Homeಮುಖಪುಟಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ ಸ್ಥಳಾಂತರಗೊಂಡಿದೆ.

ಧೆಂಕನಾಲ್ ಜಿಲ್ಲೆಯ ಪರ್ಜಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂದರ್ಸಿಂಗ ಗ್ರಾಮದಲ್ಲಿ ಜನವರಿ 4 ರಂದು ಪಾದ್ರಿ ಬಿಪಿನ್ ಬಿಹಾರಿ ನಾಯಕ್ ಮೇಲೆ ಹಲ್ಲೆ ನಡೆಸಲಾಯಿತು. ಎಫ್‌ಐಆರ್ ಪ್ರಕಾರ, 15 ರಿಂದ 20 ಜನರ ಗುಂಪು ನಾಯಕ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಮನೆಗೆ ಬಲವಂತವಾಗಿ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿತು.

ಪಾದ್ರಿಯನ್ನು ಥಳಿಸಿ, ಚಪ್ಪಲಿ ಹಾರ ಹಾಕಿ, ಗ್ರಾಮದಾದ್ಯಂತ ಮೆರವಣಿಗೆ ಮಾಡಿ, ಬಲವಂತವಾಗಿ ಕೊಳಕು ನೀರು ಕುಡಿಸಲಾಯಿತು. ಅವರ ಇಚ್ಛೆಗೆ ವಿರುದ್ಧವಾಗಿ ದೇವಾಲಯದ ಮುಂದೆ ನಮಸ್ಕರಿಸಲಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ. ನಾಯಕ್ ಅವರ ಪತ್ನಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಘಟನೆಯ ನಂತರ, ನಾಯಕ್ ಅವರು ಅಂಗುಲ್ ಜಿಲ್ಲೆಯ ತಮ್ಮ ಸ್ಥಳೀಯ ಗ್ರಾಮದಲ್ಲಿಯೇ ವಾಸಿಸುತ್ತಿದ್ದಾರೆ. ಅವರು ಮನಗೆಗೆ ಹಿಂತಿರುಗಲು ಹೆದರುತ್ತಿದ್ದಾರೆ. ಒಂದು ವಾರದೊಳಗೆ ಮನೆ ಬಾಡಿಗೆ ಮನೆ ಖಾಲಿ ಮಾಡುವಂತೆ ಮಾಲೀಕರು ಒತ್ತಾಯಿಸಿದ ಬಳಿಕ ತಮ್ಮ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರ ಕುಟುಂಬ ತಿಳಿಸಿದೆ.

“ನನ್ನ ಸಹೋದರ ಎಂಟು ವರ್ಷಗಳ ಕಾಲ ಯಾವುದೇ ಸಮಸ್ಯೆಯಿಲ್ಲದೆ ವಾಸಿಸುತ್ತಿದ್ದ ಮನೆಯಿಂದ ಅದರ ಮಾಲೀಕರು ಹೊರಹೋಗುವಂತೆ ಒತ್ತಡ ಹಾಕುತ್ತಿದ್ದಾರೆ; ಅನಿವಾರ್ಯವಾಗಿ ನಾವು ಅಲ್ಲಿಂದ ಹೊರಟೆವು” ಎಂದು ನಾಯಕ್ ಅವರ ಹಿರಿಯ ಸಹೋದರ ಉದಯನಾಥ್ ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಒಬ್ಬರ ಸ್ವಂತ ನಂಬಿಕೆಯನ್ನು ಪಾಲಿಸುವುದು ಪಾಪವೇ? ಈ ದೇಶದಲ್ಲಿ ಅದು ಮೂಲಭೂತ ಹಕ್ಕಲ್ಲವೇ” ಎಂದು ಪ್ರಶ್ನಿಸಿದ ಅವರು, ತನ್ನ ಸಹೋದರನನ್ನು ಗ್ರಾಮಸ್ಥರೊಬ್ಬರು ಅವರ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಲು ಆಹ್ವಾನಿಸಿದ್ದರು, ಬಲವಂತದ ಧಾರ್ಮಿಕ ಮತಾಂತರ ಮಾಡಲು ಅಲ್ಲ ಎಂದು ಜೇಮ್ಸ್ ಆರೋಪಗಳನ್ನು ತಿರಸ್ಕರಿಸಿದರು.

“ಅವರು ಕಳೆದ ಎರಡು ವರ್ಷಗಳಿಂದ ಅಲ್ಲಿಗೆ ಪ್ರಾರ್ಥನೆ ಸಲ್ಲಿಸಲು ಮಾತ್ರ ಹೋಗುತ್ತಿದ್ದಾರೆ. ಈ ಆರೋಪಗಳು ಸುಳ್ಳು ಮತ್ತು ಪ್ರಕರಣವನ್ನು ದುರ್ಬಲಗೊಳಿಸುವ ಉದ್ದೇಶವನ್ನು ಹೊಂದಿವೆ” ಎಂದು ಅವರು ಹೇಳಿದರು.

ಘಟನೆಯ ಗಂಭೀರತೆಯ ಹೊರತಾಗಿಯೂ ಸ್ಥಳೀಯ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಲಿಲ್ಲ ಎಂದು ಕುಟುಂಬ ಆರೋಪಿಸಿದೆ. ದೂರಿನ ಪ್ರಕಾರ, ನಾಯಕ್ ಅವರ ಪತ್ನಿ ಹಲ್ಲೆ ನಡೆದ ಅರ್ಧ ಗಂಟೆಯೊಳಗೆ ಪೊಲೀಸ್ ಠಾಣೆಗೆ ತಲುಪಿದರು, ಆದರೆ ಪೊಲೀಸರು ತುರ್ತು ಕ್ರಮ ತೆಗೆದುಕೊಂಡಿಲ್ಲ.

