Homeಫ್ಯಾಕ್ಟ್‌ಚೆಕ್FACT CHECK : ಬಕ್ರೀದ್ ಹಬ್ಬದ ಸಂದರ್ಭ ಮುಸ್ಲಿಮರು ಕೋಣದ ತಲೆಯನ್ನು ದೇವಸ್ಥಾನದ ಆವರಣಕ್ಕೆ ಎಸೆದಿದ್ದಾರೆ...

FACT CHECK : ಬಕ್ರೀದ್ ಹಬ್ಬದ ಸಂದರ್ಭ ಮುಸ್ಲಿಮರು ಕೋಣದ ತಲೆಯನ್ನು ದೇವಸ್ಥಾನದ ಆವರಣಕ್ಕೆ ಎಸೆದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಇಬ್ಬರು ಮುಸ್ಲಿಂ ಯುವಕರು ಕತ್ತರಿಸಿದ ಕೋಣದ ತಲೆಯನ್ನು ದೇವಸ್ಥಾನದ ಆವರಣದಲ್ಲಿ ಎಸೆದು ಹೋಗಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದನ್ನು ಹಂಚಿಕೊಳ್ಳಲಾಗಿದೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಈ ಫೋಟೋ ಹಂಚಿಕೊಂಡಿರುವುದು ಕೋಮುದ್ವೇಷ ಉತ್ತೇಜಿಸುವಂತಿದೆ.

ಪೂಜಾರಿಯೊಬ್ಬರು ರಕ್ತ ಸಿಕ್ತವಾದ ಕೋಣದ ತಲೆಯನ್ನು ಎತ್ತಿಕೊಂಡಿರುವ ಫೋಟೋವನ್ನು ವಾಜಿದ್ ಖಾನ್ ಎಂಬ ಬಳಕೆದಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.ಈ ಫೋಟೋವನ್ನು ಹಂಚಿಕೊಂಡಿರುವ ಅನೇಕರು “ಕತ್ತರಿಸಿದ ಕೋಣದ ತಲೆಯನ್ನು ಇಬ್ಬರು ಮುಸ್ಲಿಮರು ದೇವಸ್ಥಾನದಲ್ಲಿ ಎಸೆದಿದ್ದರು. ಹಾಗಾಗಿ, ಪೂಜಾರಿಯೇ ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಹೀಗೆ ಮಾಡಬೇಕಾಯಿತು. ಈ ಇಸ್ಯಾಮಿಸ್ಟ್ ಅದನ್ನು ಹೇಗೆ ಗೇಲಿ ಮಾಡುತ್ತಿದ್ದಾನೆ ನೋಡಿ. ರಕ್ತಸಿಕ್ತ ಸೆಕ್ಯುಲರಿಸಂ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಅಸ್ಸಾಂನ ಧಾರ್ಮಿಕ ಆಚರಣೆಯೊಂದರ ಹಳೆಯ ಫೋಟೋ ಎಂದು ತಿಳಿದು ಬಂದಿದೆ.

ಸೆಪ್ಟೆಂಬರ್ 2017ರಲ್ಲಿ ದುರ್ಗಾ ಪೂಜೆಯ ಸಂದರ್ಭದಲ್ಲಿ ಅಸ್ಸಾಂನ ಬೆಲ್ಸೋರ್‌ನ ಬಿಲ್ಲೇಶ್ವರ ದುರ್ಗಾ ದೇವಸ್ಥಾನದಲ್ಲಿ ಧಾರ್ಮಿಕ ಆಚರಣೆಯ ಭಾಗವಾಗಿ ಪ್ರಾಣಿ ಬಲಿಯಲ್ಲಿ ಭಾಗವಹಿಸಿದ ಭಕ್ತನ ಫೋಟೋ ಎಂದು ತಿಳಿದು ಬಂದಿದೆ.

ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ವೈರಲ್ ಫೋಟೋವನ್ನು ಹುಡುಕಾಡಿದಾಗ “ನವಮಿ ದುರ್ಗಾ ಪೂಜೆ ಹಬ್ಬದ ಸಂದರ್ಭದಲ್ಲಿ ಹಿಂದೂ ದೇವತೆ ದುರ್ಗೆಯ ಬಿಲ್ಲೇಶ್ವರ ದೇವಸ್ಥಾನದಲ್ಲಿ ಕೋಣ ಬಲಿ ನೀಡಲಾಗಿದೆ” ಎಂಬ ಶೀರ್ಷಿಕೆಯೊಂದಿಗೆ ಗೆಟ್ಟಿ ಇಮೇಜಸ್ ಫೋಟೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ “28 ಸೆಪ್ಟೆಂಬರ್ 2017 ರಂದು ಟೈಮ್ಸ್ ಆಫ್ ಇಂಡಿಯಾದಲ್ಲಿ ‘500 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ ಕೋಣ ಬಲಿಯು ನಿರಾತಂಕವಾಗಿ ಮುಂದುವರಿಯುತ್ತಿದೆ’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ, ವೈರಲ್ ಫೋಟೋ ಅಸ್ಸಾಂನ ಬೆಲ್ಸೋರ್‌ನ ಬಿಲ್ಲೇಶ್ವರ ದುರ್ಗಾ ದೇವಸ್ಥಾನದಲ್ಲಿ 2017ರಲ್ಲಿ ನವಮಿ ದುರ್ಗಾ ಪೂಜೆ ಉತ್ಸವದ ಸಮಯದಲ್ಲಿ ಕೋಣ ಬಲಿ ಕೊಟ್ಟಿರುವ ಫೋಟೋ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...