Homeಮುಖಪುಟಒಡಿಶಾದ ಸಚಿವನಿಗೆ ಎರಡು ಸುತ್ತು ಗುಂಡು ಹಾರಿಸಿದ ಪೊಲೀಸ್: ಆಸ್ಪತ್ರೆಗೆ ದಾಖಲು

ಒಡಿಶಾದ ಸಚಿವನಿಗೆ ಎರಡು ಸುತ್ತು ಗುಂಡು ಹಾರಿಸಿದ ಪೊಲೀಸ್: ಆಸ್ಪತ್ರೆಗೆ ದಾಖಲು

- Advertisement -
- Advertisement -

ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಅವರಿಗೆ ಸಹಾಯಕ ಸಬ್ ಇನ್ಸ್‌ಪೆಕ್ಟರ್‌ ಒಬ್ಬರು ಎರಡು ಸುತ್ತು ಗುಂಡು ಹಾರಿಸಿರುವ ಘಟನೆ ಜಾರ್ಸುಗುಡಾ ಜಿಲ್ಲೆಯ ಬ್ರಜರಾಜನಗರದಲ್ಲಿ ವರದಿಯಾಗಿದೆ.

ಇಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಸಚಿವರು ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಹತ್ತಿರದಲ್ಲಿ ಕಾರು ಇಳಿಯುವಾಗ ಸಬ್ ಇನ್ಸ್‌ಪೆಕ್ಟರ್‌ನಿಂದ ಗುಂಡು ಹಾರಿಸಿದ್ದಾರೆ. ಸಚಿವರ ಎದೆಗೆ ಗುಂಡು ತಗುಲಿದ್ದು ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ದಾಸ್ ಅವರು ಸಚಿವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆದರೆ ಯಾವ ಉದ್ದೇಶದಿಂದ ಗುಂಡು ಹಾರಿಸಿದ್ದಾರೆ ಎಂಬುದು ಇನ್ನೂ ತಿಳಿದಿಲ್ಲ. ಈ ಕುರಿತು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಬ್ರಜರಾಜನಗರ ಉಪವಿಭಾಗದ ಪೊಲೀಸ್ ಅಧಿಕಾರಿ ಗುಪ್ತೇಶ್ವರ ಭೋಯ್ ತಿಳಿಸಿದ್ದಾರೆ.

ಇದನ್ನೂ ಓದಿ: ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...