Homeಕರ್ನಾಟಕಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

ಅಪ್ರೆಂಟಿಸ್‌ ತರಬೇತಿಯಲ್ಲಿ ಅಧಿಕಾರಿಗಳ ಯಡವಟ್ಟು: ದಲಿತ ವಿದ್ಯಾರ್ಥಿಗಳಿಗೆ ಬಾರದ ಒಂದು ತಿಂಗಳ ಪ್ರೋತ್ಸಾಹಧನ

- Advertisement -
- Advertisement -

ಪ್ರತಿವರ್ಷ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಜಿಲ್ಲಾ ಕಚೇರಿಗಳಲ್ಲಿ ಪತ್ರಿಕೋದ್ಯಮದ ಪದವಿ ಪಡೆದ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಗೌರವಧನ ನೀಡಿ ಅಪ್ರೆಂಟಿಸ್ ತರಬೇತಿಯನ್ನು ನೀಡಲಾಗುತ್ತದೆ. 2020-21ನೇ ಸಾಲಿನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ ತಿಂಗಳ ಪ್ರೋತ್ಸಾಹಧನವನ್ನು ನೀಡಲಾಗಿಲ್ಲ. ಅಧಿಕಾರಿಗಳ ಗೊಂದಲಕಾರಿ ಆದೇಶಗಳಿಂದಾಗಿ ಒಂದು ತಿಂಗಳು ಯಾವುದೇ ಪ್ರೋತ್ಸಾಹಧನ ಇಲ್ಲದೆ ಹೆಚ್ಚುವರಿ ಕೆಲಸವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ.

ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿದ್ದ ಎ.ಆರ್.ಪ್ರಕಾಶ್ ಅವರು ಆಯುಕ್ತರ ಪರವಾಗಿ ಅಕ್ಟೋಬರ್ 21, 2020ರಂದು ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ರಿಕೋದ್ಯಮ ಅಭ್ಯರ್ಥಿಗಳನ್ನು ನವೆಂಬರ್ ತಿಂಗಳಿನಿಂದಲೇ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಬಹುತೇಕ ಜಿಲ್ಲೆಗಳ ಪದಾಧಿಕಾರಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ ಹಾಗೂ ಡಿಸೆಂಬರ್‌‌ ತಿಂಗಳಿನಿಂದಲೇ ತರಬೇತಿಯನ್ನೂ ನೀಡಿರುತ್ತಾರೆ.

ಪ್ರತಿ ತಿಂಗಳು 15,000 ಮಾಸಿಕ ಪ್ರೋತ್ಸಾಹಧನವನ್ನು ಮಾಧ್ಯಮ ಅಕಾಡೆಮಿಯ ಅಭ್ಯರ್ಥಿಗಳ ಖಾತೆಗೆ ಇಲಾಖೆ ಜಮಾ ಮಾಡುತ್ತದೆ. ಆದರೆ ಡಿಸೆಂಬರ್ ತಿಂಗಳಿನ ಮಾಸಿಕ ಪ್ರೋತ್ಸಾಹಧನ ಬಂದಿರುವುದಿಲ್ಲ. ಈ ಕುರಿತು ಮಾಧ್ಯಮ ಅಕಾಡೆಮಿಯಲ್ಲಿ ವಿಚಾರಿಸಿದಾಗ ಬೇರೆ ಜ್ಞಾಪನ ಪತ್ರದ ಪ್ರತಿಯನ್ನು ತೋರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪದವಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ತರಬೇತಿ ನೀಡುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. 2020-21ನೇ ಸಾಲಿನಲ್ಲಿಯೂ ಹತ್ತು ತಿಂಗಳ ತರಬೇತಿ ನೀಡಲಾಗಿದೆ. ಪ್ರತಿ ತಿಂಗಳ ಪ್ರೋತ್ಸಾಹಧನವನ್ನು ತಡವಾಗಿಯಾದರೂ ಇಲಾಖೆ ಪಾವತಿಸುತ್ತಿರುವುದು ಸ್ವಾಗತಾರ್ಹ. ಆದರೆ ಡಿಸೆಂಬರ್‌‌ನಲ್ಲಿ ನೇಮಕ ಮಾಡಿಕೊಂಡು, ಹತ್ತು ತಿಂಗಳ ಬದಲು ಹನ್ನೊಂದು ತಿಂಗಳು ಕೆಲಸ ಮಾಡಿಸಿಕೊಳ್ಳಲಾಗಿದೆ. ಜನವರಿಯಿಂದ ಅಕ್ಟೋಬರ್‌ವರೆಗಿನ ಹಣ ಪಾವತಿಯಾದರೂ ಡಿಸೆಂಬರ್‌‌ನಲ್ಲೇ ತರಬೇತಿಗೆ ಸೇರಿದವರಿಗೆ ಒಂದು ತಿಂಗಳ ಹಣ ಬಾಕಿ ಉಳಿದಿದೆ.

