Homeಚಳವಳಿಒಡಿಸ್ಸಾ; ಗಣಿಗಾರಿಕೆ ವಿರುದ್ಧ ಹೋರಾಡಿದ 16 ಆದಿವಾಸಿಗಳ ಬಂಧನ

ಒಡಿಸ್ಸಾ; ಗಣಿಗಾರಿಕೆ ವಿರುದ್ಧ ಹೋರಾಡಿದ 16 ಆದಿವಾಸಿಗಳ ಬಂಧನ

ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಕ್ಷನ್ 144 ಅನ್ನು ಜಾರಿಗೊಳಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

- Advertisement -
- Advertisement -

ಒಡಿಸ್ಸಾದ ಸುಂದರ್‌ಗರ್ ಜಿಲ್ಲೆಯಲ್ಲಿನ ಕುಲ್ಡ ಗಣಿಗಾರಿಕೆ ವಿಸ್ತರಣೆಯ ವಿರುದ್ಧ ಪ್ರತಿಭಟಿಸುತ್ತಿದ್ದ 16 ಆದಿವಾಸಿಗಳು ಮತ್ತು ಮುಖಂಡರನ್ನು ಫೆಬ್ರವರಿ 14 ರಂದು ಬಂಧಿಸಲಾಗಿದೆ ಎಂದು ನ್ಯೂಸ್‌ಕ್ಲಿಕ್ ವರದಿ ಮಾಡಿದೆ.

ರಾಜ್ಯದ ತಾಪ್ರಿಯ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಆದಿವಾಸಿ ಸಮುದಾಯಗಳು ವಾಸವಿದ್ದರೂ ಸಹ ಅಲ್ಲಿ ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಗೆ ಅವಕಾಶ ನೀಡುತ್ತಿದೆ. ಇದರಿಂದ ಸುತ್ತಲಿನ ಪ್ರದೇಶಗಳಲ್ಲಿ ತೀವ್ರ ವಾಯುಮಾಲಿನ್ಯ, ಅಂತರ್ಜಲ ನಾಶವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಪ್ರದೇಶವು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ (ಪಿವಿಟಿಜಿ) ನೆಲೆಯಾಗಿದೆ. ಅವರು ಜನವರಿ 19 ರಿಂದ ಗಣಿಗಳ ವಿಸ್ತರಣೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಆ ಜನರನ್ನೇ ಅಲ್ಲಿಂದ ತೆರವುಗೊಳಿಸುವ ಸುದ್ದಿ ಬಂದ ನಂತರ ಈ ಪ್ರದೇಶದ 18 ಹಳ್ಳಿಗಳಲ್ಲಿ ಪ್ರತಿಭಟನೆಗಳು ಜೋರಾಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಕ್ಷನ್ 144 ಅನ್ನು ಜಾರಿಗೊಳಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ನಮ್ಮೆಲ್ಲರನ್ನೂ ತಡೆಯುವ ಉದ್ದೇಶದಿಂದ 16 ಜನರನ್ನು ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಪೊಲೀಸ್ ಪಡೆಗಳು ಹಲ್ಲೆ ನಡೆಸಿವೆ. ಪ್ರತಿಭಟನೆ ನಿಲ್ಲಿಸದಿದ್ದರೆ ಅವರನ್ನು ಕೊಲ್ಲಲಾಗುತ್ತದೆ ಎಂದು ಬೆದರಿಸಲಾಗಿದೆ. ಅಲ್ಲದೆ ಕೊಲೆ ಯತ್ನ ಆರೋಪದ ಸೆಕ್ಷನ್ 307 ಅನ್ನು ಕಾರ್ಯಕರ್ತರ ಮೇಲೆ ದಾಖಲಿಸಲಾಗಿದೆ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದೇವೆ” ಎಂದು ಪ್ರತಿಭಟನಾನಿರತ ಕಾರ್ಯಕರ್ತರು ತಿಳಿಸಿದ್ದಾರೆ.

ಈ ಹಳ್ಳಿಗಳು ಖಾದಿಯಾ ಬುಡಕಟ್ಟು ಸಮುದಾಯ ಮತ್ತು ಇತರ ಬುಡಕಟ್ಟು ಜನಾಂಗಗಳಾದ ಓರಂ ಮತ್ತು ಗೋಂಡ್ ಸಮುದಾಯಗಳಿಗೆ ನೆಲೆಯಾಗಿದೆ. ಈ ಗಣಿಯಿಂದ ಛತ್ತಿಸ್‌ಗಡಕ್ಕೆ ಸಾಗಿಸುವ ಕಲ್ಲಿದ್ದಲು ಮತ್ತು ಅದರಿಂದ ಉತ್ಪತ್ತಿಯಾಗುವ ನೊಣ ಬೂದಿ ತಮ್ಮ ಕೃಷಿ ಭೂಮಿಗಳನ್ನು ಮತ್ತು ಅವುಗಳ ಜಲಮೂಲಗಳನ್ನು ಕಲುಷಿತಗೊಳಿಸಿದೆ. ಅವರ ಮನೆಗಳಲ್ಲಿ ಮತ್ತು ಅಂಗನವಾಡಿ ಕೇಂದ್ರಗಳಲ್ಲಿನ ಕುಡಿಯುವ ನೀರಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಆದಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಗಣಿ ಸಾಮರ್ಥ್ಯವು ಪ್ರಸ್ತುತ 14 ದಶಲಕ್ಷ ಟನ್‌ಗಳಷ್ಟು (ಎಂಟಿಪಿಎ) ಇದ್ದು, ಅದನ್ನು 19.60 ಎಂಟಿಪಿಎ ಸಾಮರ್ಥ್ಯಕ್ಕೆ ಹೆಚ್ಚಿಸಲು ಸಿದ್ದತೆ ನಡೆದಿದೆ ಎನ್ನಲಾಗಿದೆ. ಇದನ್ನು ವಿರೋಧಿಸಿ ತಿಂಗಳಿನಿಂದಲೂ ಆದಿವಾಸಿಗಳು ಹೋರಾಟ ನಡೆಸುತ್ತಿದ್ದಾರೆ. ಈ ಗಣಿಯನ್ನು 2007 ರಿಂದ ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ (ಎಂಸಿಎಲ್) ನಡೆಸುತ್ತಿದೆ. ಕಳೆದ ವರ್ಷ ಹಳ್ಳಿಗಳಲ್ಲಿನ ಜನರ ವಿರೋಧದ ನಡುವೆಯೂ ಮುಂದಿನ 30 ವರ್ಷಗಳವರೆಗೆ ಕಾರ್ಯನಿರ್ವಹಣೆಯ ವಿಸ್ತರಣೆಯನ್ನು ಪಡೆದುಕೊಂಡಿದೆ.


ಇದನ್ನೂ ಓದಿ; ಕೊಸೊವೊ ಚುನಾವಣೆ: ಎಡಪಕ್ಷ ವೆಟೆವೆಂಡೋಸ್ಜೆಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...