ಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ

‘ಪೊಲೀಸರು ತಮ್ಮ ಇಚ್ಛೆಗೆ ಅನುಗುಣವಾಗಿ ಕರೆ ವಿವರ ದಾಖಲೆ (ಸಿಡಿಆರ್‌) ಪಡೆಯುವ ಅಧಿಕಾರ ಚಲಾಯಿಸುತ್ತಾ ಹೋದರೆ, ಅದು ಪೊಲೀಸ್ ರಾಜ್ಯವಾಗುತ್ತದೆ’ ಎಂದು ಹೈಕೋರ್ಟ್ ಎಚ್ಚರಿಸಿದೆ. ‘ನಾನು ಪೊಲೀಸ್‌ ಅಧಿಕಾರಿಯಾಗಿದ್ದೇನೆ ಎಂಬ ಅಧಿಕಾರದ ಏಕೈಕ ಗತ್ತಿನಲ್ಲಿ, ಯಾವುದೇ ಪೊಲೀಸ್ ಅಧಿಕಾರಿ, ಯಾವುದೇ ವ್ಯಕ್ತಿಯ ಮೊಬೈಲ್ ಫೋನ್‌ನ ಸಿಡಿಆರ್‌ ಅನ್ನು ಕಾನೂನುಬದ್ಧ ತನಿಖಾ ಅಗತ್ಯದ ಅನುಮತಿ ಇಲ್ಲದೆ ಪಡೆಯಲು ಸಾಧ್ಯವಿಲ್ಲ’ ಎಂದು ಗುರುವಾರ ಸ್ಪಷ್ಟಪಡಿಸಿದೆ. ಮಹಿಳೆಯೊಬ್ಬರ ಸಿಡಿಆರ್ ಅನ್ನು ಅಕ್ರಮವಾಗಿ ಪಡೆದ ಆರೋಪ ಎದುರಿಸುತ್ತಿರುವ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ … Continue reading ಅನುಮತಿಯಿಲ್ಲದೆ ಸಿಡಿಆರ್ ಪಡೆಯುವ ಕ್ರಮ| ಪೊಲೀಸ್ ರಾಜ್ಯವಾದೀತು: ಹೈಕೋರ್ಟ್ ಎಚ್ಚರಿಕೆ