Homeಮುಖಪುಟಒಟಿಟಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲತೆ: 'ನೀವೇ ಏನಾದ್ರು ಮಾಡಿ'; ಕೇಂದ್ರ ಸರ್ಕಾರಕ್ಕೆ ಹೇಳಿದ ಸುಪ್ರೀಂಕೋರ್ಟ್

ಒಟಿಟಿ, ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲತೆ: ‘ನೀವೇ ಏನಾದ್ರು ಮಾಡಿ’; ಕೇಂದ್ರ ಸರ್ಕಾರಕ್ಕೆ ಹೇಳಿದ ಸುಪ್ರೀಂಕೋರ್ಟ್

- Advertisement -
- Advertisement -

ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲತೆಯ ಪ್ರಸಾರದ ಬಗ್ಗೆ ಇರುವ ಕಳವಳಗಳನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.28) ಒಪ್ಪಿಕೊಂಡಿದ್ದು, ಅದನ್ನು ಪರಿಹರಿಸಲು ಶಾಸಕಾಂಗ (ಸಂಸತ್ತು) ಕಾನೂನಿನ ಚೌಕಟ್ಟಿನೊಳಗೆ ಏನಾದರೂ ಮಾಡಬೇಕು ಎಂದು ಹೇಳಿದೆ.

ಪತ್ರಕರ್ತ ಮತ್ತು ಮಾಜಿ ಮಾಹಿತಿ ಆಯುಕ್ತ ಉದಯ್ ಮಹೂರ್ಕರ್ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಎ.ಜಿ ಮಸಿಹ್ ಅವರ ಪೀಠ, ಕೇಂದ್ರ ಸರ್ಕಾರ ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್, ಎಎಲ್‌ಟಿಟಿ (ಎಎಲ್‌ಟಿಟಿ ಬಾಲಾಜಿ) ಉಲ್ಲು ಡಿಜಿಟಲ್ ಮತ್ತು ಮುಬಿ ಹಾಗೂ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಎಕ್ಸ್  (ಟ್ವಿಟ್ಟರ್) ಗೂಗಲ್, ಮೆಟಾ (ಫೇಸ್‌ಬುಕ್ ) ಮತ್ತು ಆಪಲ್‌ಗೆ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ವಿಷ್ಣುಶಂಕರ್ ಜೈನ್ ಅವರು, “ಈ ಅರ್ಜಿಯನ್ನು ಯಾರ ವಿರುದ್ದ ಸಲ್ಲಿಸಿಲ್ಲ, ನಿಜವಾದ ಕಳವಳದಿಂದ ಸಲ್ಲಿಸಲಾಗಿದೆ. ಯಾವುದೇ ನಿರ್ಬಂಧವಿಲ್ಲದೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ವಿಷಯಗಳು ಹರಿದಾಡುತ್ತಿವೆ” ಎಂದು ಹೇಳಿದ್ದಾರೆ.

ಇದನ್ನು ಆಲಿಸಿದ ನ್ಯಾಯಮೂರ್ತಿ ಗವಾಯಿ ಅವರು, ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ, “ಏನಾದರು ಮಾಡಿ… ಶಾಸಕಾಂಗದ ಮೂಲಕ ಏನಾದರು ಮಾಡಿ” ಎಂದು ಎಂದಿದ್ದಾರೆ.

ಈ ವೇಳೆ, “ಕೆಲವು ನಿಯಮಿತ ಕಾರ್ಯಕ್ರಮಗಳಲ್ಲಿಯೂ ಸಹ ಆಕ್ಷೇಪಾರ್ಹ ವಿಷಯಗಳು ಕಾಣಿಸಿಕೊಳ್ಳುತ್ತವೆ ಎಂದು ಮೆಹ್ತಾ ಗಮನಸೆಳೆದಿದ್ದಾರೆ. ಕೆಲವು ಕಾರ್ಯಕ್ರಮಗಳು ಎಷ್ಟು ವಿಕೃತವಾಗಿವೆಯೆಂದರೆ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ಒಟ್ಟಿಗೆ ಕುಳಿತು ಅವುಗಳನ್ನು ನೋಡಲು ಸಾಧ್ಯವೇ ಇಲ್ಲ. ಸೆನ್ಸಾರ್‌ಶಿಪ್ ಇಲ್ಲ, ಆದರೆ ಕೆಲವು ನಿಯಂತ್ರಣಗಳು ಜಾರಿಯಲ್ಲಿವೆ, ಇನ್ನು ಕೆಲವು ಚಿಂತನೆಯಲ್ಲಿವೆ” ಎಂದು ತಿಳಿಸಿದ್ದಾರೆ.

“ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಿವಿಧ ಆಕ್ಷೇಪಾರ್ಹ, ಅಶ್ಲೀಲ ಮತ್ತು ಅಸಭ್ಯ ವಿಷಯಗಳ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಈ ಅರ್ಜಿಯು ಪ್ರಮುಖ ಕಳವಳವನ್ನು ಹುಟ್ಟುಹಾಕುತ್ತದೆ. ವಿಷಯವು ವಿಕೃತವಾಗಿದೆ ಎಂದು ಸಾಲಿಸಿಟರ್ ಜನರಲ್ ಅವರೇ ನ್ಯಾಯಯುತವಾಗಿ ಹೇಳುತ್ತಿದ್ದಾರೆ. ಇನ್ನೂ ಕೆಲವು ನಿಯಮಗಳು ಚಿಂತನೆಯಲ್ಲಿವೆ ಎಂದು ಅವರು ತಿಳಿಸಿದ್ದಾರೆ” ಎಂದು ನೋಟಿಸ್ ಜಾರಿ ಮಾಡಿದ ಪೀಠವು ತನ್ನ ಆದೇಶದಲ್ಲಿ ಹೇಳಿದೆ.

ಈ ವರ್ಷದ ಮಾರ್ಚ್‌ನಲ್ಲಿ ಸಲ್ಲಿಸಲಾದ ಪಿಐಎಲ್‌ನಲ್ಲಿ “ಒಟಿಟಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಇಂದಿನ ಪೀಳಿಗೆಯ ಭವಿಷ್ಯವನ್ನು ಹಾಳು ಮಾಡುವಂತಹ ಅಶ್ಲೀಲ, ವಿಕೃತ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಲೈಂಗಿಕ ವಿಕೃತಿಯ ವಿಷಯಗಳು ಯಾವುದೇ ನಿಯಂತ್ರಣಗಳಿಲ್ಲದೆ ಪ್ರಸಾರವಾಗುತ್ತಿವೆ” ಎಂದು ಗಮನಸೆಳೆಯಲಾಗಿದೆ.

“ಒಂದು ಸಮಯದಲ್ಲಿ ವೈಯಕ್ತಿಕವಾಗಿದ್ದ ವಿಷಯಗಳು ಈಗ ಒಟಿಟಿ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಮೂಲೆ ಮೂಲೆಗೂ ಹಬ್ಬಿದೆ. ಅಶ್ಲೀಲ ವಿಷಯಗಳ ಈ ಅನಿಯಂತ್ರಿತ ಹರಡುವಿಕೆಯನ್ನು ನಿಯಂತ್ರಿಸದಿದ್ದರೆ ಸಾಮಾಜಿಕ ಮೌಲ್ಯಗಳು, ಮಾನಸಿಕ ಆರೋಗ್ಯ ಮತ್ತು ಸಾರ್ವಜನಿಕ ಸುರಕ್ಷತೆಯ ಮೇಲೆ ತೀವ್ರ ಪರಿಣಾಮಗಳು ಬೀರಬಹುದು” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಮಕ್ಕಳ ಅಶ್ಲೀಲತೆ, ಸಾಫ್ಟ್-ಕೋರ್ ಅಡಲ್ಟ್ ಕಂಟೆಂಟ್‌ಗಳಂತಹ ವಿಷಯಗಳ ಅನಿಯಂತ್ರಿತ ಪ್ರಸರಣವು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ಹೆಚ್ಚುತ್ತಿರುವ ಪ್ರವೃತ್ತಿಗೆ ಕಾರಣವಾಗಿದೆ ಮತ್ತು ಯುವ ಮನಸ್ಸುಗಳ ಮಾನಸಿಕ ಬೆಳವಣಿಗೆಯನ್ನು ನಕಾರಾತ್ಮಕವಾಗಿ ರೂಪಿಸುತ್ತಿದೆ” ಎಂದು ವಿವರಿಸಲಾಗಿದೆ.

ಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್‌: ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...