Homeಮುಖಪುಟಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

- Advertisement -
- Advertisement -

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಮಕಂದರ್ ಮಹಮ್ಮದ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರೆ, ಚಾಲಕ ಬದುಕುಳಿದಿದ್ದಾರೆ.

ಬೆಳಿಗ್ಗೆ 5 ಗಂಟೆಗೆ ನಡೆದ ದಾಳಿಯಲ್ಲಿ ಬಾಪು, ಪವನ್, ಪಿಂಟು, ನೇಪಾಳಿ ಮತ್ತು ಚಿನು ತೆಲೆಂಗಾ ಎಂಬುವವರು, ಇಬ್ಬರೂ ವ್ಯಕ್ತಿಗಳನ್ನು ಹರಿತವಾದ ಆಯುಧಗಳು, ಪೈಪ್‌ ಮತ್ತು ಚಾಕುಗಳಿಂದ ಹೊಡೆದಿದ್ದಾರೆ. ಜಾಳತಾಣದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ದಾಳಿಕೋರರು ಮಹಮ್ಮದ್ ಅವರನ್ನು ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸುತ್ತಿದ್ದಾರೆ. ಆರಂಭದಲ್ಲಿ, ಪ್ರಾಣಿ ಹಿಂಸೆ ತಡೆ ಕಾಯ್ದೆ, ಒರಿಸ್ಸಾ ಗೋಹತ್ಯೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದರು.

ಬಲಿಪಶುವಿನ ಸಹೋದರ ಜಿತೇಂದರ್ ಮಹಮ್ಮದ್ ಅವರ ದೂರಿನ ಮೇರೆಗೆ ಎರಡನೇ ಎಫ್‌ಐಆರ್ ದಾಖಲಿಸಲಾಗಿದ್ದು, ಐವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 103(2) ರ ಅಡಿಯಲ್ಲಿ ಗುಂಪು ಹತ್ಯೆಗೆ ಆರೋಪ ಹೊರಿಸಲಾಗಿದೆ. ಪೊಲೀಸರು ಒಂದು ಹಸು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ಜನರು ಭಾಗಿಯಾಗಿರುವುದನ್ನು ಗುರುತಿಸಲು ಶಂಕಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...