Homeಕರ್ನಾಟಕಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಭಾನುವಾರ ಮಧ್ಯರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಶನಿವಾರವೇ ಖಾತೆ ಹಂಚಿಕೆ ಪಟ್ಟಿ ಸಿದ್ಧವಾಗಿತ್ತು. ರಾಜ್ಯಪಾಲರ ಅನುಮೋದನೆಗೆ ಕಳುಹಿಸಲು ತಯಾರಿಯೂ ನಡೆದಿತ್ತು ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಂಕಿತ ಹಾಕಿದ ತಕ್ಷಣವೇ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆಯನ್ನೂ ನೀಡಲಾಗಿದೆ.

ಬೆಂಗಳೂರು ನಗರ ಅಭಿವೃದ್ಧಿ ಅಥವಾ ಬೇರೆ ಯಾವುದಾದರೂ ಪ್ರಮುಖ ಖಾತೆ ನೀಡುವಂತೆ ರಾಮಲಿಂಗಾರೆಡ್ಡಿ ಅವರು ಬೇಡಿಕೆ ಇಟ್ಟಿದ್ದರು. ತಮಗಿಂತ ಕಿರಿಯರಿಗೆ ಪ್ರಮುಖ ಖಾತೆ ಹಂಚಿಕೆ ಮಾಡಿರುವುದರಿಂದ ಮುನಿಸಿಕೊಂಡಿದ್ದರು ಎಂದು ಹೇಳಲಾಗಿತ್ತು. ಭಾನುವಾರ ಮನೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಭಾನುವಾರ ತೆರಳಿ ಸಮಾಧಾನಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಹೊಸ ಸಚಿವರಿಗೆ ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್‌ಗೆ ದೊಡ್ಡತಲೆನೋವಾಗಿ ಪರಿಣಮಿಸಿತ್ತು. ಭಾನುವಾರ ಮಧ್ಯರಾತ್ರಿವರೆಗೂ ಕೈ ನಾಯಕರು ಖಾತೆ ಹಂಚಿಕೆ ಪಟ್ಟಿ ಅಂತಿಮಗೊಳಿಸುವಲ್ಲಿ ಹೈರಾಣಾದರು.

ಶನಿವಾರವೇ ಸಚಿವರಿಗೆ ಖಾತೆ ಹಂಚಿಕೆ ಮಾಡಲು ಪಟ್ಟಿಯನ್ನು ಅಂತಿಮಗೊಳಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಸಚಿವರು ಮಹತ್ವದ ಖಾತೆಗಳಿಗೆ ಪಟ್ಟುಹಿಡಿದಿದ್ದ ಕಾರಣದಿಂದ ಅದನ್ನು ತಡೆಹಿಡಿದಿದ್ದರು. ಹಂಚಿಕೆ ಮಾಡಲಾಗಿದ್ದ ಖಾತೆಗೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ ಕಾರಣ, ಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲು ಮುಖ್ಯಮಂತ್ರಿ ಮುಂದಾಗಿದ್ದರು.

ಇದನ್ನೂ ಓದಿ: 9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

ಶನಿವಾರ ರಾತ್ರಿ 10 ಗಂಟೆಗೆ ಖಾತೆ ಹಂಚಿಕೆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಆ ಪಟ್ಟಿಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ಬಂದಿತು ಹಾಗಾಗಿ ಪಟ್ಟಿ ಬಿಡುಗಡೆ ವಿಳಂಭವಾಯಿತು ಎಂದು ಮೂಲಗಳು ತಿಳಿಸಿವೆ.

ಡಿಸಿಎಂ ಆಕಾಂಕ್ಷಿಯಾಗಿದ್ದ ಡಾ. ಜಿ ಪರಮೇಶ್ವರ ಅವರಿಗೆ ಗೃಹ ಖಾತೆ ನೀಡಿದ್ದರು. ಡಿಸಿಎಂ ಸಿಗದಿದ್ದರೂ ಪ್ರಮುಖ ಖಾತೆಯಾದ ಕಂದಾಯ ಇಲಾಖೆ ಮೇಲೆ ಕಣ್ಣಿಟ್ಟಿದ್ದರು. ಹಾಗಾಗಿ ಸ್ವಲ್ಪ ಅಸಮಧಾನಗೊಂಡಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದೆ ಗೃಹ ಖಾತೆಯನ್ನೇ ನೀಡಲಾಗಿದೆ.

ಇನ್ನೂ ಕೆ.ಎಚ್‌.ಮುನಿಯಪ್ಪ ಅವರು ಸಮಾಜ ಕಲ್ಯಾಣ ಅಥವಾ ಕಂದಾಯ ಖಾತೆ ಮೇಲೆ ಒಲವು ಹೊಂದಿದ್ದರು. ಆದರೆ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಜೊತೆಗೆ ಗ್ರಾಹಕ ವ್ಯವಹಾರಗಳ ಖಾತೆಯನ್ನು ನೀಡಲಾಗಿದೆ.

ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ

  1. ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ
  2. ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
  3. ಡಾ. ಜಿ.ಪರಮೇಶ್ವರ್- ಗೃಹ
  4. ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
  5.  ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
  6. ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
  7. ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  8. ಕೆ.ಜೆ.ಜಾರ್ಜ್‌- ಇಂಧನ
  9. ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
  10. ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
  11. ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
    ಕೃಷ್ಣ ಬೈರೇಗೌಡ- ಕಂದಾಯ
  12. ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್
  13. ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
  14. ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
  15. ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
  16. ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
  17. ಚಲುವರಾಯಸ್ವಾಮಿ- ಕೃಷಿ
  18. ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  19. ರಹೀ ಖಾನ್: ಪೌರಾಡಳಿತ, ಹಜ್ ಖಾತೆ
  20. ಸಂತೋಷ ಲಾಡ್- ಕಾರ್ಮಿಕ
  21. ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
  22. ಆರ್.ಬಿ.ತಿಮ್ಮಾಪುರ- ಅಬಕಾರಿ
  23. ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
  24. ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
  25. ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  26. ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
  27. ಕೆ.ಎನ್.ರಾಜಣ್ಣ: ಸಹಕಾರ
  28. ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
  29. ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
  30. ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
  31. ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  32. ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
  33. ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...