Homeಮುಖಪುಟಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

ಪೌರತ್ವ ದಾಖಲೆ ಒದಗಿಸಿದರೂ ಬಂಗಾಳದ ವ್ಯಕ್ತಿಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಅಧಿಕಾರಿಗಳು: ವರದಿ

- Advertisement -
- Advertisement -

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗಿದ್ದ ಪಶ್ಚಿಮ ಬಂಗಾಳದ 36 ವರ್ಷದ ವ್ಯಕ್ತಿಯನ್ನು ಅಕ್ರಮ ಬಾಂಗ್ಲಾದೇಶ ವಲಸಿಗ ಎಂದು ಶಂಕಿಸಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರನ್ನು ಶನಿವಾರ ಬೆಳಗಿನ ಜಾವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು indianexpress.com ವರದಿ ಮಾಡಿದೆ.

ಗಡಿಯಾಚೆಗೆ ತಳ್ಳಿದ ವ್ಯಕ್ತಿಯನ್ನು ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಪೊಲೀಸರು, ರಾಜ್ಯ ವಲಸೆ ಕಲ್ಯಾಣ ಮಂಡಳಿಯ ಮೆಹಬೂಬ್ ಶೇಖ್ ಅವರ ಅವರ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಸಹ, ಮಹಾರಾಷ್ಟ್ರ ಪೊಲೀಸರು ಮತ್ತು ಬಿಎಸ್‌ಎಫ್ ಗಡಿಯಾಚೆಗೆ ತಳ್ಳಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದ್ದಾಗಿ ವರದಿ ತಿಳಿಸಿದೆ.

“ಶೇಖ್ ಅವರ ಕುಟುಂಬ ನಮ್ಮನ್ನು ಸಂಪರ್ಕಿಸಿದ ನಂತರ, ನಾವು ಮಹಾರಾಷ್ಟ್ರ ಪೊಲೀಸರನ್ನು ಸಂಪರ್ಕಿಸಿದ್ದೇವೆ. ಎಲ್ಲಾ (ಅಗತ್ಯ) ದಾಖಲೆಗಳನ್ನು ಅವರಿಗೆ ಕಳುಹಿಸಲಾಗಿದೆ. ಅವರು ಕನಿಷ್ಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತಿಳಿಸುವ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ. ಶೇಖ್ ಅವರನ್ನು ಬಿಎಸ್‌ಎಫ್ ಬಾಂಗ್ಲಾದೇಶಕ್ಕೆ ತಳ್ಳಿದೆ” ಎಂದು ಪಶ್ಚಿಮ ಬಂಗಾಳ ವಲಸೆ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮಿರುಲ್ ಇಸ್ಲಾಂ ಹೇಳಿದ್ದಾಗಿ indianexpress.com ವರದಿ ವಿವರಿಸಿದೆ.

ಶೇಖ್ ಅವರ ಕುಟುಂಬವು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾಗಬಂಗೋಲಾದ ಮಹಿಸಸ್ಥಲಿ ಗ್ರಾಮ ಪಂಚಾಯತ್ ಪ್ರದೇಶದ ಹೊಸೈನ್‌ನಗರ ಗ್ರಾಮದ ನಿವಾಸಿಗಳು. 36 ವರ್ಷದ ಶೇಖ್ ಮಹಾರಾಷ್ಟ್ರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದರು.

