Homeಮುಖಪುಟಒಡಿಶಾ| ಕಾಲಿಗೆ ಬೀಳದ ವಿದ್ಯಾರ್ಥಿಗಳಿಗೆ ಕೋಲಿನಿಂದ ಥಳಿಸಿದ ಸರ್ಕಾರಿ ಶಾಲೆ ಶಿಕ್ಷಕಿ

ಒಡಿಶಾ| ಕಾಲಿಗೆ ಬೀಳದ ವಿದ್ಯಾರ್ಥಿಗಳಿಗೆ ಕೋಲಿನಿಂದ ಥಳಿಸಿದ ಸರ್ಕಾರಿ ಶಾಲೆ ಶಿಕ್ಷಕಿ

- Advertisement -
- Advertisement -

ಬೆಳಗಿನ ಪ್ರಾರ್ಥನೆಯ ನಂತರ ತನ್ನ ಪಾದಕ್ಕೆ ಬೀಳದ 31 ವಿದ್ಯಾರ್ಥಿಗಳನ್ನು ಸಹಾಯಕ ಶಿಕ್ಷಕಿಯೊಬ್ಬರು ಥಳಿಸಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಬಳಿಕ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ಸೆಪ್ಟೆಂಬರ್ 11 ರಂದು ಖಂಡದೇವುಲಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸುಕಾಂತಿ ಕರ್ ಸಹಾಯಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ವರದಿಯ ಪ್ರಕಾರ, 6, 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳು ಬೆಳಗಿನ ಪ್ರಾರ್ಥನೆ ಮುಗಿಸಿ ತರಗತಿಗಳಿಗೆ ಹಾಜರಾಗಲು ಹೊರಟಾಗ, ಶಿಕ್ಷಕಿ ಅವರ ಕೋಣೆಗಳಿಗೆ ಪ್ರವೇಶಿಸಿ ತನ್ನ ಪಾದಗಳನ್ನು ಮುಟ್ಟದಿದ್ದಕ್ಕಾಗಿ ಅವರನ್ನು ಥಳಿಸಿದ್ದಾರೆ.

ಸ್ಥಳೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ನಡೆಸಿದ ವಿಚಾರಣೆಯ ನಂತರ ಬೆಟ್ನೋಯ್ ಬ್ಲಾಕ್‌ನ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಬಿಪ್ಲಪ್ ಕರ್ ಪ್ರಕರಣದ ನ್ಯಾಯವ್ಯಾಪ್ತಿಯನ್ನು ವಹಿಸಿಕೊಂಡರು.

“ಗೌರವಾರ್ಥವಾಗಿ ವಿದ್ಯಾರ್ಥಿಗಳು ತನ್ನ ಪಾದಗಳನ್ನು ಮುಟ್ಟದ ಕಾರಣ ಕರ್ ಬಹುಶಃ ಮನನೊಂದಿದ್ದರು. ನಂತರ ಅವರು 6, 7 ಮತ್ತು 8 ನೇ ತರಗತಿಗಳಿಗೆ ಹೋದರು, ಯಾರು ಪಾದ ಸ್ಪರ್ಶಿಸಿಲ್ಲ ಎಂದು ಕೇಳಿದ್ದಾರೆ. ಎದ್ದು ನಿಂತ ವಿದ್ಯಾರ್ಥಿಗಳಿಗೆ ಸಾಲಾಗಿ ನಿಲ್ಲಲು ಆದೇಶಿಸಲಾಯಿತು” ಎಂದು ಅಧಿಕಾರಿಯನ್ನು ಉಲ್ಲೂಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಶಿಕ್ಷಕರು ಬಿದಿರಿನ ಕೋಲಿನಿಂದ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದು, ಅವರಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ತಿಳಿದ ಕೂಡಲೇ ಪೋಷಕರು ಶಾಲೆಗೆ ಧಾವಿಸಿ ಕರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

“ಹಲವು ಮಕ್ಕಳ ಕೈಗಳಲ್ಲಿ ಮೂಗೇಟು ಆಗಿರುವುದುನ್ನೇ ಖುದ್ದು ನಾನೇ ಕಂಡುಕೊಂಡೆ. ಒಂದು ಮಗುವಿಗೆ ಪ್ರಥಮ ಚಿಕಿತ್ಸೆ ನೀಡಬೇಕಾಯಿತು, ಒಬ್ಬ ಹುಡುಗಿ ಸ್ವಲ್ಪ ಸಮಯದವರೆಗೆ ಪ್ರಜ್ಞೆ ಕಳೆದುಕೊಂಡಳು” ಎಂದು ಬಿಇಒ ಹೇಳಿದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಬೆಟ್ನೋಯ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕೇರಳ| 16 ವರ್ಷದ ಬಾಲಕನಿಗೆ 2 ವರ್ಷಗಳಿಗೂ ಹೆಚ್ಚು ಕಾಲ ಹಲ್ಲೆ; ಆರೋಪಿಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...