Homeಕರ್ನಾಟಕಶ್ರದ್ಧಾಂಜಲಿ; ಅಪವಾದಗಳೇ ನಿಯಮಗಳಾದಾಗ

ಶ್ರದ್ಧಾಂಜಲಿ; ಅಪವಾದಗಳೇ ನಿಯಮಗಳಾದಾಗ

- Advertisement -
- Advertisement -

ಮೊದಲ ದೃಶ್ಯ

ನಾಟಕ: ಬ್ರೆಕ್ಟ್‌ನ ’ಅಪವಾದ ಮತ್ತು ನಿಯಮ’; ಅದರಲ್ಲಿ ಅಪಾರವಾದ ಸಾಮಾನುಗಳನ್ನು ಹೊತ್ತ ಕೂಲಿಯೊಬ್ಬ “ಬಡವರು ಸತ್ತರೆ ಸುಡಲಿಕ್ಕೆ ಸೌದಿಲ್ಲೋ ಒಡಲ ಬೆಂಕೀಲಿ ಹೆಣ ಬೆಂದೋ! ದ್ಯಾವರೇ ಬಡವರಿಗೆ ಸಾವ ಕೊಡ ಬ್ಯಾಡೋ” ಎಂದು ಹಾಡುತ್ತಾ ಬರುತ್ತಾನೆ. ಹಾಡುವ ಕೂಲಿಯನ್ನು ಕಂಡು ಸಾಹುಕಾರ ಕಸಿವಿಸಿಗೊಳ್ಳುತ್ತಾನೆ. ನೀರಿಗಾಗಿ ಚಡಪಡಿಸುತ್ತಾನೆ. ಕೂಲಿ ತನ್ನ ಹತ್ತಿರ ಇರುವ ನೀರನ್ನು ಕೊಡಲು ಹೋದಾಗ ಸಾಹುಕಾರ ಅವನನ್ನು ಗುಂಡಿಟ್ಟು ಕೊಲ್ಲುತ್ತಾನೆ. ಮುಂದೆ ನ್ಯಾಯಾಲಯದಲ್ಲಿ ಬರುವ ತೀರ್ಪು “ಕೂಲಿಯೊಬ್ಬ ಸಾಹುಕಾರನ ಕಡೆ ನುಗ್ಗಿ ಬಂದರೆ, ನಿಯಮದಂತೆ ಆತ ಕೊಲ್ಲಲು ಬಂದಿದ್ದಾನೆಂದು ತೀರ್ಮಾನಿಸಬೇಕೇ ಹೊರತು ಸಹಾಯ ಮಾಡಲು ಬಂದ ಎಂದಲ್ಲ” ಎಂದು.

ಕೊನೆಯ ದೃಶ್ಯ

ನಾಟಕ: ’ಕರ್ಣಭಾರ’; ಕುಂದಾಪುರದ ಅತಿ ಸಣ್ಣ ಬುಡಕಟ್ಟು ನಾಯರಿ ಸಮುದಾಯದ ಎದುರು ನಾಟಕ ನಡೆಯುತ್ತಿದೆ. ಕ್ಷತ್ರಿಯನ ವೇಶದಲ್ಲಿ ಕರ್ಣನ ಪಾತ್ರಧಾರಿ ಪ್ರವೇಶಿಸಿ, ಮುಂದೆ ಬರುವ ಕಥೆಯಲ್ಲಿ ಕ್ಷತ್ರಿಯನಲ್ಲ ಎಂಬುದಕ್ಕೆ, ಪರಶುರಾಮನ ಶಾಪ ಪಡೆದ ಕಥೆಯನ್ನು ಹೇಳಿ, ಚಂಡೆ ಸದ್ದಿನ ಉನ್ಮಾದದಲ್ಲಿ ತನ್ನನ್ನೇ ಕೊಂದುಕೊಳ್ಳುವುದಕ್ಕೆ ಮುಂದಾಗುತ್ತಾನೆ. ಸಾಯುವುದೇ ನಿಜವೆಂದಾದರೂ, ಬ್ರಾಹ್ಮಣನ ವೇಷದಲ್ಲಿ ಬಂದ ಇಂದ್ರನಿಗೆ ಕವಚ ಕುಂಡಲಗಳನ್ನು ದಾನಕೊಟ್ಟು ಬೀಗುವ ಕರ್ಣ ನಿಷ್ಕ್ರಮಿಸುತ್ತಾನೆ.