“ಕಳೆದ ಎರಡು ವರ್ಷಗಳಿಂದ ಶೇಖ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂಬೈ ಬಳಿಯ ಥಾಣೆಯ ಮೀರಾ ರಸ್ತೆ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಐದು ದಿನಗಳ ಹಿಂದೆ (ಬುಧವಾರ, ಜೂನ್ 11) ಅವರು ಚಹಾ ಸೇವಿಸುತ್ತಿದ್ದಾಗ ಪೊಲೀಸರು ಅವರನ್ನು ಬಾಂಗ್ಲಾದೇಶದವರೆಂದು ಶಂಕಿಸಿ ಕನಕಿಯಾ ಪೊಲೀಸ್ ಠಾಣೆಗೆ ಕರೆದೊಯ್ದರು,” ಎಂದು ಶೇಖ್ ಅವರ ಕಿರಿಯ ಸಹೋದರ ಮುಜಿಬುರ್ ಮುರ್ಷಿದಾಬಾದ್‌ನಿಂದ ದೂರವಾಣಿ ಹೇಳಿರುವುದಾಗಿ indianexpress.com ತಿಳಿಸಿದೆ.

“ಅವರು (ಶೇಖ್) ಕನಕಿಯಾ ಪೊಲೀಸ್ ಠಾಣೆಯಿಂದ ನಮಗೆ ಕರೆ ಮಾಡಿದರು. ನಾವು ತಕ್ಷಣ ಸ್ಥಳೀಯ ಪೊಲೀಸರು, ಆಡಳಿತಕ್ಕೆ, ನಮ್ಮ ಪಂಚಾಯತ್ ಮುಖ್ಯಸ್ಥ ಮತ್ತು ವಲಸೆ ಕಲ್ಯಾಣ ಮಂಡಳಿಗೆ ಮಾಹಿತಿ ನೀಡಿದ್ದೆವು. ಅವರು ಮಹಾರಾಷ್ಟ್ರ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದರು. ಶುಕ್ರವಾರದ ವೇಳೆಗೆ, ನಾವು ಮೆಹಬೂಬ್ ಶೇಖ್ ಅವರ ವೋಟರ್ ಐಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪಂಚಾಯತ್ ಪ್ರಮಾಣೀಕರಿಸಿದ ನಮ್ಮ ಕುಟುಂಬ ವೃಕ್ಷ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮಹಾರಾಷ್ಟ್ರ ಪೊಲೀಸರಿಗೆ ಕಳುಹಿಸಿದ್ದೇವೆ” ಎಂದು ಮುಜಿಬುರ್ ಹೇಳಿದ್ದಾರೆ.

ಮೆಹಬೂಬ್ ಶೇಖ್ ಅವರನ್ನು  ಬಿಎಸ್‌ಎಫ್ ಶಿಬಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದ ನಂತರ ನಾವು ಸಿಲಿಗುರಿಗೆ ಧಾವಿಸಿದೆವು ಎಂದು ಮಹಿಸಸ್ಥಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಮೆಹಬೂಬ್ ಅವರನ್ನು ಸಿಲಿಗುರಿಯ ಬಿಎಸ್ಎಫ್ ಶಿಬಿರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದ ನಂತರ ನಾವು  ಶೇಖ್ ಅವರ ಸಹೋದರ ಮುಜಿಬುರ್ ಜೊತೆ ಸಿಲಿಗುರಿಗೆ ಧಾವಿಸಿದೆವು. ಆದರೆ ನಮಗೆ ಅಲ್ಲಿ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಅವರು ನಮ್ಮ ಮಾತನ್ನು ಕೇಳಲಿಲ್ಲ” ಎಂದು ಶಬ್ಬೀರ್ ಅಹ್ಮದ್ ಹೇಳಿದ್ದಾರೆ.

ಕುಟುಂಬದ ಪ್ರಕಾರ, ಮೆಹಬೂಬ್ ಶೇಖ್ ಶನಿವಾರ (ಜೂನ್ 14) ಅವರಿಗೆ ಕರೆ ಮಾಡಿ, ಬೆಳಗಿನ ಜಾವ 3.30ಕ್ಕೆ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ತಿಳಿಸಿದ್ದಾರೆ.

