Homeಮುಖಪುಟಒಡಿಶಾ: ಶಾಲಾ ಆವರಣದಲ್ಲೆ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಮುಖ್ಯ ಶಿಕ್ಷಕ

ಒಡಿಶಾ: ಶಾಲಾ ಆವರಣದಲ್ಲೆ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಮುಖ್ಯ ಶಿಕ್ಷಕ

- Advertisement -
- Advertisement -

ಶಾಲಾ ಆವರಣದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಕೇಂದ್ರಪಾರಾ ಜಿಲ್ಲೆಯ ಖಾಸಗಿ ಶಾಲೆಯೊಂದರ 45 ವರ್ಷದ ಮುಖ್ಯ ಶಿಕ್ಷಕನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ನಡೆದ ಮರುದಿನ ಬಾಲಕಿಯರು ಶಾಲೆಗೆ ಹೋಗಲು ನಿರಾಕರಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ಅವರ ಹಣಟಕ್ಕೆ ಕಾರಣ ಕೇಳಿದ ಬಾಲಕಿಯರ ಪೋಷಕರು ಆಘಾತಕ್ಕೆ ಒಳಗಾಗಿದ್ದಾರೆ.

ಮುಖ್ಯ ಶಿಕ್ಷಕ ಜನವರಿ 16 ರಂದು 6 ಮತ್ತು 7 ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಮರುದಿನ ಹುಡುಗಿಯರು ಶಾಲೆಗೆ ಹೋಗಲು ನಿರಾಕರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯರ ಹಠಕ್ಕೆ ಕಾರಣ ಕೇಳಿದ ಪೋಷಕರಿಗೆ ಅತ್ಯಾಚಾರವಾಗಿರುವ ವಿಚಾರ ತಿಳಿದುಂದಿದೆ.

ಶಾಲೆಯು ಬೆಳಿಗ್ಗೆ 6.30 ರಿಂದ 11 ರವರೆಗೆ ಕಾರ್ಯನಿರ್ವಹಿಸುತ್ತದೆ. ಕೆಲವು ವಿದ್ಯಾರ್ಥಿಗಳು ಖಾಸಗಿ ಟ್ಯೂಷನ್‌ನಲ್ಲಿ ಓದಲು ಅಲ್ಲಿಯೇ ಉಳಿಯುತ್ತಾರೆ. ಆರೋಪಿ ಮುಖ್ಯೋಪಾಧ್ಯಾಯರು ಶಾಲಾ ಅವಧಿಯ ನಂತರ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಸೆಕ್ಷನ್ 376 (ಎಫ್) (ಸಂಬಂಧಿ, ಪಾಲಕ ಅಥವಾ ಶಿಕ್ಷಕ, ಅಥವಾ ಮಹಿಳೆಯ ಬಗ್ಗೆ ನಂಬಿಕೆ ಅಥವಾ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿ, ಅಂತಹ ಮಹಿಳೆಯ ಮೇಲೆ ಅತ್ಯಾಚಾರ ಎಸಗುವುದು), 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಶಕ್ತಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜತೆಗೆ, ಭಾರತೀಯ ದಂಡ ಸಂಹಿತೆಯ (ಐಪಿಸಿ) 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ 2012 ರ ಸೆಕ್ಷನ್ 4ರ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ರಾಜನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಜಯ ಕುಮಾರ್ ಜೆನಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಆರೋಪಿ ಮುಖ್ಯೋಪಾಧ್ಯಾಯನ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

ಇದನ್ನೂ ಓದಿ; ‘ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ; ಬೇರೆಯವರಿಂದ ಭಕ್ತಿ ಕಲಿಯುವ ಅಗತ್ಯವಿಲ್ಲ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಿಡಿಪಿ

ತುರ್ತುಪರಿಸ್ಥಿತಿಯನ್ನು ಇಂದಿರಾ ಗಾಂಧಿ ತಪ್ಪು ಎಂದು ಒಪ್ಪಿಕೊಂಡಿದ್ದರು, ಬಿಜೆಪಿ ಹಿಂದಿನದನ್ನು ಮರೆಯಬೇಕು: ಪಿ. ಚಿದಂಬರಂ

0
ತುರ್ತು ಪರಿಸ್ಥಿತಿ ಕಹಿ ನೆನಪಿಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನೇತೃತ್ವದ ಕೇಂದ್ರವು ಜೂನ್ 25 (ಗುರುವಾರ) ಆಚರಿಸುವುದಾಗಿ ಘೋಷಿಸಿದ ನಂತರ, ತಮ್ಮ ನಿರ್ಧಾರ ತಪ್ಪು ಎಂದು ಆಗಿನ ಪ್ರಧಾನಿ ಇಂದಿರಾ ಗಾಂಧಿ...