Homeಕರ್ನಾಟಕನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆ, ಸಂವಿಧಾನಕ್ಕೆ ಬದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಮುಖ್ಯಮಂತ್ರಿ ಈ ರೀತಿ ಹೇಳಿದರು.

ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದು ಎಂದರು.

ಸರ್ಕಾರ ಬಂದು 8 ತಿಂಗಳಾಗಿದೆ. ಡಿಸಿ, ಸಿಇಒ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ.‌ ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು ಎಂದು ಸಿಎಂ ಸೂಚಿಸಿದರು.

ಕೆಲವೆಡೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೆಲವೇ ಕೆಲವು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಏಕೆ ಆಗಿಲ್ಲ? ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಕೆಲವರಿಗೆ ಮಾತ್ರ ಗ್ಯಾರಂಟಿಗಳ ಅನುಕೂಲ ತಲುಪಿಲ್ಲ. ಆ ಕೆಲವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆ ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿ ತಿರಸ್ಕರಿಸಿ ಎನ್ನುವ ಸೂಚನೆ ನೀಡಿದರು.

ತೆರಿಗೆ ಇಲಾಖೆ, ತಹಶೀಲ್ದಾರ್, ಎಸಿ ಹಾಗೂ ಡಿಸಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ಕಡಿಮೆ ಆಗಿದೆಯಾ? ತಹಶೀಲ್ದಾರ್, ಎಸಿ, ಡಿಸಿ ಕಚೇರಿಗಳಲ್ಲಿ ಜನರ ಸಮಸ್ಯೆಗೆ ಪರಿಹಾರ ಸಿಗ್ತಾ ಇದೆಯಾ? ಜನರ ಅರ್ಜಿಗಳು ಎಷ್ಟು ದಿನಗಳಿಂದ ಬಾಕಿ ಇವೆ ಪರಿಶೀಲನೆ ನಡೆಸಿದ್ದೀರಾ? ಎಷ್ಟು ಬಾಕಿ ಅರ್ಜಿ ನಿಮ್ಮಿಂದ ಬಗೆಹರಿದಿದೆ? ಎಷ್ಟು ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ? ಎಂದು ಸಿಎಂ ಪ್ರಶ್ನಿಸಿದರು.

ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ ಎನ್ನುವ ಸೂಚನೆ ನೀಡಿದರು.

ಎಷ್ಟು ಕಚೇರಿ, ಹಾಸ್ಟೆಲ್‌, ಠಾಣೆ ಮತ್ತು ಶಾಲೆಗಳಿಗೆ, ಭೇಟಿ ನೀಡಿದ್ದೀರಿ ಎನ್ನು ವಿವರಗಳನ್ನು ಪಡೆದುಕೊಂಡರು. ಕೋಲಾರದ ಹಾಸ್ಟೆಲ್‌ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯ್ತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರು ಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ ಎಂದರು.

ನೀವು ಉಸ್ತುವಾರಿ ವಹಿಸಿರುವ ಜಿಲ್ಲೆಯಲ್ಲಿನ‌ ಅಧಿಕಾರಿಗಳು- ಫಲಾನುಭವಿಗಳ ಜೊತೆ ಸಂಪರ್ಕ, ಸಂಬಂಧ ಇನ್ನಷ್ಟು ಹೆಚ್ಚು ಹೆಚ್ಚು ಏರ್ಪಡಬೇಕು. ಜನರು ಹೆಚ್ಚು ಹೋಗೋದು ಕೃಷಿ, ಕಂದಾಯ ಇಲಾಖೆ ಕಚೇರಿಗಳು ಮತ್ತು ಪೊಲೀಸ್ ಠಾಣೆಗಳಿಗೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ? ನಿಮ್ಮಿಂದ ಜಿಲ್ಲಾಡಳಿತಕ್ಕೆ ಏನು ಸಲಹೆ ಸಿಕ್ಕಿದೆ? ನಿಮ್ಮ ಅನುಭವದ ಅನುಕೂಲ ಜಿಲ್ಲೆಗಳಿಗೆ ಎಷ್ಟಾಗಿದೆ ಎಂದು ಪ್ರಶ್ನಿಸಿದರು.

ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಬದ್ದತೆ ಇರಬೇಕು. ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ, ಅವಕಾಶವೂ ಇಲ್ಲ. ನಿಮ್ಮ ಮಟ್ಟದಲ್ಲಿ ಸಮಸ್ಯೆ ಬಗೆಹರಿಯದೆ ಹೋದರೆ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು. ಕರ್ತವ್ಯಲೋಪ, ನಿರ್ಲಕ್ಷ್ಯಕ್ಕೆ ಜಿಲ್ಲಾ ಮಟ್ಟದಲ್ಲಿ ನೀವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದೇ ಹೋದರೆ, ಜಿಲ್ಲಾ ಮಟ್ಟದಲ್ಲಿ ಹೇಗೆ ಶಿಸ್ತು ತರುತ್ತೀರಿ ಎಂದು ಸಿಎಂ ಕೇಳಿದರು.

ಇದನ್ನೂ ಓದಿ: ಮೊದಲ ವರದಿ ಸಲ್ಲಿಸಿದ ಎಸ್‌ಇಪಿ ಆಯೋಗ: ಮೂರು ವರ್ಷಗಳ ಪದವಿಗೆ ಒಲವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...