Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಫ್ಯಾಕ್ಟ್‌‌ಚೆಕ್‌: ತಾಲಿಬಾನಿಗಳು ಕಲ್ಲಿನಿಂದ ಹೊಡೆದು ಮಹಿಳಾ ಪೈಲಟ್‌ರನ್ನು ಸಾಯಿಸಿದ್ದಾರೆ ಎಂದು ಹಳೆಯ ಪೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾದ ಮೇಲೆ ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರಾದ ಸಫಿಯಾ ಫಿರೋಜಿ ಅವರನ್ನು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸಲಾಗಿದೆ ಎಂದು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಟ್ವಿಟರ್ ಬಳಕೆದಾರರು ಇತ್ತೀಚೆಗೆ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. “ಸಫಿಯಾ ಫಿರೋಜಿ, ಅಫ್ಘಾನ್ ವಾಯುಪಡೆಯ ನಾಲ್ಕು ಮಹಿಳಾ ಪೈಲಟ್‌ಗಳಲ್ಲಿ ಒಬ್ಬರು. ಇಂದು ಬೆಳಿಗ್ಗೆ ಅವರನ್ನು ಸಾರ್ವಜನಿಕವಾಗಿ ಕಲ್ಲೆಸೆದು ಸಾಯಿಸಲಾಗಿದೆ” ಎಂದು ಆಗಸ್ಟ್ 18 ರಂದು ಸಂಗೀತಾ ಸಾಗರ್‌ ಎಂಬುವರು ಹಂಚಿಕೊಂಡಿದ್ದಾರೆ.

ಇದೇ ರೀತಿ ಹಲವು ಮಂದಿ ಈ ಚಿತ್ರವನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಕಂಡು ಬಂದದ್ದು, ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಚಿತ್ರ 2018ರಲ್ಲಿ ನಡೆದ ಪ್ರತಿಭನಟನೆಯ ವರದಿಯಲ್ಲಿ ಕಾಣಿಸಿಕೊಂಡಿದೆ.  ಇದು ಕಾಬೂಲ್‌ನಲ್ಲಿ ನಡೆದ ಫರ್ಖುಂಡಾ ಹತ್ಯಾಕಾಂಡದ ಚಿತ್ರ ಎಂಬ ವರದಿಗಳು ಸಿಕ್ಕಿವೆ.

ವರದಿಗಳ ಪ್ರಕಾರ, ಮುಗ್ಧ ಯುವತಿಯ ಹತ್ಯೆಯಾದ ಮೂರನೇ ವರ್ಷದ ಸ್ಮರಣಾರ್ಥವಾಗಿ ಸ್ಥಳೀಯರು ಫರ್ಖುಂಡಾ ಸ್ಮಾರಕದ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕಿರುಕುಳ, ಚಿತ್ರಹಿಂಸೆಗೆ ಬಲಿಯಾದ ಫರ್ಖುಂಡಾ, ರುಖ್ಶಾನಾ, ಶುಕ್ರಿಯಾ ತಬಸುಮ್, ಮಿರ್ಜಾಲಾಂಗ್ ಇತರ ಸಂತ್ರಸ್ತ ಮಹಿಳೆಯರಿಗೆ ನಡೆದ ಅನ್ಯಾಯವನ್ನು ಖಂಡಿಸುವ ಪೋಸ್ಟರ್‌ಗಳನ್ನು ಈ ವರದಿಯಲ್ಲಿ ನೋಡಬಹುದು. ಈ ಪೋಸ್ಟರ್‌ಗಳಲ್ಲಿ  ಒಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟರ್‌ನಲ್ಲಿರುವ ಮಹಿಳೆಯನ್ನು ಹೋಲುತ್ತದೆ.

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ಇನ್ನು ಮುಂದಿನ ಹುಡುಕಾಟದಿಂದ ಈ ಚಿತ್ರ ಡಿಸೆಂಬರ್ 26, 2015 ರ ದಿ ನ್ಯೂಯಾರ್ಕ್ ಟೈಮ್ಸ್ ನ ವಿಡಿಯೊದಲ್ಲಿ ದೊರಕಿದೆ. ಇದರಲ್ಲಿ ನಿರೂಪಕ “27 ವರ್ಷದ ಮುಸ್ಲಿಂ ಮಹಿಳೆ ಫರ್ಖುಂಡಾ ಮಲಿಕ್ಜಾಡಾರನ್ನು ಖುರಾನ್ ಸುಟ್ಟ ಆರೋಪದ ಮೇಲೆ ಕೊಲ್ಲಲಾಯಿತು. ಈ ಘಟನೆಯನ್ನು ಸಾವಿರಾರು ಜನರು ವೀಕ್ಷಿಸಿದರು” ಎಂದು ವಿವರಿಸುತ್ತಾರೆ.