ಈ ಎರಡು ವಿಭಿನ್ನ ರೀತಿಯ ದೃಶ್ಯಗಳಾದರೂ, ಅವುಗಳ ನಡುವೆ ಸಂಬಂಧದ ಪಯಣ ಬೆಳೆಸಿದವರು ಗೋಪಾಲಕೃಷ್ಣ ನಾಯರಿ. ಕುಂದಾಪುರ ತಾಲ್ಲೂಕಿನ ಸಾಲಿಗ್ರಾಮದ ಕಾರ್ಕಡ ಶಾಲೆಯ ಹಿಂದೆ ಇದ್ದ ಹಾಡಿಗಳ ಮಧ್ಯದ ಚಿಕ್ಕ ಬುಡಕಟ್ಟಿಗೆ ಸೇರಿದ ನಾಯರಿ ಅಲ್ಲಿನ ಅನೇಕಾನೇಕ ಮಾಣಿಗಳಂತೆ ಹದಿಹರೆಯದ ವಯಸ್ಸಿನಲ್ಲೇ ಬೆಂಗಳೂರಿಗೆ ಬಂದು ಹೋಟೆಲ್ ಕೆಲಸ ಮಾಡುತ್ತಾ ಸಂಜೆ ಕಾಲೇಜಿಗೆ ಸೇರಿಕೊಂಡರು. ಅಲ್ಲಿದ್ದ ಹೊಸಬಗೆಯ ನಾಟಕಗಳ ಹರಿಕಾರರಲ್ಲಿ ಒಬ್ಬರಾದ ಕ ವೆಂ ರಾಜಗೋಪಾಲರ ಪ್ರಭಾವದಲ್ಲಿ ಹೊಸ ಅಲೆಯ ನಾಟಕಗಳಲ್ಲಿ ಭಾಗವಹಿಸಿದರು. 1972- ಬೆಂಗಳೂರಿನಲ್ಲಿ ಕನ್ನಡ ರಂಗಭೂಮಿ ಹೊಸ ತಿರುವ ಪಡೆಯುತ್ತಿದ್ದ ಕಾಲ. ಆಗ ಆ ರಂಗಪ್ರವೇಶ ಮಾಡಿದ ನಾಯರಿ, ಮೇಲೆ ಹೇಳಿದ ’ಅಪವಾದ ಮತ್ತು ನಿಯಮ’ ನಾಟಕದ ಕೂಲಿ ಆಳಿನ ಪಾತ್ರ ಮಾಡಿದ್ದರು. ಅಲ್ಲಿ ಆ ಪಾತ್ರದ ದುರಂತತೆಯೇ, ಭಾಸನ ’ಕರ್ಣಭಾರ’ದ ದುರಂತ ಚಿತ್ರಣವಾಗಿ ಬೆಳೆದು ನಿಂತಿರುವುದು. ನಾಯರಿ ಮತ್ತು ಅವರಂತಹ ಕೆಲವೇ ಮಂದಿ ರಂಗ ಪ್ರತಿಭೆಗಳ ದುಃಖಪೂರಿತ ಚರಿತ್ರೆಯಾಗಿ ಕಾಣುತ್ತದೆ ನಮ್ಮ ಸಾಂಸ್ಕೃತಿಕ ಲೋಕದ ದುರಂತ.

