Homeಕರ್ನಾಟಕದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ಅರ್ಜಿದಾರರ ವಾದ ಜೋಪಡಿ ವಾಸಿಗಳು ಕೆಳಮಟ್ಟದವರು ಎಂಬಂತಿದೆ ಎಂದು ನ್ಯಾಯಾಲಯ ಹೇಳಿದೆ

- Advertisement -
- Advertisement -

ದೇವಸ್ಥಾನದ ಪಕ್ಕದಲ್ಲಿ ಕೊಳೆಗೇರಿ ನಿವಾಸಿಗಳ ಪುನರ್ವಸತಿ ಕೇಂದ್ರ ನಿರ್ಮಿಸಲು ಅವಕಾಶ ನೀಡುವುದರಿಂದ ದೇಗುಲದ ಪಾವಿತ್ರ್ಯತೆ ಮತ್ತು ಪ್ರಶಾಂತತೆಗೆ ಧಕ್ಕೆಯಾಗುತ್ತದೆ ಎಂಬ ಆಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ.

ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ, ಮಂಡ್ಯದ ಶ್ರೀ ಕಾಳಿಕಾಂಬ ಸೇವಾ ಸಮಿತಿಯ ಮರು ಪರಿಶೀಲನಾ ಅರ್ಜಿ ಹಾಗೂ ಹೊಸಹಳ್ಳಿಯ ಇಕ್ಕಳಕ್ಕಿ ರಾಮಲಿಂಗೇಗೌಡ ಸೇರಿದಂತೆ ಎಂಟು ಭಕ್ತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ದೇವಸ್ಥಾನದ ಪಕ್ಕದಲ್ಲೇ ಜೋಪಡಿ ಪ್ರದೇಶ ನಿರ್ಮಾಣಗೊಂಡರೆ ಭಕ್ತರ ಧಾರ್ಮಿಕ ಭಾವನೆಗಳು, ಪಾವಿತ್ರ್ಯ ಮತ್ತು ಶಾಂತ ವಾತಾವರಣಕ್ಕೆ ಧಕ್ಕೆ ಉಂಟಾಗುತ್ತದೆ. ಇದು ಸಂವಿಧಾನದ 29ನೇ ವಿಧಿಯ ಉಲ್ಲಂಘನೆಯಾಗುತ್ತದೆ” ಎಂಬ ಅರ್ಜಿದಾರರ ವಾದವನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಪೀಠ “ದೇಗುಲ ಸಮಿತಿಯ ಈ ನಿಲುವು ಜಾತಿ, ವರ್ಗ ಅಥವಾ ಧರ್ಮದ ಮೂಲಕ ಸಮಾಜವನ್ನು ವಿಭಜಿಸುವ ಪ್ರಯತ್ನ. ಅರ್ಜಿದಾರರ ಪೂರ್ವಗ್ರಹ ಮತ್ತು ಬಹಿಷ್ಕಾರದ ಮನಃಸ್ಥಿತಿಗೆ ತಾಜಾ ನಿದರ್ಶನ” ಎಂದು ತೀಕ್ಷ್ಣ ಪದಗಳಲ್ಲಿ ಖಂಡಿಸಿದೆ.

“ಈ ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿಲ್ಲ. ಅರ್ಜಿದಾರರು ಧಾರ್ಮಿಕ ಅಲ್ಪಸಂಖ್ಯಾತರೂ ಅಲ್ಲ. ಆದ್ದರಿಂದ, ಸಂವಿಧಾನದ 29ನೇ ವಿಧಿಯ ಅಡಿಯಲ್ಲಿ ಹಕ್ಕು ಉಲ್ಲಂಘನೆಯಾಗಿದೆ ಎಂದು ಅವರು ವಾದಿಸಲು ಸಾಧ್ಯವಿಲ್ಲ. ಏಕೆಂದರೆ 29ನೇ ವಿಧಿಯ ಉಲ್ಲಂಘನೆಯು ಘೋಷಿತ ಧಾರ್ಮಿಕ ಅಲ್ಪಸಂಖ್ಯಾತರಿಗೆ ಮಾತ್ರವೇ ಅನ್ವಯಿಸುತ್ತದೆ” ಎಂದು ಪೀಠ ಸ್ಪಷ್ಟಪಡಿಸಿದೆ.

