Homeಕರ್ನಾಟಕ'ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ'- ವ್ಯಕ್ತಿಯೋರ್ವರಿಗೆ ಮಹೇಶ್ ವಿಕ್ರಮ್ ಹೆಗಡೆ ಬೆದರಿಕೆ: FIR ದಾಖಲು

‘ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ’- ವ್ಯಕ್ತಿಯೋರ್ವರಿಗೆ ಮಹೇಶ್ ವಿಕ್ರಮ್ ಹೆಗಡೆ ಬೆದರಿಕೆ: FIR ದಾಖಲು

- Advertisement -
- Advertisement -

ಹಿಂದುತ್ವ ಮುಖಂಡ ಮಹೇಶ್ ವಿಕ್ರಮ್ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವರಿಗೆ ಬೆದರಿಕೆ ಹಾಕಿ ಮಾನಹಾನಿಕಾರ ಕಾಮೆಂಟ್ ಹಾಕಿದ್ದಾರೆ ಎಂದು ಅವರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ವಿಕ್ರಮ್ ಹೆಗಡೆ ಟಿವಿ ವಿಕ್ರಮ್ ಅಧಿಕೃತ ಪೇಜ್‌ನಲ್ಲಿ ದೂರುದಾರ ಸುರೇಶ್ ಬಾಬು ಮತ್ತು ಅವರ ಮಗಳ ಬಗ್ಗೆ ಮಾನಹಾನಿಯಾಗುವ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ದೂರದಾರ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ಸುರೇಶ್ ಬಾಬು ಅವರಿಗೆ ಕರೆ ಮಾಡಿರುವ ಮಹೇಶ್ ವಿಕ್ರಮ್ ಹೆಗಡೆ, ”ನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈನಲ್ಲೂ ಏನೂ ಮಾಡಲು ಆಗಿಲ್ಲ. ಇನ್ನು ನೀನು ಏನ್ ಕಿತ್ಕೊಳ್ತಿಯಾ? ಎಂದು ಬೆದರಿಕೆ ಹಾಕಿದ್ದಾನೆ” ಎಂದು ಹೇಳಲಾಗಿದೆ.

ಅಷ್ಟಲ್ಲದೇ, ”ಕೇಂದ್ರ ಸರ್ಕಾರ ನಮ್ಮ ಕೈಯಲ್ಲಿದೆ ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ” ಎಂಬ ರೀತಿ ದೂರುದಾರರಿಗೆ ಬೆದರಿಕೆಯೊಡ್ಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ದೂರುದಾರ ಸುರೇಶ ಬಾಬು ಎಂಬುವವರಿಂದ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪ್ರದೇಶ: ಕ್ಷೌರ ಮಾಡಲು ತಡವಾಗಿ ಬಂದ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿದ ಪೊಲೀಸ್‌ ಅಧಿಕಾರಿ

0
ಕ್ಷೌರಕ್ಕಾಗಿ ಮನೆಗೆ ಕ್ಷೌರಿಕ ತಡವಾಗಿ ಬಂದ ಎಂದು ಪೊಲೀಸ್‌ ಅಧಿಕಾರಿಯೋರ್ವ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿರುವ ಅಮಾನವೀಯ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಬುದೌನ್‌ನ ಪೊಲೀಸ್ ಠಾಣೆಯೊಂದರಲ್ಲಿ ನಡೆದಿದೆ. ಸರ್ಕಲ್ ಆಫೀಸರ್(ಸಿಒ) ಸುನೀಲ್ ಕುಮಾರ್...