ಯಾವ ಸಾಂಸ್ಥಿಕ ಬೆಂಬಲವೂ ಇಲ್ಲದ ನಾಯರಿ ಕೇವಲ ತಮ್ಮ ಪ್ರತಿಭೆಯಿಂದಲೇ ಶ್ರೀರಂಗರಂಥವರ ಗಮನ ಸೆಳೆದು ಎನ್‌ಎಸ್‌ಡಿಗೆ ಕಲಿಯುವುದಕ್ಕೆ ಹೋಗಲು ಸಾಧ್ಯವಾಯಿತು. ಅಲ್ಲಿ ಆಗ ಬಿ ವಿ ಕಾರಂತರು ನಿರ್ದೇಶಕರು; ಅವರ ನಿರ್ದೇಶನದ ನಾಟಕಗಳಲ್ಲಿ ಅವರ ಕಲ್ಪನೆಯನ್ನೂ ಮೀರಿ ಅಭಿನಯಿಸಿದ ನಾಯರಿ, ಒಂದು ವರ್ಷ ಎನ್‌ಎಸ್‌ಡಿಯ ರೆಪೆರ್ಟರಿಯಲ್ಲಿ ಸೇರಿದ್ದು ಅಭಿನಯದ ವಿಶೇಷ ತರಬೇತಿಯ ಫೆಲೋಶಿಪ್ ಅಡಿಯಲ್ಲಿ. ಆಗ ಎನ್ವಿರಾನ್ಮೆಂಟಲ್ ಥಿಯೇಟರ್ ಎಂದು ಹೊಸ ಮಾದರಿಯೊಂದು ಜನಪ್ರಿಯವಾಗತೊಡಗಿತ್ತು. ಅದನ್ನು ಪರಿಚಯಿಸಿದ್ದ ರಿಚರ್ಡ್ ಶೆಕ್ನರ್ ನಿರ್ದೇಶಿಸಿದ ’ಚೆರಿ ಅರ್ಚರ್ಡ್’ ನಾಟಕದಲ್ಲಿ ತೋಟದ ಮನೆಯ ಆಳಿನ ಪಾತ್ರ ಮಾಡಿ ಎಲ್ಲರ ಗಮನ ಸೆಳೆದರು ಗೋಪಾಲಕೃಷ್ಣ. ದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಿ ರಂಗಭೂಮಿಯ ಕಾಯಕದಲ್ಲಿ ತೊಡಗಿಸಿಕೊಂಡರು. ವಿಶೇಷವಾಗಿ ಎಮ್‌ಇಎಸ್ ಕಾಲೇಜಿನಲ್ಲಿ ’ದೂತವಾಕ್ಯದ ಪ್ರಯೋಗದಿಂದ ಹೊಸ ರೀತಿಯ ರಂಗಶೋಧ ಪ್ರಾರಂಭಿಸಿದರು. ಈ ಶೋಧದ ಮೂರು ಮುಖ್ಯ ಅಂಶಗಳು ಎಂದರೆ: 1. ಆಧುನಿಕ ಸಾಮಾಜಿಕ-ರಾಜಕೀಯ ಪ್ರಜ್ಞೆ 2. ತಮ್ಮ ಊರಿನ ಯಕ್ಷಗಾನವಷ್ಟೆ ಅಲ್ಲದೇ ಹಲವಾರು ಆರಾಧನಾ ರೀತಿಗಳ ಆಂತರ್ಯದ ಸೊಗಡಿನ ರೂಪಗಳನ್ನು ಬಳಸುವಿಕೆ 3. ಪಾರಂಪರಿಕ ಪಠ್ಯಗಳ ಹೊಸ ಅನುಸಂಧಾನ. ಇವೆಲ್ಲವನ್ನೂ ಪರಸ್ಪರ ವಿರುದ್ಧವೆಂದು ಕಾಣುತ್ತಿದ್ದವರಿಗೆ, ಅವುಗಳ ಪರಸ್ಪರ ಹೆಣಿಗೆಯನ್ನು ಮನಗಾಣಿಸತೊಡಗಿದರು. ಇದು ಅವರು ಮಾಡಿದ ಮುಖ್ಯ ಕೆಲಸ. ಇದೇನು ನೇರವಾಗಿ ಒಂದಷ್ಟು ಕಾಲದ ಅವಧಿಯಲ್ಲಾದದ್ದಲ್ಲ. ಇದು ಜೀವಮಾನದ ಕೆಲಸ. ಇದಕ್ಕೆ ಅವರು ನಲವತ್ತು ವರ್ಷ ಸವೆಸಿದ್ದು ಬೇರೆಯೇ ಕತೆ.

