Homeದಲಿತ್ ಫೈಲ್ಸ್ಒಡಿಶಾ | ಮೇಕೆ ಕಳವು ಆರೋಪ; ದಲಿತ ಯುವಕರ ಮೇಲೆ ಹಲ್ಲೆ, ಚಪ್ಪಲಿ ಹಾರ!

ಒಡಿಶಾ | ಮೇಕೆ ಕಳವು ಆರೋಪ; ದಲಿತ ಯುವಕರ ಮೇಲೆ ಹಲ್ಲೆ, ಚಪ್ಪಲಿ ಹಾರ!

- Advertisement -
- Advertisement -

ಮೇಕೆ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರ ಮೇಲೆ ಹಲ್ಲೆ ನಡೆಸಿ, ಥಳಿಸಿ ಚಪ್ಪಲಿಯಿಂದ ಹಾರ ಹಾಕಿ ಅವಮಾನಿಸಿದ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶನಿವಾರ ವರದಿ ಮಾಡಿದೆ. ಒಡಿಶಾ

ಬಿರಿಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಒಡಿಶಾ ಕಾಂಗ್ರೆಸ್ ನಾಯಕ ಅಮಿಯಾ ಪಾಂಡವ್ ಅವರು ಶನಿವಾರ ಬೆಳಗ್ಗೆ ಎಕ್ಸ್‌ನಲ್ಲಿ, ನಡೆದ ಹಲ್ಲೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಪ್ರಕರಣದ ಬಗ್ಗೆ ಗಮನ ಸೆಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಬ್ಬರು ವ್ಯಕ್ತಿಗಳು ಆಟೋ ರಿಕ್ಷಾದಲ್ಲಿ ಎರಡು ಮೇಕೆಗಳನ್ನು ಸಾಗಿಸುತ್ತಿದ್ದಾಗ ಸ್ಥಳೀಯರು ಹಿಂಬಾಲಿಸಿ ಹಿಡಿದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನಂತರ ಅವರನ್ನು ಪೊಲೀಸರು ರಕ್ಷಿಸಿದ್ದು, ಕಳ್ಳತನದ ಆರೋಪ ಹೊರಿಸಿ, ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ವರದಿಯಾಗಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ಗಳ ಜೊತೆಗೆ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ, 1989 ರ ಅಡಿಯಲ್ಲಿ ಆಪಾದಿತ ಹಲ್ಲೆಗಾಗಿ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ದೌರ್ಜನ್ಯಕ್ಕೆ ಒಳಗಾದ ಯುವಕರಲ್ಲಿ ಒಬ್ಬರ ತಂದೆ ಜನವರಿ 1 ರಂದು ಈ ಬಗ್ಗೆ ದೂರು ನೀಡಿದ್ದಾರೆ. “ನನ್ನ ಮಗ ಮತ್ತು ಅವನ ಸ್ನೇಹಿತ ಸಿಮದಾಳ ಗ್ರಾಮದಿಂದ ಹಿಂದಿರುಗುತ್ತಿದ್ದಾಗ, ಕೆಲವು ಸ್ಥಳೀಯರು ಪಂಚಾಯಿತಿ ಕಚೇರಿ ಬಳಿಯ ಬರೇಡಿಯಾ ಸೇತುವೆಯ ಬಳಿ ಅವರ ಆಟೋರಿಕ್ಷಾವನ್ನು ತಡೆದಿದ್ದಾರೆ. ಈ ವೇಳೆ ನನ್ನ ಮಗನ ಹೆಸರು ಮತ್ತು ಊರಿನ ಬಗ್ಗೆ ಕೇಳಿದ್ದಾರೆ” ಎಂದು ಅವರು ದೂರಿದ್ದಾರೆ. ಒಡಿಶಾ

“ಈ ಅವರು ಹೆಸರು ಹೇಳಿದಾಗ, ಸ್ಥಳೀಯರು ನನ್ನ ಮಗ ಮತ್ತು ಅವನ ಸ್ನೇಹಿತನನ್ನು ಅಶ್ಲೀಲ ಭಾಷೆಯಲ್ಲಿ ನಿಂದಿಸಿ, ಜಾತಿಯ ನಿಂದನೆ ಮಾಡಿದ್ದಾರೆ. ಜೊತೆಗೆ ಮೇಕೆಗಳನ್ನು ಕದ್ದಿದ್ದಾರೆಂದು ಆರೋಪಿಸಿದ್ದಾರೆ” ಎಂದು ತಂದೆಯ ದೂರಿನಲ್ಲಿ ಹೇಳಿದ್ದಾರೆ. ಅಲ್ಲದೆ, ಹಲ್ಲೆ ವೇಳೆ ಅವರು ತಮ್ಮ ಮಗನ ಬಳಿಯಿದ್ದ ಬೆಳ್ಳಿಯ ಸರವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರನ್ನು ಗುರುತಿಸಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಜಗತ್‌ಸಿಂಗ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಭವಾನಿ ಶಂಕರ್ ಉದ್ಗಾಟ ತಿಳಿಸಿದ್ದಾರೆ. “ನಾವು ಅವರ ವಿರುದ್ಧ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದದ್ದಾರೆ.

ಘಟನೆ ಕಾಂಗ್ರೆಸ್ ಮುಖಂಡ ಪಾಂಡವ್ ಖಂಡಿಸಿದ್ದು, ಎಕ್ಸ್‌ನಲ್ಲಿ “ಇಂತಹ ಅಕ್ರಮವು ಬಿಜೆಪಿ ಆಡಳಿತದ ಒಡಿಶಾದ ಪ್ರಧಾನ ಲಕ್ಷಣವಾಗಿದೆ. ಜಗತ್‌ಸಿಂಗ್‌ಪುರದಲ್ಲಿ ಇಬ್ಬರು ದಲಿತ ಯುವಕರನ್ನು ಹೇಗೆ ನಡೆಸಿಕೊಂಡರು ನೋಡಿ! ಮಾನವ ಘನತೆ ಅಪಾಯದಲ್ಲಿದೆ, ಡಬಲ್ ಎಂಜಿನ್ ಸರ್ಕಾರಕ್ಕೆ ಅವಮಾನ” ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಒಡಿಶಾದ 147 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 78 ಸ್ಥಾನಗಳನ್ನು ಗೆದ್ದಿತ್ತು. ಮಾರ್ಚ್ 2000 ರಿಂದ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜು ಜನತಾ ದಳವು 51 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 14 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂಓದಿ:  ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...