Homeಕರ್ನಾಟಕಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

ಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

- Advertisement -
- Advertisement -

ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್‌ ಹಂಚಿರುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಕ್ಕಲಿಗರಿಗೆ ಶೇ.4 ರಿಂದ ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿರುವ ಸಂಬಂಧ ಪ್ರತಿಕ್ರಿಯಿಸಿರುವ ಅವರು, “ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ” ಎಂದಿರುವ ಅವರು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

“ಒಕ್ಕಲಿಗರು ರಾಜ್ಯದ ಜನಸಂಖ್ಯೆಯಲ್ಲಿ ಶೇ.16 ಇದ್ದಾರೆ. ಶೇ.4 ರಿಂದ ಶೇ.16ಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಎಂದು ನಾವು ಕೇಳಿದೆವು. ಆದರೆ ಯಾರದ್ದೋ ಶೇ.2 ಕಿತ್ತು ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿದ್ದಾರೆ. ಒಕ್ಕಲಿಗರು ಬೇರೆಯವರ ಅನ್ನವನ್ನು ಕಸಿದು ತಿನ್ನಬೇಕು ಎನ್ನುವವರಲ್ಲ. ನಾಡಿನ ಒಕ್ಕಲಿಗ ಮಕ್ಕಳು ತಾವು ದುಡಿದಿದ್ದನ್ನ ಹಂಚಿ, ಉಳಿದ್ರೆ ತಾವು ತಿನ್ನಬೇಕು ಎಂಬ ಧ್ಯೇಯ ಇಟ್ಟುಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ರಾಜ್ಯದಲ್ಲಿ ಶೇ.16 ಒಕ್ಕಲಿಗರಿದ್ದು 4 ಮೀಸಲಾತಿ ಕೊಟ್ಟಿದ್ದೀರಿ. ಅದರಲ್ಲಿ ಹತ್ತಾರು ಸಮುದಾಯ ಸೇರಿಸಿದ್ದು, ಒಕ್ಕಲಿಗರಿಗೆ ಶೇ.1.5 ನಿಂದ ಶೇ.2 ಮೀಸಲಾತಿ ಮಾತ್ರ ಸಿಗುತ್ತದೆ. ಇದರಿಂದ ಎಲ್ಲ ಅವಕಾಶಗಳಿಂದ ಒಕ್ಕಲಿಗ ಮಕ್ಕಳು ವಂಚಿತರಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಪಕ್ಷಗಳ ಪ್ರಣಾಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, “ಹಲವು ರಾಜ್ಯಗಳ ಸರ್ಕಾರಗಳನ್ನ ನೋಡುತ್ತಿದ್ದೇವೆ. ಕೀಳು ಮಟ್ಟದ ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸುತ್ತಿದ್ದಾರೆ. ಅಗತ್ಯಕ್ಕೂ ಮೀರಿ ಜನರ ಮೇಲೆ ಸಾಲದ ಹೊರೆ ಹೊರಿಸುತ್ತಾರೆ. ಅಂತಹದ್ದೇ ರಾಜ್ಯ ನಮ್ಮದು ಆಗಬಾರದು” ಎಂದು ಆಶಿಸಿದ್ದಾರೆ.

“ಅಭಿವೃದ್ದಿ ಇಲ್ಲ, ಆದರೆ ಎಲ್ಲ ಸೌಲಭ್ಯಗಳನ್ನ ಜನರ ಮನೆ ಬಾಗಿಲಿಗೆ ಕೊಡುತ್ತೀರಿ. ರಸ್ತೆ ಸರಿಯಿಲ್ಲ, ನೀರಾವರಿ ವ್ಯವಸ್ಥೆ ಇಲ್ಲ. ಮೂಲಭೂತ ಸೌಕರ್ಯಗಳಿಲ್ಲ. ಕೊನೆಗೆ ಅದೇ ಜನರು ನಿಮ್ಮ ಮೇಲೆ ತಿರುಗಿ ಬೀಳುತ್ತಾರೆ. ಆದ್ದರಿಂದ ದುಡಿಯ ವರ್ಗವನ್ನ ಸರ್ಕಾರಗಳು ಸೃಷ್ಟಿ ಮಾಡಬೇಕು. ನಮ್ಮ ಜನರನ್ನು ಸ್ವಶಕ್ತರಾಗಿ, ಆರ್ಥಿಕ ಸಬಲರನ್ನಾಗಿ ಮಾಡಬೇಕು. ಆ ತರಹದ ಯೋಜನೆಗಳನ್ನ ಈ ವ್ಯವಸ್ಥೆಯಲ್ಲಿ ತರಬೇಕು” ಎಂದು ಹೇಳಿದ್ದಾರೆ.