ಇದನ್ನು ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

“ಜ್ಞಾಪನ ಪತ್ರವನ್ನು ಹೊರಡಿಸಿದ್ದ ಎ.ಆರ್.ಪ್ರಕಾಶ್ ಅವರು ನಿವೃತ್ತರಾಗಿದ್ದು, ಆ ಜಾಗಕ್ಕೆ ಡಿ.ಪಿ.ಮುರಳಿಧರ್ ನೇಮಕವಾದರು. ಅವರು ಪ್ರಕಾಶ್ ಅವರ ಜ್ಞಾಪಕ ಪತ್ರಕ್ಕೆ ಪ್ರತಿಯಾಗಿ ಡಿಸೆಂಬರ್ 21, 2020ರಂದು ಮತ್ತೊಂದು ಜ್ಞಾಪನಪತ್ರವನ್ನು ಹೊರಡಿಸಿದ್ದಾರೆ. ಜ್ಞಾಪನ ಪತ್ರದಲ್ಲಿ ಜನವರಿಯಿಂದ ಅಭ್ಯರ್ಥಿಗಳಿಗೆ ತರಬೇತಿ ನೀಡುವುದು ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಮೊದಲೇ ಕೆಲಸ ಮಾಡಿದ ನಮಗೆ ಒಂದು ತಿಂಗಳ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ ಅನಿಲ್‌ಕುಮಾ‌‌ರ್‌‌.

ಸರ್ಕಾರ ಮೊದಲು ಆದೇಶಿಸಿರುವ ಜ್ಞಾಪನಾ ಪತ್ರದ ಸಾಲುಗಳು.

“ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಅಡಿಯಲ್ಲಿ ರಾಜ್ಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ತಲಾ ಇಬ್ಬರು ಅಭ್ಯರ್ಥಿಗಳನ್ನು ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ, ಮಂಡ್ಯ, ಉಡುಪಿ, ಕಲಬುರಗಿ, ಬಳ್ಳಾರಿ, ಬೀದರ್‌‌, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ ಒಳಗೊಂಡಂತೆ  ಆಯ್ದ ಈ ಇಪ್ಪತ್ತು ಜಿಲ್ಲಾ ಕಚೇರಿಗಳಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತಲಾ ಒಬ್ಬರು ಅಭ್ಯರ್ಥಿಯನ್ನು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ಕಾರ್ಯ ನಿರ್ವಹಣೆ ಕುರಿತು ಹತ್ತು-ತಿಂಗಳ ಅವಧಿಯ ಅಪ್ರೆಂಟಿಶಿಪ್‌ ತರಬೇತಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ”

“ಈ ತರಬೇತಿಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಜ್ಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ 2020, ಜನವರಿ 1ರಿಂದ ಅಕ್ಟೋಬರ್‌‌ 31ರವರೆಗೆ ಏಕಕಾಲಕ್ಕೆ ಪ್ರಾರಂಭವಾಗಿ ಏಕಕಾಲಕ್ಕೆ ಮುಕ್ತಾಯವಾಗಬೇಕಿರುವ ಹಿನ್ನೆಲೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಕಚೇರಿಗೆ ಕೂಡಲೇ ಕಳುಹಿಸಿಕೊಡಲು ಸೂಚಿಸಿದೆ” ಎಂದು ಜ್ಞಾಪನಾಪತ್ರದಲ್ಲಿ ಸೂಚಿಸಲಾಗಿದೆ. (2021 ಜನವರಿ 1 ಎಂಬುದು, 2020 ಜನವರಿ 1 ಆಗಿರುವಂತಿದೆ).

ಡಿಸೆಂಬರ್ ತಿಂಗಳಿನಲ್ಲಿ ತರಬೇತಿ ಪಡೆದವರ ಪ್ರೋತ್ಸಾಹಧನದ ಕಥೆಯಾದರೂ ಏನು ಎಂದು ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್ ಅವರನ್ನು ವಿಚಾರಿಸಿದರೆ, ಅವರು ಈ ಕುರಿತು ಮಾತನಾಡುವುದಕ್ಕೆ ಹಿಂಜರಿದರು. “ಅದು ಕೇಂದ್ರ ಕಚೇರಿಯಿಂದ ಆಗಿರುವ ಆದೇಶ” ಎಂದು ತಿಳಿಸಿದರು.

“ಅನುದಾನದ ಕೊರತೆಯನ್ನು ಗಮನಿಸದೆ ಈ ಹಿಂದಿನ ಅಧಿಕಾರಿಗಳು ಜ್ಞಾಪನಾ ಪತ್ರ ನೀಡಿದ್ದರು. ಅದರಂತೆ ನೇಮಕಾತಿ ನಡೆದಿದೆ. ಆದರೆ ಅವರು ನಿವೃತ್ತರಾದರು. ಬಳಿಕ ಸಮಸ್ಯೆ ಎದುರಾದಾಗ ಹೊಸ ಅಧಿಕಾರಿಗಳು ಜನವರಿಯಿಂದ ಅಕ್ಟೋಬರ್‌ವರೆಗೆ ಆದೇಶ ಹೊರಡಿಸಿ ಹತ್ತು ತಿಂಗಳ ಪ್ರೋತ್ಸಾಹಧನ ಕೊಡಿಸಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ತರಬೇತಿ ಪಡೆದ ಕೆಲವು ವಿದ್ಯಾರ್ಥಿಗಳಿಗೆ ಬಹುಶಃ ಪ್ರೋತ್ಸಾಹಧನ ಬರುವುದು ಅನುಮಾನ” ಎಂದು ಬಲ್ಲಮೂಲಗಳು ಹೇಳುತ್ತವೆ.


ಇದನ್ನೂ ಓದಿರಿ: ದಿಂಡಗನೂರು: ದೇವಾಲಯ ಪ್ರವೇಶದ ಬಳಿಕ ದಲಿತರಿಗೆ ಅಘೋಷಿತ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...