“ಅಪರಾಧದ ಗಂಭೀರತೆಯ ಹೊರತಾಗಿಯೂ, ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು. ಅಧಿಕಾರಿಗಳು ಸ್ಥಳಕ್ಕೆ ತಲುಪುವ ಹೊತ್ತಿಗೆ, ನನ್ನ ಪತಿ ಈಗಾಗಲೇ ತೀವ್ರ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ಅನುಭವಿಸಿದ್ದರು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕುಟುಂಬವು ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ. ಧೆಂಕನಲ್ ಎಸ್‌ಪಿ ಅಭಿನವ್ ಸೋಂಕರ್ ಅವರು ಪರ್ಜಂಗ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್‌ನಿಂದ ವಿವರಣೆ ಕೇಳಿದ್ದೇವೆ ಎಂದು ಹೇಳಿದರು. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು, ಇದುವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದರು.

ರಾಜಕೀಯ ಪ್ರತಿಕ್ರಿಯೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಹಲ್ಲೆಯನ್ನು ಖಂಡಿಸಿದರು. “ತೀವ್ರ ಅಮಾನವೀಯ ಕೃತ್ಯ” ಎಂದು ಕರೆದು, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅಸಹಿಷ್ಣುತೆಯ ವಾತಾವರಣವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕೂಡ ದಾಳಿಯನ್ನು ಖಂಡಿಸಿದರು. ಇದು ಸಾಂವಿಧಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ, ಹೊಣೆಗಾರರಾದವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಿಗೆ ಪತ್ರ ಬರೆದು, ಪಾದ್ರಿ ಮತ್ತು ಅವರ ಕುಟುಂಬಕ್ಕೆ ತಕ್ಷಣರಕ್ಷಣೆ ನೀಡುವಂತೆ ಕೋರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್...

ಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

ಆಧಾರ್ ಕಾರ್ಡ್‌ ಇಲ್ಲದ ಕಾರಣ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದು, ಪರಿಣಾಮ ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಸಮುದಾಯದ ಮಹಿಳೆಯೊಬ್ಬರು ಪರದಾಡುತ್ತಿರುವ ಬಗ್ಗೆ ತೆಲಂಗಾಣದ ಕರೀಂನಗರ ಜಿಲ್ಲೆಯಿಂದ ವರದಿಯಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ...

ಲ್ಯಾಂಡ್‌ಲಾರ್ಡ್: ಜಮೀನ್ದಾರಿ ವ್ಯವಸ್ಥೆ, ಜಾತಿ ಪ್ರಶ್ನೆ ಮತ್ತು ಸಂವಿಧಾನ – ಕನ್ನಡ ಚಿತ್ರರಂಗದ ಒಂದು ಮಹತ್ವದ ತಿರುವು

ಕನ್ನಡ ಮುಖ್ಯವಾಹಿನಿ ಸಿನೆಮಾ ಅಪರೂಪಕ್ಕೊಮ್ಮೆ ಮಾತ್ರ ಸಮಾಜದ ಮೂಲಭೂತ ಪ್ರಶ್ನೆಗಳತ್ತ ನೇರವಾಗಿ ಮುಖ ಮಾಡುತ್ತದೆ. ಜಾತಿ, ಭೂಮಿ, ಅಧಿಕಾರ ಎಲ್ಲವನ್ನು ಒಟ್ಟಿಗೆ ಹಿಡಿದು ಪ್ರಶ್ನಿಸುವ ಚಿತ್ರಗಳು ಇನ್ನೂ ವಿರಳ. ನಿರ್ದೇಶಕ–ಕಥಾಲೇಖಕ ಜಡೆಶ್ ಕೆ....

ಕುಡುಪು ಗುಂಪು ಹತ್ಯೆ : ಮತ್ತೊಬ್ಬ ಆರೋಪಿಗೆ ಜಾಮೀನು

ಮಂಗಳೂರು ಹೊರವಲಯದ ಕುಡುಪು ಬಳಿ 2025ರ ಏಪ್ರಿಲ್ 27ರಂದು ನಡೆದ ಕೇರಳ ಮೂಲದ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಆರೋಪಿ ನಟೇಶ್ ಕುಮಾರ್‌ಗೆ ಹೈಕೋರ್ಟ್ ಶುಕ್ರವಾರ (ಜ.23) ಜಾಮೀನು ಮಂಜೂರು...

ಬಂಗಾಳದಲ್ಲಿ ಎಸ್‌ಐಆರ್ ಭಯದಿಂದ 110 ಮಂದಿ ಆತ್ಮಹತ್ಯೆ : ಸಿಎಂ ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಭಯದಿಂದ ಪ್ರತಿದಿನ ಪಶ್ಚಿಮ ಬಂಗಾಳದಲ್ಲಿ ಮೂರ್ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ (ಜ.23) ಹೇಳಿದ್ದಾರೆ. ಚುನಾವಣಾ ಆಯೋಗ ಮತ್ತು ಕೇಂದ್ರ...

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...