Homeಮುಖಪುಟಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ - ಪೊಲೀಸರ ನಡುವೆ ಘರ್ಷಣೆ

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

- Advertisement -
- Advertisement -

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ.

ಜಿಲ್ಲೆಯ ಕಾಶಿಪುರ ಬ್ಲಾಕ್‌ನ ಶಾಗಬರಿ ಗ್ರಾಮದಲ್ಲಿ ರಸ್ತೆ ನಿರ್ಮಾಣವನ್ನು ಬುಡಕಟ್ಟು ಜನಾಂಗದವರು ತೀವ್ರವಾಗಿ ವಿರೋಧಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ರಸ್ತೆ ನಿರ್ಮಾಣವನ್ನು ನಿಲ್ಲಿಸುವ ಪ್ರಯತ್ನದಲ್ಲಿ ಪ್ರತಿಭಟನಾಕಾರರು ಕಲ್ಲುಗಳನ್ನು ಎಸೆದು, ಕತ್ತಿಗಳು, ಕೊಡಲಿಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆನ್‌ಲೈನ್‌ನಲ್ಲಿ ಪ್ರಸಾರವಾಗುವ ದೃಶ್ಯಗಳು ಜಿಲ್ಲಾಧಿಕಾರಿ ಕುಲಕರ್ಣಿ ಅಶುತೋಷ್ ಸಿ ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು ಬುಡಕಟ್ಟು ಜನರು ಹೊರಹೋಗುವಂತೆ ಒತ್ತಾಯಿಸುತ್ತಿರುವುದನ್ನು ಕಾಣಬಹುದು.

ಕಾಂತಮಲ್ ಗ್ರಾಮದ ಬುಡಕಟ್ಟು ಮಹಿಳೆಯರ ಗುಂಪೊಂದು ಮಧ್ಯರಾತ್ರಿ ನಿದ್ರಿಸುತ್ತಿದ್ದಾಗ ಪೊಲೀಸರು ತಮ್ಮ ಮೇಲೆ ಶೆಲ್‌ಗಳನ್ನು ಹಾರಿಸಿದರು ಎಂದು ಆರೋಪಿಸಿದ್ದಾರೆ. ಶಸ್ತ್ರಸಜ್ಜಿತ ಪೊಲೀಸರು ತಮ್ಮ ವಿದ್ಯುತ್ ಕಡಿತಗೊಳಿಸಿ ಗ್ರಾಮಸ್ಥರ ಮೇಲೆ ದಾಳಿ ಮಾಡಿದ್ದಾರೆ, ಇದರಿಂದಾಗಿ ಅನೇಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

“ಘಟನೆಯಲ್ಲಿ ಗಾಯಗೊಂಡ 40 ಪೊಲೀಸ್ ಸಿಬ್ಬಂದಿಗಳಲ್ಲಿ 10 ಮಂದಿಯ ತಲೆಗೆ ಗಾಯಗಳಾಗಿದ್ದು, ಅವರನ್ನು ರಾಯಗಡದಲ್ಲಿರುವ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಟನಾಕಾರರು ಕಲ್ಲು ಮತ್ತು ಇಟ್ಟಿಗೆಗಳನ್ನು ತೂರಿದರು. ಸಮಾಧಾನಪಡಿಸಲು ಪ್ರಯತ್ನಿಸಿದಾಗ ಪೊಲೀಸರ ಮೇಲೆ ದಾಳಿ ಮಾಡಿದರು” ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಸಂಜಯ್ ಕುಮಾರ್ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಒಡಿಶಾ ಸರ್ಕಾರವು ಸಿಜಿಮಾಲಿ ಬಾಕ್ಸೈಟ್ ಗಣಿ ಯೋಜನೆಯನ್ನು ಖಾಸಗಿ ಕಂಪನಿಗೆ ವಹಿಸಿದಾಗಿನಿಂದ ಕಾಶಿಪುರ ಪ್ರದೇಶದ ಸ್ಥಳೀಯರು ವಿರೋಧಿಸುತ್ತಿದ್ದಾರೆ. ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಿಸಲು ಆಡಳಿತವು ಕಂಪನಿಗೆ ಅನುಕೂಲ ಮಾಡಿಕೊಡುತ್ತಿದೆ.

ಜಿಲ್ಲಾಧಿಕಾರಿ ಕುಲಕರ್ಣಿ ಸ್ಥಳದಲ್ಲಿ ಹಾಜರಿದ್ದರು. “ಪ್ರತಿಭಟನೆ ನಡೆಸುತ್ತಿರುವ ಬುಡಕಟ್ಟು ಜನಾಂಗದವರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಶಾಗಬರಿ ಗ್ರಾಮದಲ್ಲಿ ನಿಷೇಧಾಜ್ಞೆ ವಿಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...