Homeಕರ್ನಾಟಕಅಕ್ಟೋಬರ್‌ 1 ರಿಂದ ವಿವಿ ಮತ್ತು ಕಾಲೇಜ್‌‌ಗಳ ಹೊಸ ಶೈಕ್ಷಣಿಕ ವರ್ಷ ಪ್ರಾರಂಭ

ಅಕ್ಟೋಬರ್‌ 1 ರಿಂದ ವಿವಿ ಮತ್ತು ಕಾಲೇಜ್‌‌ಗಳ ಹೊಸ ಶೈಕ್ಷಣಿಕ ವರ್ಷ ಪ್ರಾರಂಭ

- Advertisement -
- Advertisement -

ಅಕ್ಟೋಬರ್ 1 ರಿಂದ ದೇಶದಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಪ್ರವೇಶ ಪ್ರಕ್ರಿಯೆಯನ್ನು ಸೆಪ್ಟೆಂಬರ್ 30 ರೊಳಗೆ ಪೂರ್ಣಗೊಳಿಸಬೇಕು ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

ಸಿಬಿಎಸ್‌ಇ, ಐಸಿಎಸ್‌ಇ ಮತ್ತು ಎಲ್ಲಾ ರಾಜ್ಯ ಮಂಡಳಿಗಳು ಫಲಿತಾಂಶ ಪ್ರಕಟಿಸಿದ ನಂತರವೇ ಪದವಿ ಪೂರ್ವ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು (ಎಚ್‌ಇಐ) ಕೇಳಿಕೊಂಡಿವೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

“ಎಲ್ಲಾ ಶಾಲಾ ಮಂಡಳಿಗಳು ಜುಲೈ 31 ರೊಳಗೆ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ಒಂದು ವೇಳೆ ಅರ್ಹತಾ ಪರೀಕ್ಷೆಗಳ ಫಲಿತಾಂಶವನ್ನು ಘೋಷಿಸುವಲ್ಲಿ ವಿಳಂಬವಾದರೆ, ಅಕ್ಟೋಬರ್ 18 ರೊಳಗೆ ಹೊಸ ಶೈಕ್ಷಣಿಕ ವರ್ಷ ಪ್ರಾರಂಭಿಸಬಹುದು” ಎಂದು ಯುಜಿಸಿ ತಿಳಿಸಿದೆ.

ಬೋಧನೆ-ಕಲಿಕೆಯ ಪ್ರಕ್ರಿಯೆಯು ಆಫ್‌ಲೈನ್, ಆನ್‌ಲೈನ್ ಅಥವಾ ಸಂಯೋಜಿತ ಕ್ರಮದಲ್ಲಿ ಮುಂದುವರಿಸಬಹುದು ಎಂದು ಆಯೋಗ ಸ್ಪಷ್ಟಪಡಿಸಿದೆ.

“ಕೊರೊನಾ ದೃಷ್ಟಿಯಿಂದ ಕಾಲಕಾಲಕ್ಕೆ ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು ಹೊರಡಿಸುವ ಅಗತ್ಯ ಪ್ರೋಟೋಕಾಲ್‌ಗಳು ಮತ್ತು ಸಲಹೆಗಳನ್ನು ಅನುಸರಿಸಿ ಅಕ್ಟೋಬರ್ 1 ರಿಂದ 2022 ರ ಜುಲೈ 31 ರವರೆಗೆ ಮುಂದಿನ ಶೈಕ್ಷಣಿಕ ವರ್ಷ ಜಾರಿಯಲ್ಲಿರುತ್ತದೆ” ಎಂದು ಮಾರ್ಗಸೂಚಿ ತಿಳಿಸಿದೆ.

ಆಗಸ್ಟ್ 31 ರೊಳಗೆ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಅಂತಿಮ ವರ್ಷ ಅಥವಾ ಅಂತಿಮ ಅವಧಿಯ ಪರೀಕ್ಷೆಗಳನ್ನು ನಡೆಸುವುದು ಕಡ್ಡಾಯ. ಈ ಪರೀಕ್ಷೆಗಳನ್ನು ಆಫ್‌ಲೈನ್, ಆನ್‌ಲೈನ್ ಅಥವಾ ಸಂಯೋಜಿತ ಕ್ರಮಗಳಲ್ಲಿ ನಡೆಸಬಹುದು ಎಂದು ಅದು ಹೇಳಿದೆ.

ಇದನ್ನೂ ಓದಿ: ಸುದ್ದಿ ಮೇಲಿನ ನಂಬಿಕೆ – 46 ದೇಶಗಳಲ್ಲಿ ಭಾರತಕ್ಕೆ 31 ನೇ ಸ್ಥಾನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...