Homeಕರ್ನಾಟಕಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

ಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

- Advertisement -
- Advertisement -

‘ಪೊಲೀಸರು ತಮ್ಮ ಇಚ್ಛೆಗೆ ಅನುಗುಣವಾಗಿ ಕರೆ ವಿವರ ದಾಖಲೆ (ಸಿಡಿಆರ್‌) ಪಡೆಯುವ ಅಧಿಕಾರ ಚಲಾಯಿಸುತ್ತಾ ಹೋದರೆ, ಅದು ಪೊಲೀಸ್ ರಾಜ್ಯವಾಗುತ್ತದೆ’ ಎಂದು ಹೈಕೋರ್ಟ್ ಎಚ್ಚರಿಸಿದೆ.

‘ನಾನು ಪೊಲೀಸ್‌ ಅಧಿಕಾರಿಯಾಗಿದ್ದೇನೆ ಎಂಬ ಅಧಿಕಾರದ ಏಕೈಕ ಗತ್ತಿನಲ್ಲಿ, ಯಾವುದೇ ಪೊಲೀಸ್ ಅಧಿಕಾರಿ, ಯಾವುದೇ ವ್ಯಕ್ತಿಯ ಮೊಬೈಲ್ ಫೋನ್‌ನ ಸಿಡಿಆರ್‌ ಅನ್ನು ಕಾನೂನುಬದ್ಧ ತನಿಖಾ ಅಗತ್ಯದ ಅನುಮತಿ ಇಲ್ಲದೆ ಪಡೆಯಲು ಸಾಧ್ಯವಿಲ್ಲ’ ಎಂದು ಗುರುವಾರ ಸ್ಪಷ್ಟಪಡಿಸಿದೆ.

ಮಹಿಳೆಯೊಬ್ಬರ ಸಿಡಿಆರ್ ಅನ್ನು ಅಕ್ರಮವಾಗಿ ಪಡೆದ ಆರೋಪ ಎದುರಿಸುತ್ತಿರುವ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಎಂ.ವಿ ವಿದ್ಯಾ ಅವರು ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ರಜಾಕಾಲೀನ ಏಕಸದಸ್ಯ ಪೀಠ ವಜಾಗೊಳಿಸಿದೆ.

ಅರ್ಜಿದಾರರ ಪರ ವಕೀಲ ಸತ್ಯನಾರಾಯಣ್ ಚಾಲ್ಕೆ ವಾದ ಮಂಡಿಸಿ, “ವಿದ್ಯಾ ತಮ್ಮ ಅಧಿಕೃತ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ, ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್‌ 197 (ಸಾರ್ವಜನಿಕ ಸೇವಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ತಡೆಯುವ) ಮತ್ತು ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್‌ 170ರ (ಸಾರ್ವಜನಿಕ ನೌಕರನ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಮತ್ತು ವಿಚಾರಣೆಗೆ ಒಳಪಡಿಸಲು ಅಗತ್ಯವಿರುವ ಕೇಂದ್ರ ಅಥವಾ ರಾಜ್ಯ ಸರ್ಕಾರದ ಪೂರ್ವಾನುಮತಿ) ಅಡಿಯಲ್ಲಿ, ಅನುಮತಿಯ ಆದೇಶವಿಲ್ಲದೆ ಸಿಡಿಆರ್‌ ಕೋರಿದ್ದಾರೆ” ಎಂದು ಪೀಠಕ್ಕೆ ಮನದಟ್ಟು ಮಾಡಲು ಪ್ರಯತ್ನಿಸಿದ್ದರು.

ಆದರೆ, ಇದನ್ನು ಒಪ್ಪದ ಪೀಠವು, “ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಕನ್ನಡಿಗ ದಿವಂಗತ ಪುಟ್ಟಸ್ವಾಮಿ ಪ್ರಕರಣದಲ್ಲಿ ಸ್ಪಷ್ಟಪಡಿಸಿರುವಂತೆ, ಯಾವುದೇ ವ್ಯಕ್ತಿಯ ಸಿಡಿಆರ್ ದಾಖಲೆಗಳು ಗೋಪ್ಯತೆಯ ಹಕ್ಕಿನಿಂದ ನಿಯಂತ್ರಿಸಲಾಗುವ ವೈಯಕ್ತಿಕ ಮತ್ತು ಖಾಸಗಿ ವಿವರಗಳಾಗಿವೆ. ಹೀಗಾಗಿ, ನಿರ್ದಿಷ್ಟ ವ್ಯಕ್ತಿಯ ಸಿಡಿಆರ್ ಪಡೆಯುವ ಅಧಿಕಾರವನ್ನು ತನಿಖಾ ಅಧಿಕಾರಿ ಮಾತ್ರ ಚಲಾಯಿಸಬೇಕಾಗುತ್ತದೆ” ಎಂಬ ಅಂಶವನ್ನು ಉಲ್ಲೇಖಿಸಿದೆ.

“ಐಪಿಸಿ ಸೆಕ್ಷನ್‌ಗಳಾದ 354(ಡಿ) 409, 506, 509 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ 66(ಡಿ) ಮತ್ತು 66(ಇ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕು” ಎಂದು ಅರ್ಜಿದಾರರು ಕೋರಿದ್ದರು.

ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...