ಮೇ 2015 ರ ಬಿಬಿಸಿ ವರದಿಯು ಫರ್ಖುಂಡಾ ಮಲಿಕ್ಜಾಡಾ ಮಾರ್ಚ್ 19 ರಂದು ನಿಧನರಾದರು ಎಂದು ತಿಳಿಸುತ್ತದೆ. ಕುರಾನ್ ಅನ್ನು ಸುಟ್ಟ ತಪ್ಪು ಆರೋಪದಲ್ಲಿ ಈಕೆಯನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ 19 ಮಂದಿ ಪೊಲೀಸ್ ಅಧಿಕಾರಿಗಳು ಸೇರಿ 49 ಜನರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌ | ನೆದರ್‌ಲ್ಯಾಂಡ್ಸ್‌‌ನ ಡಚ್‌‌‌‌‌ ವಿದ್ಯಾರ್ಥಿಗಳಿಗೆ 5 ನೇ ತರಗತಿಯಿಂದ ಭಗವದ್ಗೀತೆ ಕಡ್ಡಾಯ! – ನಿಜವೆ?

ವರದಿಯ ಪ್ರಕಾರ, “ಮೂವರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ, ಎಂಟು ಮಂದಿಗೆ 16 ವರ್ಷಗಳ ಜೈಲು ಶಿಕ್ಷೆ ಮತ್ತು ಅಪ್ರಾಪ್ತ ವಯಸ್ಕನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 11 ಪೋಲಿಸ್ ಅಧಿಕಾರಿಗಳಿಗೆ ಫರ್ಖುಂಡಾಕ್ಕೆ ಭದ್ರತೆ ನೀಡಲು ವಿಫಲವಾದ ಕಾರಣಕ್ಕೆ ತಲಾ ಒಂದು ವರ್ಷ ಶಿಕ್ಷೆ ವಿಧಿಸಲಾಗಿತ್ತು.

ವೈರಲ್ ಪೋಸ್ಟ್‌ಗಳಲ್ಲಿ ಫರ್ಖುಂಡಾ ಮಲಿಕ್ಜಾಡಾ ಅವರನ್ನು ಸಫಿಯಾ ಫಿರೋಜಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಸಫಿಯಾ ಫಿರೋಜಿ ಅಫ್ಘಾನಿಸ್ತಾನದ ಎರಡನೇ ಮಹಿಳಾ ಪೈಲಟ್ ಆಗಿ ಪ್ರಾಮುಖ್ಯತೆ ಪಡೆದಿದ್ದರು. 1990 ರಲ್ಲಿ ಫಿರೋಜಿ ಮತ್ತು ಆಕೆಯ ಕುಟುಂಬ ಕಾಬೂಲ್‌ನಿಂದ ಪಲಾಯನ ಮಾಡಿತ್ತು. 2001 ರಲ್ಲಿ ತಾಲಿಬಾನ್ ಪತನದ ನಂತರ, ಅವರು ಕಾಬೂಲ್‌ಗೆ ಮರಳಿದರು. ಆದರೆ, ಸಫಿಯಾ ಸಾವಿನ ದೃಢೀರಣಕ್ಕೆ ನಮಗೆ ಯಾವುದೇ ನಂಬಲರ್ಹವಾದ ವರದಿ ಲಭ್ಯವಾಗಿಲ್ಲ.

ಅಫ್ಘಾನಿಸ್ತಾನದ ಮೊದಲ ಮಹಿಳಾ ಪೈಲಟ್ ಹೆಸರು ನಿಲೂಫರ್ ರಹ್ಮಾನಿ, ಮಹಿಳಾ ಹಕ್ಕುಗಳ ಮೇಲೆ ತಾಲಿಬಾನ್ ಪ್ರಚಾರವನ್ನು ನಂಬಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಆದ್ದರಿಂದ, ಇದರಿಂದ ಫರ್ಖುಂಡಾ ಮಲಿಕ್ಜಾಡಾ ಅವರ ಹಳೆಯ ಚಿತ್ರವನ್ನು ಅಫ್ಘಾನಿಸ್ತಾನದ ಮಹಿಳಾ ಪೈಲಟ್ ಸಫಿಯಾ ಫಿರೋಜಿ, ತಾಲಿಬಾನಿಗಳು ಸಾರ್ವಜನಿಕವಾಗಿ ಕಲ್ಲಿನಿಂದ ಹೊಡೆದು ಸಾಯಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....