ಈ ಕತೆಗೆ ಹಲವು ಮಗ್ಗುಲುಗಳು. ಅನೇಕ ತಮ್ಮ ಒಡನಾಡಿಗಳಿಗೆ ಇವರು ವಕ್ರ ಎನಿಸಿದರು. ಬೇರೆಯವರ ದಾರಿ ತುಳಿಯದವರ ಬಗ್ಗೆ ಹೀಗೇ ತಾನೇ? ಜತೆಗೆ ಟಿ.ವಿ.ಗಳಿಗೆ ಹೋಗುವುದಿಲ್ಲವೆಂಬ ಅವರ ವೀರವ್ರತ ಬೇರೆ. ಹೊಟ್ಟೆ ಹೊರೆಯುವುದಕ್ಕೆಂದೇ ಹಲವು ಕೆಲಸಗಳನ್ನು ಹಿಡಿದರು. SCZCC (ಸೌತ್ ಸೆಂಟ್ರಲ್ ಜೋನ್ ಕಲ್ಚರಲ್ ಸೆಂಟರ್)ನ ದೊಡ್ಡ ಹುದ್ದೆಯಿಂದ ಹಿಡಿದು, ಫಿಲಿಂ ಇನ್ಸ್ಟಿಟ್ಯೂಟು ಸೇರಿದಂತೆ ಮಠದ ನಾಟಕಶಾಲೆಯವರೆಗೆ ಕೆಲಸ ಮಾಡಿ ಬಿಟ್ಟರು ಅಥವಾ ಬಿಡಿಸಲಾಯಿತು. ಸಾಕ್ಷರತೆ ಮೊದಲಾದ ಸರಕಾರಿ ಕಾರ್ಯಕ್ರಮಗಳಿಗೆ ನಾಟಕಗಳನ್ನು ಬರೆದು ಆಡಿಸಿದರು. ಹೀಗೆ ಒದ್ದಾಡಿ 10-15ವರ್ಷಗಳ ನಂತರ ತಾವೇ ಒಂದು ಸಂಸ್ಥೆಯನ್ನು ಹುಟ್ಟುಹಾಕಿದರು. ಬಹುಪಾಲು ತಮ್ಮಂತೆಯೇ ಅಥವಾ ತಮಗಿಂತ ಹೆಚ್ಚು ಅಂಚಿಗೆ ದೂಡಲ್ಪಟ್ಟ ಶಿಷ್ಯರನ್ನು ದೂರದೂರದ ಹಳ್ಳಿಗಳಲ್ಲಿ ಪಡೆದುಕೊಂಡರು. ತುಮಕೂರು, ಮೆಳೆಹಳ್ಳಿ, ಚಿತ್ರದುರ್ಗ, ಹರಪನಹಳ್ಳಿ ಹೀಗೆ ರಂಗ ಚಟುವಟಿಕೆಗಳ ಕೇಂದ್ರಗಳನ್ನು ಬೆಳೆಸಿದರು. ಅನೇಕ ಹಿರಿಯರಿಗೆ (ವಿ.ರಾಮಮೂರ್ತಿಯಂಥವರಿಗೆ) ಸಹಾಯಕ್ಕೆ ನಿಂತರು. ಕಿರಿಯರಿಗೆ ಉತ್ತೇಜನ ಕೊಟ್ಟರು.

ಆದರೆ ಅವರದ್ದು ಕರ್ಣನ ಕತೆಯೇ ಆಯಿತು. ತಮ್ಮ ಹಾಡಿಯಲ್ಲಿ ’ಕರ್ಣಭಾರ’ವನ್ನು ಹಾಡಿಯಾಟವನ್ನಾಗಿಯೇ ಮಾಡಿದರು. ಆ ನಾಟಕದ ಆಶಯವಾಗಿ ಮಾಟದ ಬಲಿಯ ಪ್ರತಿಮೆಗಳನ್ನು ದಾರಿಯುದ್ದಕ್ಕೂ ತೋರಿಸಿದ್ದರು. ಅಲ್ಲಿನ ಕತ್ತಲೆಯ ನಡುವಿನ ಹಣತೆಯ ಬೆಳಕಿನಲ್ಲಿ, ಜಾತಿ ದೊಡ್ಡಸ್ತಿಕೆಯಿಂದ ಯಾರಿಂದ ತುಳಿಯಲ್ಪಟ್ಟನೋ ಅವರನ್ನ ಮೀರಲು ದಾನಕೊಡುತ್ತಾ ಹೋಗಿ ಸಾಯಲು ಸಿದ್ಧವಾಗಿಯೇ ನಿಷ್ಕ್ರಮಿಸುವ ಕರ್ಣನ ಕತೆ; ತುಳಿತಕ್ಕೆ ಒಳಗಾದವರು ಪ್ರತಿಷ್ಠಿತ ಶಕ್ತಿಗಳ ಜತೆ ಸೇರಿ ದುರಂತ ನಾಯಕರಾಗುವುದು ಎಲ್ಲ ಕಾಲದ ರಾಜಕೀಯ ಕತೆಯಾಗಿದೆ. ಕರ್ಣನ ಕತೆ ನಾಯರಿ ಜನಾಂಗದ ಕತೆಯೆಂದು ತೋರಿಸುತ್ತಾ ಅದು ಗೋಪಾಲಕೃಷ್ಣನಾಯರಿ ಕತೆಯೇ ಆಯಿತು.