“ಶನಿವಾರ ಬೆಳಗಿನ ಜಾವ 3.30ರ ಸುಮಾರಿಗೆ ಬಿಎಸ್‌ಎಫ್ ತನ್ನನ್ನು ಬಾಂಗ್ಲಾದೇಶಕ್ಕೆ ತಳ್ಳಿದೆ ಎಂದು ಶೇಖ್ ಹೇಳಿದ್ದಾನೆ. ಅವನು ಹಳ್ಳಿಯೊಂದರಲ್ಲಿ ಆಶ್ರಯ ಪಡೆದಿದ್ದಾನೆ, ಅಳುತ್ತಿದ್ದನು. ಅವನಿಗೆ ಹೆಂಡತಿ ಮತ್ತು ಮೂವರು ಮಕ್ಕಳಿದ್ದಾರೆ. ನಮಗೆ ಅವನು ಮರಳಿ ಬೇಕು. ಅವನು ಬಾಂಗ್ಲಾದೇಶದಲ್ಲಿ ಎಷ್ಟು ದಿನ ಬದುಕಬಲ್ಲನೆಂದು ನಮಗೆ ತಿಳಿದಿಲ್ಲ” ಎಂದು ಸಹೋದರ ಮುಜಿಬುರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಮಹಾರಾಷ್ಟ್ರ ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮೆಹಬೂಬ್ ತಮ್ಮ ರಾಷ್ಟ್ರೀಯತೆಯನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೌರತ್ವವನ್ನು ಸಾಬೀತುಪಡಿಸಲು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

“ನಮ್ಮ ತಪ್ಪಿಲ್ಲ… ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ನೀಡಿದ ಆದೇಶದ ಮೇರೆಗೆ, ಜೂನ್ 11 ರಂದು ಮೆಹಬೂಬ್ ಶೇಖ್ ಸೇರಿದಂತೆ ಅನೇಕ ಶಂಕಿತರನ್ನು ನಾವು ಬಂಧಿಸಿದ್ದೇವೆ. ಅವರ ರಾಷ್ಟ್ರೀಯತೆಯನ್ನು ಸಾಬೀತುಪಡಿಸುವ ದಾಖಲೆಗಳನ್ನು ನಾವು ಅವರಿಂದ ಕೋರಿದ್ದೇವೆ. ಸಾಮಾನ್ಯವಾಗಿ, ನಾವು ಆಧಾರ್ ಮತ್ತು ಪ್ಯಾನ್ ಕಾರ್ಡ್‌ಗಳನ್ನು ಈ ಉದ್ದೇಶಕ್ಕಾಗಿ ಪರಿಗಣಿಸುವುದಿಲ್ಲ, ಏಕೆಂದರೆ ಅವುಗಳನ್ನು ವಂಚನೆಯಿಂದ ಪಡೆಯಬಹುದು. ಆದ್ದರಿಂದ, ನಾವು ಅವರ ಜನನ ಪ್ರಮಾಣಪತ್ರ ಅಥವಾ ಯಾವುದೇ ಬಲವಾದ ಪುರಾವೆಗಳನ್ನು ತೋರಿಸಲು ಕೇಳಿದ್ದೇವೆ. ಆದರೆ ಅವರು ಅದನ್ನು ತೋರಿಸಲು ವಿಫಲರಾದರು ಮತ್ತು ಅವರು ಭಾರತೀಯರು ಎಂಬ ಅವರ ಹೇಳಿಕೆಯನ್ನು ಬೆಂಬಲಿಸಲು ಬೇರೆ ಯಾವುದೇ ದಾಖಲೆ ಅಥವಾ ಅವರ ಕುಟುಂಬದ ದಾಖಲೆಗಳನ್ನು ಸಹ ಒದಗಿಸಲಿಲ್ಲ, ”ಎಂದು ಥಾಣೆಯ ಮೀರಾ ರಸ್ತೆ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಮೇಘನಾ ಬುರಾಡೆ ಹೇಳಿದ್ದಾರೆ ಎಂದು indianexpress.com ವರದಿ ತಿಳಿಸಿದೆ.

ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್‌’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...