Homeಚಳವಳಿಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ತಮ್ಮ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ಉಳಿಸಿಕೊಳ್ಳಲು ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್‌ಡಬ್ಲ್ಯು) ಲಿಮಿಟೆಡ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾ ಗ್ರಾಮದಲ್ಲಿ ನಡೆದಿದೆ.

ಧಿಂಕಿಯಾ, ನುಗಾಂವ್ ಮತ್ತು ಗಡಕುಜಾಂಗ್‌ನ ಕಡಲತೀರದ ಗ್ರಾಮ ಪಂಚಾಯತ್‌ಗಳಲ್ಲಿ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯೂಗೆ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ನೀಡುವ ಒಡಿಶಾ ಸರ್ಕಾರದ ಯೋಜನೆಯನ್ನು ಹಲವಾರು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಜನವರಿ 14 ರಂದು ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾದಲ್ಲಿ ತೋಟಗಳನ್ನು ಕೆಡವದಂತೆ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಮಹಿಳೆಯರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಪೊಲೀಸರು ಜನವರಿ 14 ರಂದು ಗ್ರಾಮಸ್ಥರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ಗಳನ್ನು ಮುರಿದು ಧಿಂಕಿಯಾ ಗ್ರಾಮವನ್ನು ಪ್ರವೇಶಿಸಿದ್ದರು. ಪೊಲೀಸರು ಮತ್ತು ಅಧಿಕಾರಿಗಳ ಗ್ರಾಮ ಪ್ರವೇಶವನ್ನು ತಡೆಯಲು ಜೆಎಸ್‌ಡಬ್ಲ್ಯೂ ಪ್ರತಿರೋಧ್ ಸಂಗ್ರಾಮ್ ಸಮಿತಿಯ ಮುಖಂಡರು ಮಹಿಳೆಯರು ಮತ್ತು ಮಕ್ಕಳನ್ನು ಮುಂದೆ ನಿಲ್ಲಿಸಿದ್ದರು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಆದರೆ, ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಹಲವರು ಗಾಯಗೊಂಡಿದ್ದಾರೆ ಎಂದು ಧಿಂಕಿಯಾ ನಿವಾಸಿ ಗಣೇಶ್ ದಾಸ್ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಅದರ ಶಸ್ತ್ರಸಜ್ಜಿತ ಪೊಲೀಸರು ಜೆಎಸ್‌ಡಬ್ಲ್ಯೂ ಜನರೊಂದಿಗೆಗೆ ಕೈಜೋಡಿಸಿ ಈ ಪ್ರದೇಶದಲ್ಲಿ ಜನರನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಅನೇಕ ಹಳ್ಳಿಗರ ವೀಳ್ಯದೆಲೆ ತೋಟಗಳನ್ನು ಅಕ್ರಮವಾಗಿ ನೆಲಸಮಗೊಳಿಸಿದ್ದಾರೆ. ಆದರೆ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯುಗೆ ನಾವು ನಮ್ಮ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ” ಎಂದು ಧಿಂಕಿಯಾದ ರೈತ ಅನಿಲ್ ಬೆಹೆರಾ ಹೇಳಿದ್ದಾರೆ. ಪೋಲೀಸರ ದೌರ್ಜನ್ಯದ ವಿರುದ್ಧ ಕಿಡಿಕಾರಿದ್ದಾರೆ.

“ಜನವರಿ 14 ರಂದು, ಕನಿಷ್ಠ 500 ಗ್ರಾಮಸ್ಥರು ಅದರಲ್ಲೂ ಹೆಚ್ಚಾಗಿ ಮಹಿಳೆಯರು, ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು, ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ವೀಳ್ಯದೆಲೆ ಬಳ್ಳಿ ಕಿತ್ತು ಹಾಕುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಈ ಭಾಗದಲ್ಲಿ ಸ್ಟೀಲ್ ಪ್ಲಾಂಟ್ ಸ್ಥಾಪನೆಗೆ ಹಲವರು ಒಲವು ತೋರಿದ್ದಾರೆ. ಆದರೆ ಕೆಲವು ಜನರು ಧಿಂಕಿಯಾದಲ್ಲಿ ತೊಂದರೆಯನ್ನುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಎರಸಮ ಬ್ಲಾಕ್‌ನ ತಹಸೀಲ್ದಾರ್ ಪ್ರಜ್ಞಾನಂದ ದಾಸ್ ಹೇಳಿದ್ದಾರೆ.

ಜಗತ್‌ಸಿಂಗ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಪಾಂಡಾ ಮಾತನಾಡಿ, ಸರ್ಕಾರಿ ಜಮೀನುಗಳಲ್ಲಿರುವ ವೀಳ್ಯದೆಲೆ ತೋಟಗಳನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವಂತೆ ಆಡಳಿತವು ಎಲ್ಲಾ ವೀಳ್ಯದೆಲೆ ರೈತರಿಗೆ ಜನವರಿ 14 ರಂದು ಮನವಿ ಮಾಡಿದೆ. ದಿಂಕಿಯಾದಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಕಾಮಗಾರಿಯನ್ನು ಕೆಲವು ದುರುದ್ದೇಶದಿಂದ ವಿರೋಧಿಸಿದ್ದಾರೆ, ಇದಕ್ಕಾಗಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನಾಕಾರರು ದಳಿ ನಡೆಸಿದ್ದರಿಂದ ಕೆಲವು ಪೊಲೀಸರಿಗೆ ಗಾಯಗಳಾಗಿವೆ” ಎಂದಿದ್ದಾರೆ.

ಗ್ರಾಮಸ್ಥರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಶನಿವಾರದಿಂದ ಗ್ರಾಮದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಭೂಸ್ವಾಧೀನ ವಿರೋಧಿ ಗ್ರಾಮಸ್ಥರ ಬೆದರಿಕೆಯ ದೃಷ್ಟಿಯಿಂದ ಸುಗಮವಾಗಿ ಭೂಸ್ವಾಧೀನ ಕಾರ್ಯ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಉದ್ದೇಶಿತ ಉಕ್ಕಿನ ಸ್ಥಾವರದ ಸ್ಥಳದಲ್ಲಿ 12 ಪೊಲೀಸರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪಾಂಡಾ ಹೇಳಿದ್ದಾರೆ.


ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...