Homeದಲಿತ್ ಫೈಲ್ಸ್ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

- Advertisement -
- Advertisement -

ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಜನರ ಗುಂಪೊಂದು ಇಬ್ಬರು ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ರೆಮುನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಲ್ಲೆಯ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಡಿಸೆಂಬರ್ 26, ಗುರುವಾರ ಬಾಲಸೋರ್ ಜಿಲ್ಲೆಯ ಖರಿಮುಖ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇಬ್ಬರು ಬುಡಕಟ್ಟು ಮಹಿಳೆಯರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಗ್ರಾಮಸ್ಥರನ್ನು ಮನವೊಲಿಸಲು ಖರಿಮುಖ ಗ್ರಾಮಕ್ಕೆ ತೆರಳಿದ್ದರು. ಈ ಸುದ್ದಿ ಗ್ರಾಮದಲ್ಲಿ ಹರಡಿ, ಹಿಂದುತ್ವ ಸಂಘಟನೆಯೊಂದರ ಸದಸ್ಯರು ಮತ್ತು ಸ್ಥಳೀಯರನ್ನು ಒಳಗೊಂಡ ಗುಂಪೊಂದು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದೆ ಎಂದು ವರದಿಗಳು ಹೇಳಿವೆ.

ಜನರ ಗುಂಪು ಮಹಿಳೆಯರ ಮುಖವನ್ನು ವಿರೂಪಗೊಳಿಸಿದೆ ಮತ್ತು ‘ಜೈ ಶ್ರೀ ರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದೆ. ಮಾಹಿತಿ ತಿಳಿದ ಸ್ಥಳೀಯ ನೀಲಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಬಳಿಕ, ಮಹಿಳೆಯರನ್ನು ರೆಮುನಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ವಿಚಾರಣೆ ವೇಳೆ, ಸ್ಥಳೀಯರನ್ನು ಮತಾಂತರಗೊಳಿಸಲು ಗ್ರಾಮಕ್ಕೆ ಹೋಗಿದ್ದಾಗಿ ಮಹಿಳೆಯರು ಒಪ್ಪಿಕೊಂಡಿದ್ದಾರೆ ಎಂದು ರೆಮುನಾ ಪೊಲೀಸ್ ಠಾಣೆ ಉಸ್ತುವಾರಿ ಸುಭಾಸ್ ಚಂದ್ರ ಮಲ್ಲಿಕ್ ಹೇಳಿದ್ದಾರೆ.

ಘಟನೆ ಸಂಬಂಧ ಹಲ್ಲೆಗೊಳಗಾದ ಮಹಿಳೆಯರು ಮತ್ತು ಗ್ರಾಮಸ್ಥರು ನೀಡಿದ ದೂರುಗಳನ್ನು ಆಧರಿಸಿ ಪೊಲೀಸರು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಮತಾಂತರಕ್ಕೆ ಯತ್ನಸಿದ ಆರೋಪದ ಮೇಲೆ ಒಡಿಶಾ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 1967 ರ ಸೆಕ್ಷನ್‌ 4 ಮತ್ತು ಬಿಎನ್‌ಎಸ್‌ ಸೆಕ್ಷನ್‌ಗಳಾದ 299,3(5) ಮತ್ತು 351 (2) ಅಡಿ ಮಹಿಳೆಯರ ವಿರುದ್ದ ಆರೋಪ ಹೊರಿಸಲಾಗಿದೆ. ಅದೇ ರೀತಿ ಹಲ್ಲೆ ಆರೋಪದ ಮೇಲೆ ಗ್ರಾಮದ 15 ಜನರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ಮತ್ತು ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ಮಹಿಳೆಯರಿಗೆ ಥಳಿಸಿದವರನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ದುಷ್ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೆಮುನಾ ಪೊಲೀಸ್ ಠಾಣೆ ಉಸ್ತುವಾರಿ ಸುಭಾಸ್ ಚಂದ್ರ ಮಲ್ಲಿಕ್ ಹೇಳಿದ್ದಾರೆ.

ಇದನ್ನೂ ಓದಿ : ಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...