Homeಮುಖಪುಟಒಡಿಶಾ| ಇನ್ನೂರು ರೂಪಾಯಿಗೆ ಮೊಮ್ಮಗನನ್ನು ಮಾರಾಟ ಮಾಡಿದ ವೃದ್ಧೆ

ಒಡಿಶಾ| ಇನ್ನೂರು ರೂಪಾಯಿಗೆ ಮೊಮ್ಮಗನನ್ನು ಮಾರಾಟ ಮಾಡಿದ ವೃದ್ಧೆ

- Advertisement -
- Advertisement -

ನೋಡಿಕೊಳ್ಳಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ, ಆತನಿಗೆ ಉತ್ತಮ ಜೀವನ ಸಿಗಲು ಎಂಬ ಉದ್ದೇಶದಿಂದ ವೃದ್ಧ ಮಹಿಳೆಯೊಬ್ಬರು ತಮ್ಮ ಏಳು ವರ್ಷದ ಮೊಮ್ಮಗನನ್ನು ರೂ.200 ಕ್ಕೆ ಮಾರಿದ್ದಾರೆ ಎಂದು ಮಕ್ಕಳ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಡಿಶಾದಲ್ಲಿ ನಡೆದಿರುವ ಈ ಘಟನೆಯು ಬದ್ಲಿಯಾ ಗ್ರಾಮದ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ. ನಂತರ, ಮಗುವನ್ನು ರಕ್ಷಿಸಿ ಮಕ್ಕಳ ಆರೈಕೆ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಮಾಂಡ್ ಸೊರೆನ್ ಎಂದು ಗುರುತಿಸಲಾದ ಮಹಿಳೆ ಮಗುವನ್ನು ಅಪರಿಚಿತ ದಂಪತಿಗಳಿಗೆ ಹಸ್ತಾಂತರಿಸಿದ್ದು, ಅವರು ಆತನಿಗೆ ಆಹಾರ, ಆಶ್ರಯ ಮತ್ತು ಶಿಕ್ಷಣವನ್ನು ಒದಗಿಸುತ್ತಾರೆ ಎಂದು ನಂಬಿದ್ದೆ ಎಂದು ಹೇಳಿರುವುದಾಗಿ ವರದಿಯಾಗಿದೆ.

65 ವರ್ಷದ ಸೊರೆನ್ ನಿರಾಶ್ರಿತರಾಗಿದ್ದರು, ಭೂಮಿ ಇರಲಿಲ್ಲ. ಅವರಿಗೆ ಯಾವುದೇ ಸರ್ಕಾರಿ ನೆರವು ಸಿಗುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪತಿ ವರ್ಷಗಳ ಹಿಂದೆ ನಿಧನರಾಗಿದ್ದರು, ಅವರ ಮಗ ಕಾಣೆಯಾಗಿದ್ದು, ಸೊಸೆ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಸಾವನ್ನಪ್ಪಿದ್ದರು.

ಯಾವುದೇ ಬೆಂಬಲವಿಲ್ಲದೆ, ಸೊರೆನ್ ರಾಯ್ಪಾಲ್ ಗ್ರಾಮದಲ್ಲಿರುವ ತನ್ನ ಸಹೋದರಿಯ ಮನೆಗೆ ತೆರಳಿದರು. ಅಲ್ಲಿ ಅವರು ತಮ್ಮ ಮೊಮ್ಮಗನನ್ನು ನೋಡಿಕೊಳ್ಳುವಂತೆ ಬೇಡಿಕೊಳ್ಳಲು ಪ್ರಾರಂಭಿಸಿದರು. ಅವರ ಆರೋಗ್ಯ ಹದಗೆಟ್ಟಂತೆ, ಬಾಲಕನನ್ನು ಹಾರೈಕೆ ಮಾಡಲು ಹೆಣಗಾಡಿದರು. ಅಂತುಮವಾಗಿ, ಮಗುವನ್ನು ಬೇರೆಯವರಿಗೆ ನೀಡಿದರು.

ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರು ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ, ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಮಗುವನ್ನು ಠಾಣೆಗೆ ಕರೆತರಲಾಯಿತು, ಅಲ್ಲಿ ಮಕ್ಕಳ ರಕ್ಷಣಾ ಇಲಾಖೆ ಮತ್ತು ರಸ್ಗೋವಿಂದ್‌ಪುರ ಮಕ್ಕಳ ಅಭಿವೃದ್ಧಿ ಯೋಜನಾ ಕಚೇರಿಯ ಅಧಿಕಾರಿಗಳು ಕುಟುಂಬದೊಂದಿಗೆ ಭೇಟಿಯಾದರು.

ತನಿಖೆಯ ನಂತರ, ಮಕ್ಕಳ ರಕ್ಷಣಾ ಅಧಿಕಾರಿಯೊಬ್ಬರು, “ಮಹಿಳೆ ಮಗುವನ್ನು ಆರ್ಥಿಕ ಲಾಭಕ್ಕಾಗಿ ಮಾರಾಟ ಮಾಡಿಲ್ಲ, ಬದಲಿಗೆ ಉತ್ತಮ ಆರೈಕೆಗಾಗಿ ದಂಪತಿಗಳಿಗೆ ನೀಡಿದ್ದಾಳೆ. ಏಕೆಂದರೆ, ಆಕೆ ಇನ್ನು ಮುಂದೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ನಾವು ವಿಚಾರಣೆಯಲ್ಲಿ ಕಂಡುಕೊಂಡಿದ್ದೇವೆ” ಎಂದು ಹೇಳಿದರು.

ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಆರೈಕೆಯಲ್ಲಿ ಇರಿಸಲಾಗಿದ್ದು, ಈಗ ಬರಿಪಾದದಲ್ಲಿರುವ ಮಕ್ಕಳ ರಕ್ಷಣಾ ಕೇಂದ್ರದಲ್ಲಿದೆ.

ಸ್ಥಳೀಯ ನಿವಾಸಿಗಳು ಸೊರೆನ್ ಅವರಿಗೆ ಪಿಂಚಣಿ ಸೌಲಭ್ಯ, ವಸತಿ ಬೆಂಬಲವನ್ನು ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢ ಎನ್‌ಕೌಂಟರ್ : 22 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...