Homeಮುಖಪುಟಆದಿವಾಸಿಗಳ ಮೇಲಿನ 48 ಸಾವಿರ ಪ್ರಕರಣಗಳು ವಾಪಸ್: ಒಡಿಶಾ ಸಿಎಂ ಆದೇಶ

ಆದಿವಾಸಿಗಳ ಮೇಲಿನ 48 ಸಾವಿರ ಪ್ರಕರಣಗಳು ವಾಪಸ್: ಒಡಿಶಾ ಸಿಎಂ ಆದೇಶ

- Advertisement -
- Advertisement -

ಪರಿಶಿಷ್ಟ ಪಂಗಡ ಅಥವಾ ಬುಡಕಟ್ಟು ಸಮುದಾಯದ ಜನರ ಮೇಲಿನ 48,018 ಕ್ಷುಲ್ಲಕ ಪ್ರಕರಣಗಳನ್ನು ಹಿಂಪಡೆಯುವಂತೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬುಧವಾರ ಆದೇಶ ನೀಡಿದ್ದಾರೆ.

ಹೆಚ್ಚಿನ ಪ್ರಕರಣಗಳು ಗೃಹ, ಅಬಕಾರಿ, ಅರಣ್ಯ ಮತ್ತು ಪರಿಸರ ಇಲಾಖೆಗಳಿಗೆ ಸಂಬಂಧಿಸಿವೆ ಎಂದು ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ದಿ ಪ್ರಿಂಟ್ ವರದಿ ಮಾಡಿದೆ.

ವಿವರವಾದ ಪರಿಶೀಲನೆಯ ನಂತರ 48,018 ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.

ಒಟ್ಟು ಪ್ರಕರಣಗಳಲ್ಲಿ 36,581 ಅಬಕಾರಿ ಇಲಾಖೆ, 9,846 ಗೃಹ ಇಲಾಖೆ ಮತ್ತು 1,591 ಅರಣ್ಯ ಮತ್ತು ಪರಿಸರ ಇಲಾಖೆ ಅಡಿಯಲ್ಲಿ ಬರುತ್ತವೆ. ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದರಿಂದ ನ್ಯಾಯಾಲಯಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲಿನ ಒತ್ತಡವೂ ಕಡಿಮೆಯಾಗಲಿದೆ ಎಂದು ಸಿಎಂ ಕಚೇರಿ ಹೇಳಿದೆ.

ಲೋಕಸಭೆ ಮತ್ತು ಒಡಿಶಾ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯ ಸರ್ಕಾರದ ನಿರ್ಧಾರವು ರಾಜಕೀಯವಾಗಿ ಮಹತ್ವದ್ದಾಗಿದೆ ಎಂದು ಪರಿಗಣಿಸಲಾಗಿದೆ. ಬುಡಕಟ್ಟು ಜನಾಂಗದವರು ರಾಜ್ಯದ ಜನಸಂಖ್ಯೆಯ ಶೇಕಡಾ 23 ರಷ್ಟಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ 5 ದಿನಗಳ ಕಾಲ ವಿರಾಮ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...