ಮೀಸಲಾತಿಯನ್ನು ಕಿತ್ತು ಹಾಕಿರುವುದನ್ನು ಪ್ರಶ್ನಿಸಿ ಮುಸ್ಲಿಂ ಜನಾಂಗ ಜಾಗೃತ ವೇದಿಕೆಯು ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್ ಅವರು ಇದಕ್ಕೆ ಕೈಜೋಡಿಸಿದ್ದಾರೆ.

ಬಿಜೆಪಿ ಸರ್ಕಾರವು 3 (ಎ) ಮತ್ತು 3 (ಬಿ) ಒಬಿಸಿ ಉಪವರ್ಗಗಳನ್ನು 2 (ಸಿ) ಮತ್ತು 2 (ಡಿ) ನೊಂದಿಗೆ ಬದಲಾಯಿಸಿದೆ. ಕೊಡವರು ಮತ್ತು ಬಣಜಿಗರೊಂದಿಗೆ 3 (ಎ) ನಲ್ಲಿ ಒಕ್ಕಲಿಗರು ಇದ್ದರು. ಇತರ ಸಮುದಾಯಗಳೊಂದಿಗೆ ಹಲವಾರು ಲಿಂಗಾಯತ ಉಪಜಾತಿಗಳು 3(ಬಿ)ಯಲ್ಲಿ ಇದ್ದವು.

ಇದನ್ನೂ ಓದಿರಿ: ಗೋಡ್ಸೆ ಆರಾಧನೆ, ಹಿಂದೂ ರಾಷ್ಟ್ರಕ್ಕೆ ಕರೆ; ವಿವಾದಿತ ಶಾಸಕ ರಾಜಾಸಿಂಗ್ ವಿರುದ್ಧ ಸರಣಿ ಪ್ರಕರಣ ದಾಖಲು

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಎಸ್.ದ್ವಾರಕಾನಾಥ್, “ಮುಸ್ಲಿಮರನ್ನು ಇಡಬ್ಲ್ಯೂಎಸ್‌ಗೆ ಸೇರಿಸಲು ಸಾಧ್ಯವಿಲ್ಲ. ಸಾಮಾಜಿಕವಾಗಿ ಬಲಿಷ್ಠವಾಗಿರುವ ಆದರೆ ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮಾತ್ರ ಇಡಬ್ಲ್ಯುಎಸ್‌. ಮುಸ್ಲಿಮರು ಆರ್ಥಿಕವಾಗಿ ದುರ್ಬಲರು ಎಂದು ಇದುವರೆಗೆ ಯಾವುದೇ ಆಯೋಗ ಹೇಳಿಲ್ಲ. ಆದರೆ ಅನೇಕ ಅಧ್ಯಯನಗಳು ಮುಸ್ಲಿಮರು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ತೀರ್ಮಾನಿಸಿವೆ” ಎಂದಿದ್ದಾರೆ.

“ಒಬಿಸಿ ಪಟ್ಟಿಗೆ ಬದಲಾವಣೆಗಳನ್ನು ಮಾಡಲು ಈ ಅಧ್ಯಯನಗಳು ನಡೆದಿರಬೇಕು. ಮೇಲಾಗಿ, 3(ಎ), 3(ಬಿ) ವರ್ಗಗಳನ್ನು 2(ಸಿ) ಮತ್ತು 2(ಡಿ) ನೊಂದಿಗೆ ಬದಲಾಯಿಸುವ ಲಾಜಿಕ್ ಅರ್ಥವಾಗುತ್ತಿಲ್ಲ. ಹೆಸರು ಮಾತ್ರ ಬದಲಾಗಿದೆ, ಆದರೆ ಸಂಯೋಜನೆ ಬದಲಾಗಿಲ್ಲ. ವಾಸ್ತವವಾಗಿ, ಅಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರೊಂದಿಗೆ ಅನೇಕ ಸಮುದಾಯಗಳಿವೆ. 4% ಮೀಸಲಾತಿಯ ಪ್ರಯೋಜನಗಳನ್ನು ನೀವು ಇತರರಿಗೆ ಹೇಗೆ ನಿರಾಕರಿಸುತ್ತೀರಿ? ಈಗ ಹಂಚುವ ಮೀಸಲಾತಿಯು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮಾತ್ರ ಸಿಗುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ? ಈ ಬಗ್ಗೆ ಅವರು ಸ್ಪಷ್ಟನೆ ನೀಡುತ್ತಿಲ್ಲ. ಅಲ್ಪಾವಧಿಯ ರಾಜಕೀಯ ಲಾಭವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...