Homeಮುಖಪುಟನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ!

ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ನಲ್ಲಿ ಭಾಗವಹಿಸಲು ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು.

- Advertisement -
- Advertisement -

ಏಪ್ರಿಲ್‌ನಲ್ಲಿ ನಡೆಯಲಿರುವ ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್ 2021 ರಲ್ಲಿ ಭಾಗವಹಿಸಲು ಒಡಿಶಾದ 10 ಶಾಲಾ ವಿದ್ಯಾರ್ಥಿಗಳನ್ನು ಒಳಗೊಂಡ ನವೋನ್‌ಮೇಶ್ ಪ್ರಸಾರ್ ಸ್ಟೂಡೆಂಟ್ಸ್ ಅಸ್ಟ್ರೋನಮಿ ಟೀಮ್ (NaPSAT) ಆಯ್ಕೆಯಾಗಿದೆ.

ಭುವನೇಶ್ವರ ಮೂಲದ ನವೋನ್‌ಮೇಶ್ ಪ್ರಸಾರ್ ಫೌಂಡೇಶನ್‌ನ ಬಾಹ್ಯಾಕಾಶ ಉತ್ಸಾಹಿಗಳ ತಂಡವೇ NaPSAT. ಈ ಉತ್ಸಾಹಿಗಳ ತಂಡ ಬಾಹ್ಯಾಕಾಶ ವ್ಯವಸ್ಥೆಗಳು, ರೋವರ್‌ಗಳು, ರಾಕೆಟ್‌ಗಳು, ಉಪಗ್ರಹಗಳು ಮತ್ತು ಖಗೋಳವಿಜ್ಞಾನದ ವಿನ್ಯಾಸಗಳ ಕುರಿತು ಪ್ರಾಜೆಕ್ಟ್ ಮಾಡಿ ವಿವಿಧ ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತದೆ.

ಈ ಬಾರಿ ನಾಸಾದ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು ಎಂದು ನವೋನ್‌ಮೇಶ್ ಪ್ರಸಾರ್ ಫೌಂಡೇಶನ್ ಸಂಸ್ಥಾಪಕ ಅನಿಲ್ ಪ್ರಧಾನ್ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

“ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ನಲ್ಲಿ ಭಾಗವಹಿಸಲು ಭಾರತದಿಂದ ಶಾಲಾ ತಂಡವನ್ನು ಆಯ್ಕೆ ಮಾಡಿರುವುದು ಇದೆ ಮೊದಲು. ನಾವು ಕೊರೊನಾ ಸಮಯದಲ್ಲಿ ಈ ತಂಡವನ್ನು ರಚಿಸಿದ್ದೇವೆ. ಒಡಿಶಾದ 10 ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ತರಬೇತಿ ನೀಡಿ, ನಂತರ ನಾಸಾದ ರೋವರ್ ಚಾಲೆಂಜ್‌ಗೆ ಅರ್ಜಿ ಸಲ್ಲಿಸಿದ್ದೇವೆ” ಎಂದು ಅನಿಲ್ ಪ್ರಧಾನ್ ಮಾಹಿತಿ ನೀಡಿದ್ದಾರೆ.

ಜೊತೆಗೆ, “ಈ ತಂಡವು ಶಾಲಾ ವಿದ್ಯಾರ್ಥಿಗಳನ್ನು ಮತ್ತು ಐಟಿಐ ವಿದ್ಯಾರ್ಥಿಗಳನ್ನು ಹೊಂದಿದೆ. ಅವರು ಮಂಗಳ ಗ್ರಹದ ಮೇಲ್ಮೈಯಲ್ಲಿ ಚಲಿಸಬಲ್ಲ ರೋವರ್ ತಯಾರಿಸುತ್ತಿದ್ದಾರೆ ಮತ್ತು ಅದು ಮಾನವ-ಚಾಲಿತ ರೋವರ್ ಆಗಿರುತ್ತದೆ “ಎಂದು ಅನಿಲ್ ಪ್ರಧಾನ್ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

’ನಮಗೆ ನಾಸಾದಿಂದ ಆಹ್ವಾನ ಬಂದಿದೆ ಮತ್ತು ಕಾರ್ಯಕ್ರಮ 2021ರ ಏಪ್ರಿಲ್‌ನಲ್ಲಿ ನಡೆಯಲಿದೆ. ನಾವು ರೋವರ್ ತಯಾರಿಸುತ್ತಿದ್ದೇವೆ ಮತ್ತು ಅದನ್ನು ನಾಸಾಗೆ ಕಳುಹಿಸುತ್ತೇವೆ. ನಾಸಾಗೆ ಹೋಗಿ ಇತರ ತಂಡಗಳೊಂದಿಗೆ ಸ್ಪರ್ಧಿಸುತ್ತೇವೆ. ಅದಕ್ಕಾಗಿ ನಾವು ಕೂಡ ಹಣವನ್ನು ಸಂಗ್ರಹಿಸುತ್ತಿದ್ದೇವೆ” ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

NaPSAT ತಂಡದ ಭಾಗವಾಗಿರುವ 9 ನೇ ತರಗತಿ ವಿದ್ಯಾರ್ಥಿ ತನ್ವಿ ಮಲ್ಲಿಕ್ ತಮ್ಮ ತಂಡ ನಾಸಾ ರೋವರ್‌ ಚಾಲೆಂಜ್‌ಗೆ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ನಾಪ್ಸಾಟ್ ಬಗ್ಗೆ ತಿಳಿದಿದ್ದೆ. ಈ ತಂಡವನ್ನು ಸೇರಲು ನಾನು ಪ್ರಯತ್ನಿಸಿದ್ದೆ. ಈಗ ನಾನು ಆಯ್ಕೆಯಾಗಿದ್ದೇನೆ. ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್ 2021ಕ್ಕೆ ನಮ್ಮನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಹೆಮ್ಮೆಯಿದೆ’ ಎಂದಿದ್ದಾರೆ.

’ನಾವು ನಾಸಾಗೆ ಆಯ್ಕೆಯಾದ ಒಡಿಶಾದ ಮೊದಲ ತಂಡ ಮತ್ತು ಭಾರತದಿಂದ ಮೊದಲ ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ. ನಾವು 2021 ಏಪ್ರಿಲ್‌ನಲ್ಲಿ ಅಮೆರಿಕಾದ ಅಲಬಾಮಾಕ್ಕೆ ಹೋಗುತ್ತಿದ್ದೇವೆ ಮತ್ತು ಈ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತೇವೆ” ಎಂದು ತನ್ವಿ ಮಲ್ಲಿಕ್ ಹೇಳಿದ್ದಾರೆ.


ಇದನ್ನೂ ಓದಿ: ಚಂದ್ರಯಾನ-2ರ ರೋವರ್ ಚಂದ್ರನ ಮೇಲಿದೆ: ಚೆನ್ನೈ ಮೂಲದ ಟೆಕ್ಕಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...