Homeಮುಖಪುಟಆಫ್‌ಲೈನ್ ಬೋರ್ಡ್ ಪರೀಕ್ಷೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ 15 ರಾಜ್ಯಗಳ ವಿದ್ಯಾರ್ಥಿಗಳು

ಆಫ್‌ಲೈನ್ ಬೋರ್ಡ್ ಪರೀಕ್ಷೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ 15 ರಾಜ್ಯಗಳ ವಿದ್ಯಾರ್ಥಿಗಳು

- Advertisement -
- Advertisement -

ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಗಳು ಮತ್ತು ವಿವಿಧ ರಾಜ್ಯ ಮಂಡಳಿಗಳು ಬದಲಿಗೆ ಪರ್ಯಾಯ ಮೌಲ್ಯಮಾಪನ ವಿಧಾನ ಜಾರಿಗೆ ತರುವಂತೆ ಕೋರಿ, ದೇಶದ ಹದಿನೈದಕ್ಕೂ ಅಧಿಕ ರಾಜ್ಯಗಳ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಬಾರ್‌ ಅಂಡ್ ಬೆಂಚ್ ವರದಿ ಮಾಡಿದೆ.

ವಿದ್ಯಾರ್ಥಿಗಳು ಅನೇಕ ಸವಾಲುಗಳನ್ನು ಎದುರಿಸುತ್ತಿರುವುದರಿಂದ ನಿಗದಿತ ಸಮಯದೊಳಗೆ ಫಲಿತಾಂಶ ಘೋಷಿಸಲು ಮತ್ತು ಸಾಮಾನ್ಯ ಪರೀಕ್ಷೆಯ ಆಯ್ಕೆ ಒದಗಿಸಲು ನಿರ್ದೇಶಿಸಬೇಕೆಂದು ಮಕ್ಕಳ ಹಕ್ಕುಗಳ ಹೋರಾಟಗಾತಿಘ ಅನುಭಾ ಶ್ರೀವಾಸ್ತವ ಸಹಾಯ್ ಮತ್ತು ಒಡಿಶಾ ವಿದ್ಯಾರ್ಥಿ ಒಕ್ಕೂಟ ಅರ್ಜಿಯಲ್ಲಿ ತಿಳಿಸಿದೆ.

ಸಿಬಿಎಸ್‌ಇಗೆ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರದಲ್ಲಿ ನಡೆಯಲಿದ್ದು ಐಸಿಎಸ್ಇ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಒಎಸ್) ಇನ್ನೂ ಯಾವುದೇ ಅಧಿಸೂಚನೆ ನೀಡಿಲ್ಲ. ರಾಜ್ಯ ಮಂಡಳಿಗಳಿಗೆ ಸಂಬಂಧಿಸಿದಂತೆ ಕೆಲವರು ವೇಳಾಪಟ್ಟಿ ಪ್ರಕಟಿಸಿದರೆ ಇನ್ನೂ ಕೆಲವರು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

• ರಾಜ್ಯ ಸರ್ಕಾರ ಮತ್ತು ಇತರ ಮಂಡಳಿಗಳ ಈ ರೀತಿಯ ನಡವಳಿಕೆಯಿಂದ ವಿದ್ಯಾರ್ಥಿಗಳು ಅತೃಪ್ತರಾಗಿದ್ದು ಅವರ ಭವಿಷ್ಯ ಮತ್ತು ವೃತ್ತಿಜೀವನದ ಬಗ್ಗೆ ಒತ್ತಡದಿಂದ ಚಿಂತಿತರಾಗಿದ್ದಾರೆ.

• ಕೋವಿಡ್ ಪರಿಸ್ಥಿತಿ ಮತ್ತು ಶಾಲಾ ಶಿಕ್ಷಣದಲ್ಲಿನ ಅಡಚಣೆಗಳಿಂದ ವಿದ್ಯಾರ್ಥಿಗಳು ತೊಂದರೆ ಎದುರಿಸುತ್ತಿದ್ದಾರೆ.

• ಕೋವಿಡ್ ಮೂರನೇ ಅಲೆ ಉಲ್ಬಣಗೊಂಡಿರುವಾಗಲೇ ಪರೀಕ್ಷೆ ನಡೆಸುವುದರಿಂದ ಯುವ ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಮಾತ್ರವಲ್ಲ ಅವರ ಬದುಕುವ ಹಕ್ಕನ್ನು ಉಲ್ಲಂಘಿಸುತ್ತದೆ.

• ಶಿಕ್ಷಣ ಮುಖ್ಯವಾಗಿದ್ದರೂ ಭೌತಿಕವಾಗಿ ಪರೀಕ್ಷೆ ಎದುರಿಸಬೇಕಿರುವ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮತ್ತು ಪೋಷಕರ ಜೀವ ಮತ್ತು ಮಾನಸಿಕ ಆರೋಗ್ಯಕ್ಕಿಂತ ಇದು ಮುಖ್ಯವಲ್ಲ, ಎಂದು ಹೇಳಿದ್ದಾರೆ.

• ಭೌತಿಕವಾಗಿ ಪರೀಕ್ಷೆ ನಡೆಸದಂತೆ ನಿರ್ದೇಶನ ನೀಡಬೇಕು.

• ವಿವಿಧ ವಿಶ್ವವಿದ್ಯಾಲಯಗಳಿಗೆ ಪ್ರವೇಶಾತಿ ದಿನಾಂಕ ಘೋಷಿಸಲು ಮತ್ತು ವೃತ್ತಿ ಪರವಲ್ಲದ ಕೋರ್ಸ್‌ಗಳಲ್ಲಿ ಹೆಚ್ಚಿನ ಅಧ್ಯಯನ ಬಯಸುವ 12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷಾ ಮೌಲ್ಯಮಾಪನಕ್ಕೆ ಸೂತ್ರವೊಂದನ್ನು ರೂಪಿಸುವ ಸಲುವಾಗಿ ಸಮಿತಿ ರಚನೆಗೆ ಯುಜಿಸಿಗೆ ಸೂಚನೆ ನೀಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.


ಇದನ್ನೂ ಓದಿ: ಹಿಜಾಬ್ – ಕೇಸರಿ ಶಾಲು ವಿವಾದ: ಉಡುಪಿಯ ಪ್ರೌಢಶಾಲಾ ವ್ಯಾಪ್ತಿಯಲ್ಲಿ ಫೆ.14 ರಂದು ನಿಷೇಧಾಜ್ಞೆ ಜಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...