Homeಮುಖಪುಟನ. 14ರವರೆಗೆ ಮಾಜಿ ಸಚಿವ ಪಿ.ಚಿದಂಬರಂಗೆ ತಿಹಾರ್ ಜೈಲುವಾಸ: ದೆಹಲಿ ಹೈಕೋರ್ಟ್ ತೀರ್ಪು

ನ. 14ರವರೆಗೆ ಮಾಜಿ ಸಚಿವ ಪಿ.ಚಿದಂಬರಂಗೆ ತಿಹಾರ್ ಜೈಲುವಾಸ: ದೆಹಲಿ ಹೈಕೋರ್ಟ್ ತೀರ್ಪು

- Advertisement -
- Advertisement -

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಐಎನ್‌ಎಕ್ಸ್ ಮೀಡಿಯಾ ಹಗರಣದ ಕುಣಿಕೆ ಬಿಗಿಯಾಗುತ್ತಲೇ ಇದೆ. ಚಿದಂಬರಂ ಅವರನ್ನು ನವೆಂಬರ್ 14ರವರೆಗೆ ತಿಹಾರ್ ಜೈಲಿಗೆ ಕಳುಹಿಸುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ.

ಅಕ್ಟೋಬರ್ ಆರಂಭದಲ್ಲಿ ಪಿ.ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದಾಗ ಅವರನ್ನು ಜೈಲಿನಿಂದ ಸ್ಥಳಾಂತರಿಸಲಾಗಿತ್ತು. ತಿಹಾರ್ ಜೈಲಿನಲ್ಲಿ ಪ್ರತ್ಯೇಕ ಕೊಠಡಿ, ಶೌಚಾಲಯ, ಮನೆಯಲ್ಲಿ ತಯಾರಿಸಿದ ಆಹಾರ, ಔಷಧಿ ನೀಡಲಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಅಕ್ಟೋಬರ್ 30ರವರೆಗೂ ಕೋರ್ಟ್ ಪಿ.ಚಿದಂಬರಂ ಅವರನ್ನು ಇಡಿ ವಶಕ್ಕೆ ನೀಡುವಂತೆ ಹೇಳಿತ್ತು. ಇಂದು ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಇನ್ನೂ ಒಂದು ದಿನ ಕಸ್ಟಡಿಗೆ ನೀಡುವಂತೆ ಕೇಳಿದ್ರು. ಆದರೆ ಇದಕ್ಕೆ ಸಮ್ಮತಿ ಸೂಚಿಸದ ನ್ಯಾಯಾಧೀಶರು, ನ್ಯಾಯಾಂಗ ಬಂಧನಕ್ಕೊಳಪಡಿಸುವಂತೆ ತಿಳಿಸಿದರು.

ಇತ್ತ ಕಾಂಗ್ರೆಸ್ ನಾಯಕರು, ಪಿ.ಚಿದಂಬರಂ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು. ಅವರ ಆರೋಗ್ಯ ಸರಿಯಾಗಿಲ್ಲ. ಅನಾರೋಗ್ಯ ಹಿನ್ನೆಲೆ ಏಮ್ಸ್ ಗೆ ದಾಖಲಿಸುವ ಅಗತ್ಯವಿದೆ. ವೈದ್ಯರನ್ನು ಸಂಪರ್ಕಿಸಲು ಹೈಕೋರ್ಟ್ ಅನುಮತಿ ಕೋರಿದರು.

ಇನ್ನು ಐಎನ್ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಅಂಶಗಳನ್ನು ಪರಿಶೀಲಿಸುತ್ತಿದೆ. ಸಿಬಿಐ ಪ್ರಕರಣದಲ್ಲಿ ಈಗಾಗಲೇ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...