುಕ್ತಾಯಗೊಳ್ಳಲು ಕಾಯುತ್ತಿದ್ದೇವೆ ಅದರ ನಂತರ ನಾವು ರಾಜ್ಯದಲ್ಲಿ ಒಬಿಸಿ ಜನರ ರ್ಯಾಲಿಗಳನ್ನು ನಡೆಸುತ್ತೇವೆ. ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಜನಸಂಖ್ಯಾ ನಿಯಂತ್ರಣದ ಕುರಿತ ಹೇಳಿಕೆ: ಬಿಹಾರ ಸಿಎಂ ನಿತೀಶ್‌ ಕುಮಾರ್ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....