Homeಮುಖಪುಟಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

- Advertisement -
- Advertisement -

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ.

ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ ಈ ಬಡಾವಣೆ ಇದೆ. ಫೆಬ್ರವರಿ 12 ರಿಂದ ತಮ್ಮ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಅಡಚಣೆ ಉಂಟಾಗಿದೆ ಎಂದು ಅಲ್ಲಿನ ನಿವಾಸಿಗಳು ವರದಿ ಮಾಡಿದ್ದಾರೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಪ್ರದೇಶದ ಬೀದಿ ದೀಪಗಳನ್ನು ಸಹ ಆಫ್ ಮಾಡಲಾಗಿದೆ. ಇದರಿಂದಾಗಿ ಕತ್ತಕಾದ ಬಳಿಕ ಕುಟುಂಬಗಳು ಕತ್ತಲೆಯಲ್ಲಿ ಕಷ್ಟಪಡಬೇಕಾಗಿದೆ.

ಆದರೆ, ಗ್ರಾಮದ ಉಳಿದ ಸಮುದಾಯದ ಜನರು ವಾಸಿಸುವ ಪ್ರದೇಶಗಳಲ್ಲಿ ಅಂತಹ ಯಾವುದೇ ಅಡಚಣೆ ಕಂಡುಬಂದಿಲ್ಲ ಎಂದು ನಿವಾಸಿಗಳು ಹೇಳಿಕೊಂಡಿದ್ದಾರೆ. “ಗ್ರಾಮದ ಇತರ ಭಾಗಗಳಲ್ಲಿನ ಮನೆಗಳಿಗೆ ನೀರು ಮತ್ತು ವಿದ್ಯುತ್ ಸಿಗುತ್ತಲೇ ಇದೆ, ಆದರೆ ನಾವು ವಂಚಿತರಾಗುತ್ತಿದ್ದೇವೆ” ಎಂದು ದಲಿತರು ಹೇಳಿದರು.

ಕೊಳವೆ ಬಾವಿಯಿಂದ ನೀರು ತೆಗೆಯುವುದನ್ನು ಸಹ ಪ್ರಬಲ ಜಾತಿ ಜನರು ತಡೆದಿದ್ದಾರೆ. “ನಾವು ಕೊಳವೆ ಬಾವಿಯಿಂದ ನೀರು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಮ್ಮನ್ನು ತಡೆಯಲಾಯಿತು. ಹಳ್ಳಿಯ ರಸ್ತೆಗಳಲ್ಲಿ ಪ್ರಯಾಣಿಸುವಾಗ, ಇತರ ಸಮುದಾಯಗಳ ಸದಸ್ಯರು ನಮ್ಮನ್ನು ಅಸ್ಪೃಶ್ಯರೆಂದು ಪರಿಗಣಿಸುತ್ತಾರೆ” ಎಂದು ನಿವಾಸಿ ಹೇಳಿದರು.

ಗ್ರಾಮದ ಇತರ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಸಹ ತಾರತಮ್ಯ ಎದುರಿಸುತ್ತಿರುವುದರಿಂದ ತಮ್ಮ ಸಮುದಾಯವನ್ನು ಜಾತಿಯ ಕಾರಣದಿಂದಾಗಿ ಗುರಿಯಾಗಿಸಲಾಗುತ್ತಿದೆ ಎಂದು ದಲಿತರು ಹೇಳಿದ್ದಾರೆ. ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ, ಸಮಸ್ಯೆ ಸರಿಪಡಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಅವರು ಹೇಳಿದರು.

ಗ್ರಾಮ ಅಧಿಕಾರಿ ಪದಮಾನವ ಸಮಂತರಾಯ್ ಮಾತನಾಡಿ, ಜಾತಿ ಆಧಾರಿತ ತಾರತಮ್ಯದ ಆರೋಪಗಳನ್ನು ತಳ್ಳಿಹಾಕಿದರು. ಆರಂಭಿಕ ತನಿಖೆಯು ಸಮುದಾಯಗಳ ನಡುವಿನ ದ್ವೇಷದ ಕಡೆಗೆ ತೋರಿಸಿದೆ ಎಂದು ಹೇಳಿದರು. ತನಿಖೆಗೆ ಆದೇಶಿಸಲಾಗಿದೆ, ಬ್ಲಾಕ್ ಅಭಿವೃದ್ಧಿ ಅಧಿಕಾರಿಗೆ ತಳಮಟ್ಟದಲ್ಲಿ ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ಸಮಂತರಾಯ್ ಹೇಳಿದರು.

“ಪ್ರಾಥಮಿಕ ತನಿಖೆಯು ಕೆಲವು ದಿನಗಳ ಹಿಂದೆ, ಬಾರಾತ್ ಮೆರವಣಿಗೆಯ ಸಮಯದಲ್ಲಿ ಗ್ರಾಮದ ಎರಡು ಗುಂಪುಗಳ ನಡುವೆ ದ್ವೇಷವಿತ್ತು ಎಂದು ಸೂಚಿಸಿದೆ. ಒಂದು ಗುಂಪು ಸೇಡಿನಿಂದ ನೀರು ಸರಬರಾಜು ಮತ್ತು ವಿದ್ಯುತ್ ಅನ್ನು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿತು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...