ಇಲ್ಲಿ ನಾವು ಚಿಂತಿಸಬೇಕಾದ್ದು ಒಬ್ಬಿಬ್ಬರ ಬಗ್ಗೆ ಅಷ್ಟೆ ಅಲ್ಲ. ಅಂಚಿಗೆ ತಳ್ಳಲ್ಪಟ್ಟವರನ್ನು ಹೊಸ ಅಧಿಕಾರ ಕೇಂದ್ರಗಳು ಹೇಗೆ ನುಂಗುತ್ತವೆ ಎನ್ನುವುದನ್ನು. ದೇಶಬದ್ಧವಾದ ರಂಗ ಪ್ರಯೋಗ ಮಾಡಿ; ಅದನ್ನು ಎಕ್ಸ್‌ಪೋರ್ಟ್ ಮಾಡಬೇಕಿಲ್ಲ ಎನ್ನುತ್ತಿದ್ದ ನಾಯರಿ, ವಿದೇಶಿ ಬಿಡಿ ದೇಶ ಪರ್ಯಟನೆಗೇ ನಾಟಕವನ್ನು ಕೊಡಲಿಲ್ಲ. ಒಂದೇ ನಾಟಕವನ್ನು ಎಲ್ಲೆಲ್ಲಿ ಹೋದರೆ ಅಲ್ಲಿನ ರೀತಿ-ರಿವಾಜು, ಸಂಸ್ಕೃತಿಗಳಲ್ಲಿ ಮಾಡಿಸುತ್ತಿದ್ದರು. ಆದರೆ ಆ ರಂಗಸ್ಥಳಗಳೇ ಕಳೆದು ಹೋಗುತ್ತಾ ಬಂದವು.

ಗೋಪಾಲಕೃಷ್ಣ ನಾಯರಿ ಜನವರಿ 6, 2023ರಂದು ಜೀವನ ನಾಟಕ ಮುಗಿಸಿದರು. ಕೆಲವು ಸಾವಿರವಷ್ಟೇ ಇರುವ ನಾಯರಿ ಜನಾಂಗದ ಯುವಕರಿಗೆ, ಹಾಗೇ ಮೂಲೆಮೂಲೆಯಲ್ಲಿರುವ ನತದೃಷ್ಟ ರಂಗಕರ್ಮಿಗಳನೇಕರಿಗೆ ಹೊಸ ಭರವಸೆಯಾಗಿದ್ದ ಗೋಪಾಲಕೃಷ್ಣ ಮುಂದೆ ಕೂಡ ತಮ್ಮ ಕೆಲಸಗಳಿಂದ ಸ್ಫೂರ್ತಿ ಸ್ಫುರಿಸುವ ಭರವಸೆಯಿದೆ. ಹೊಸಹೊಸ ಕಲ್ಪನೆಗಳಿಗೆ ನನ್ನಂಥ ನಗರದವರೂ ಮತ್ತು ಹಳ್ಳಿಯ ಜನರೂ ತೆರೆದುಕೊಳ್ಳುವಂತೆ ಮಾಡಿದ ಗೋಪಾಲಕೃಷ್ಣ ನಾಯರಿಯವರಿಗೆ ನಮೋ ನಮಃ.

ಜೆ ಶ್ರೀನಿವಾಸ ಮೂರ್ತಿ
ನಿವೃತ್ತ ಪ್ರಾಧ್ಯಾಪಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...