“ಭಾರತ ದೇಶವನ್ನು ಉನ್ನತ ದೇಶವನ್ನಾಗಿ ನೋಡಬೇಕೆಂದಿದ್ದರೆ, ಅದು ತನ್ನ ನಾಗರಿಕರನ್ನು ಎರಡನೇ ದರ್ಜೆಗೆ ಇಳಿಸಿ ನೋಡಲು ಸಾಧ್ಯವಿಲ್ಲ. ಜೋಪಡಿ ನಿವಾಸಿಗಳ ಘನತೆ ಯಾವುದೇ ಭಕ್ತರ ಘನತೆಗಿಂತ ಕೀಳಾಗಿಲ್ಲ. ದೇಶದಲ್ಲಿ ಒಬ್ಬರ ಹಕ್ಕನ್ನು ಉಳಿಸಲಿಕ್ಕಾಗಿ ಇನ್ನೊಬ್ಬರ ಹಕ್ಕನ್ನು ಅಡಗಿಸುವ ಅಗತ್ಯವಿಲ್ಲ. ನಮ್ಮ ದೇಶದ ಸಂವಿಧಾನಕ್ಕೆ ಮಾನವನ ಮೌಲ್ಯಾಧಾರಿತ ವರ್ಗ ಶ್ರೇಣಿಯಿಲ್ಲ. ಅದರ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ” ಎಂದು ಪ್ರತಿಪಾದಿಸಿದೆ.

ಸುದೀರ್ಘ ವ್ಯಾಜ್ಯದ ನಂತರ ಮಂಡ್ಯದ ಸರ್ವೇ ನಂ 843 ಮತ್ತು 844ರಲ್ಲಿ ಒಟ್ಟು 28½ ಗುಂಟೆ ಭೂಮಿಯನ್ನು ಕಾಯ್ದೆಯೆ ಸೆಕ್ಷನ್‌ 3ರ ಅಡಿಯಲ್ಲಿ ಮರು-ಜೋಪಡಿ ಪ್ರದೇಶ ಎಂದು ಘೋಷಿಸಿ, ಆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಿಸಿ ಜೋಪಡಿ ವಾಸಿಗಳಿಗೆ ಪುನರ್ವಸತಿ ಕಲ್ಪಿಸುವಂತೆ ಆದೇಶ ಹೊರಡಿಸಲಾಗಿತ್ತು. ಈ ಕುರಿತಂತೆ ಜಿಲ್ಲಾಧಿಕಾರಿ 2018ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದರು. ರಾಜ್ಯ ಸರ್ಕಾರದ ಪರ ರಾಹುಲ್‌ ಕಾರ್ಯಪ್ಪ ಮತ್ತು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಪರ ಹೈಕೋರ್ಟ್‌ ವಕೀಲ ಎಂ ಪಿ ಶ್ರೀಕಾಂತ್‌ ವಾದಿಸಿದ್ದರು.

ಅರ್ಜಿದಾರರ ವಾದದ ಹಿಂದಿರುವ ಅರ್ಥವನ್ನು ಗಮನಿಸಿದರೆ ಜೋಪಡಿ ವಾಸಿಗಳು ಕೆಳಮಟ್ಟದ ವ್ಯಕ್ತಿಗಳು, ಭಕ್ತಿ ತೋರಿಸುವ, ಪೂಜಾ ಸ್ಥಳದ ಸಮೀಪ ವಾಸಿಸುವ ಹಕ್ಕಿನಿಂದ ವಂಚಿತರಾದವರು ಎಂದೇ ಆಗಿದೆ. ಇಂತಹ ಮಾತುಗಳು ಈ ಪ್ರಬುದ್ಧ ಯುಗದಲ್ಲಿ, ಅತ್ಯಂತ ಭೀಕರವಾಗಿ ಕಾಣುತ್ತವೆ. ದೇವಾಲಯ ಸಮಿತಿಯ ಎಲ್ಲ ವಾದಾಂಶಗಳು ಗಾಢವಾದ ನೋವುಂಟು ಮಾಡಿವೆ” ಎಂದು ಹೈಕೋರ್ಟ್ ಕಿಡಿಕಾರಿದೆ.

Courtesy:barandbench.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...