ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ದೇವಸ್ಥಾನದ ಪಕ್ಕದಲ್ಲಿ ಕೊಳೆಗೇರಿ ನಿವಾಸಿಗಳ ಪುನರ್ವಸತಿ ಕೇಂದ್ರ ನಿರ್ಮಿಸಲು ಅವಕಾಶ ನೀಡುವುದರಿಂದ ದೇಗುಲದ ಪಾವಿತ್ರ್ಯತೆ ಮತ್ತು ಪ್ರಶಾಂತತೆಗೆ ಧಕ್ಕೆಯಾಗುತ್ತದೆ ಎಂಬ ಆಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಘಾತ ವ್ಯಕ್ತಪಡಿಸಿದೆ. ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ, ಮಂಡ್ಯದ ಶ್ರೀ ಕಾಳಿಕಾಂಬ ಸೇವಾ ಸಮಿತಿಯ ಮರು ಪರಿಶೀಲನಾ ಅರ್ಜಿ ಹಾಗೂ ಹೊಸಹಳ್ಳಿಯ ಇಕ್ಕಳಕ್ಕಿ ರಾಮಲಿಂಗೇಗೌಡ ಸೇರಿದಂತೆ ಎಂಟು ಭಕ್ತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ ಎಂದು … Continue reading ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